ಸರ್ಕಾರದ ಆದೇಶದ ವಿರುದ್ಧ ದಕ್ಷಿಣ ಭಾರತದ ಸಕ್ಕರೆ ಕಾರ್ಖಾನೆಗಳು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿರುವ ಹಿನ್ನೆಲೆ, ನ್ಯಾಯಾಲಯದ ಅಂತಿಮ ತೀರ್ಪು ಬರುವವರೆಗೆ ಕಾರ್ಖಾನೆಗಳ ಪಾಲಿನ 50 ರೂ ಅನ್ನು ಕಾಯ್ದಿರಿಸಲು ಸೂಚಿಸಲಾಗಿದೆ. ಸರ್ಕಾರದ ಪಾಲಿನ 50 ರೂ ಅನುದಾನವನ್ನು ಸಂಬಂಧಿತ ಜಿಲ್ಲಾಧಿಕಾರಿಯಿಂದ ಪಡೆದು ಸಕ್ಕರೆ ಕಾರ್ಖಾನೆಗಳು ತಮ್ಮ ಮೂಲಕವೇ ರೈತರಿಗೆ ತಕ್ಷಣವೇ ಪಾವತಿಸುವಂತೆ ಆಯುಕ್ತರು ನಿರ್ದೇಶನ ನೀಡಿದ್ದಾರೆ. ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳಿಗೆ ಸರ್ಕಾರದ ಪಾಲಿನ 50 ರೂ ಸಹಾಯಧನವನ್ನು ಯಾವುದೇ ವಿಳಂಬವಿಲ್ಲದೆ ರೈತರಿಗೆ ತಕ್ಷಣ ಪಾವತಿಸಲು ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ತಿಳಿಸಿದರು.