ಮಾ.7ರಂದು ನಗರದಲ್ಲಿ ವಿಚಾರ ಸಂಕಿರಣ: ಜಿಲ್ಲಾಧಿಕಾರಿ ಡಾ.ಕುಮಾರ ಮಾಹಿತಿ

ಮಂಡ್ಯದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿದರು.
ಮಂಡ್ಯದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ಅಸ್ಪೃಶ್ಯತೆ ನಿವಾರಣೆ ಕುರಿತು ವಿಚಾರ ಸಂಕಿರಣ
  • ಶಿಷ್ಠಾಚಾರದಂತೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು
ಮಂಡ್ಯ: ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಾ.7ರಂದು ಅಸ್ಪೃಶ್ಯತೆ ನಿವಾರಣೆ ಕುರಿತು ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ಉತ್ತಮವಾಗಿ ಆಯೋಜನೆ ಮಾಡಲು ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಸ್ಪೃಶ್ಯತಾ ನಿವಾರಣೆ ಕುರಿತ ವಿಚಾರ ಸಂಕಿರಣ ಆಯೋಜನೆಯಲ್ಲಿ ಎಲ್ಲ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಬೇಕು. ಅಂತೆಯೇ ಶಿಷ್ಠಾಚಾರದಂತೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು ತಿಳಿಸಿದರು.
ಅಸ್ಪೃಶ್ಯತಾ ನಿವಾರಣೆ ಕುರಿತ ವಿಚಾರ ಸಂಕಿರಣ, ಸಮಾಜದಲ್ಲಿನ ಅಸಮಾನತೆ ತೊಡೆದು ಹಾಕಲು, ಕಾನೂನು ಅರಿವು ಮೂಡಿಸಲು ಮತ್ತು ತಾರತಮ್ಯದ ವಿರುದ್ಧ ಜಾಗೃತಿ ಮೂಡಿಸಲು ಸಮಾಜ ಕಲ್ಯಾಣ ಇಲಾಖೆ, ಸಂಘಟನೆಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾಗುವ ಪ್ರಮುಖ ಕಾರ್ಯಕ್ರಮವಾಗಿದೆ ಎಂದು ವಿವರ ನೀಡಿದರು.
ಸಭೆಯಲ್ಲಿ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ಪಿ.ಪ್ರಕಾಶ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ್, ಜಿಲ್ಲಾ ಉಸ್ತುವಾರಿ ಸಚಿವರ ಮಾಧ್ಯಮ ಸಮನ್ವಯಾಧಿಕಾರಿ ಸೋಮಶೇಖರ್ ಕೆರೆಗೋಡು, ಸಂಘಟನೆ ಸಂಚಾಲಕರಾದ ಬಿ.ಟಿ.ವಿಶ್ವನಾಥ್, ಗಂಗಾಧರ್, ವಿಜಯಕುಮಾರ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net