ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಚ್‌ಪಿಸಿ, ಬಿಪಿಸಿ ಮತ್ತು ಐಒಸಿ ಇಂಧನ ವಿತರಕ ಕಂಪನಿ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪೆಟ್ರೋಲಿಯಂ ಉತ್ಪನ್ನಗಳಾದ ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಸಿಲಿಂಡರ್‌ಗಳನ್ನು ಅಕ್ರಮವಾಗಿ ದಾಸ್ತಾನು ಮಾಡುವುದು ಕಾನೂನುಬಾಹಿರ ಮತ್ತು ಅಪಾಯಕಾರಿ. ಇದು ಶಿಕ್ಷಾರ್ಹ ಅಪರಾಧವಾಗಿದ್ದು, ಅಸುರಕ್ಷಿತ ಸಂಗ್ರಹವು ಭೀಕರ ಅಗ್ನಿ ಅವಘಡಗಳಿಗೆ ಕಾರಣವಾಗಬಹುದು ಎಂದು ತಿಳಿಸಿದರು.