ಅನಿಲ ಸರಬರಾಜಿನಲ್ಲಿ ವ್ಯತ್ಯಯವಿಲ್ಲ, ಆತಂಕಬೇಡ: ಜಿಲ್ಲಾಧಿಕಾರಿ ಡಾ.ಕುಮಾರ ಸ್ಪಷ್ಟನೆ

ಮಂಡ್ಯದಲ್ಲಿ ಅನಿಲ ವಿತರಕ ಕಂಪನಿ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿದರು.
ಮಂಡ್ಯದಲ್ಲಿ ಅನಿಲ ವಿತರಕ ಕಂಪನಿ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ಅನಿಲ ವಿತರಕ ಕಂಪನಿ ಅಧಿಕಾರಿಗಳೊಂದಿಗೆ ಸಭೆ
  • ಬೇಡಿಕೆಗೆ ತಕ್ಕಂತೆ ಗೃಹ ಬಳಕೆಯ ಅನಿಲ ಸರಬರಾಜು ಮಾಡಲು ಕ್ರಮ ವಹಿಸಿ
ಮಂಡ್ಯ: ಗೃಹ ಬಳಕೆಯ ಅನಿಲ ಸರಬರಾಜು ಮತ್ತು ವಿತರಣೆ ಕುರಿತಂತೆ ಸರ್ಕಾರ ನೀಡುವ ಮಾರ್ಗಸೂಚಿಗಳನ್ನು ಅನಿಲ ವಿತರಕ ಕಂಪನಿಯ ಮಾರಾಟಗಾರರು ಪಾಲಿಸಬೇಕು. ಹಾಗೂ ಎಲ್ಲ ಕಂಪನಿಗಳು ಜಿಲ್ಲೆಯ ದೈನಂದಿನ ಬೇಡಿಕೆಗೆ ತಕ್ಕಂತೆ ಗೃಹ ಬಳಕೆಯ ಅನಿಲ ಸರಬರಾಜು ಮಾಡಲು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಚ್‌ಪಿಸಿ, ಬಿಪಿಸಿ ಮತ್ತು ಐಒಸಿ ಅನಿಲ ವಿತರಕ ಕಂಪನಿ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 34 ಅನಿಲ ವಿತರಣೆ ಕಂಪನಿಯ ಮಾರಾಟಗಾರರಿದ್ದಾರೆ. ಅದರಂತೆ ಆಹಾರ ಇಲಾಖೆಯ ಅಧಿಕಾರಿಗಳು ನಿಯಾಮನುಸಾರ ಸ್ಧಳಕ್ಕೆ ಹೋಗಿ ದಾಸ್ತಾನು ಪರಿಶೀಲನೆ ಮಾಡಬೇಕು. ಅಕ್ರಮ ಮಾರಾಟ ಮಾಡುವುದು. ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡುಬಂದರೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಾರ್ವಜನಿಕರು ಗೃಹ ಬಳಕೆ ಅನಿಲ ಮುಂಗಡ ಬುಕಿಂಗ್ ಮಾಡಿದಾಗ ಏಜೆನ್ಸಿ ಅವರು ನಿಯಾಮನುಸಾರ ಹಾಗೂ ಆದ್ಯತೆಯ ಮೇರೆಗೆ ವಿತರಣೆ ಮಾಡಬೇಕು. ಜಿಲ್ಲೆಯಲ್ಲಿ ಗೃಹಬಳಕೆಯ ಅನಿಲ ಸರಬರಾಜು ವ್ಯವಸ್ಥೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಇಲ್ಲ. ಗೃಹಬಳಕೆ ಅನಿಲದ ದೈನಂದಿನ ಸರಬರಾಜು ಮತ್ತು ವಿತರಣೆಯಲ್ಲಿ ಯಾವುದೇ ಅಡಚಣೆ ಇಲ್ಲದೇ ಎಂದಿನಂತೆ ನಡೆಯುತ್ತಿದೆ. ಸಾರ್ವಜನಿಕರು ಯಾವುದೇ ರೀತಿಯ ಅನಗತ್ಯ ಗೊಂದಲ ಮತ್ತು ಆತಂಕಗಳಿಗೆ ಒಳಗಾಗಬಾರದು. ಜಿಲ್ಲೆಯಲ್ಲಿನ ಅಂಗನವಾಡಿ, ಶಾಲೆಗಳು, ಆಸ್ಪತ್ರೆಗಳು, ಸರ್ಕಾರಿ ಹಾಸ್ಟೆಲ್‌ಗಳಿಗೆ ದೈನಂದಿನ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗದಂತೆ ಆಧ್ಯತೆಯಲ್ಲಿ ಅನಿಲ ಸರಬರಾಜು ಮಾಡುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಪ್ರತೀಕ ಹೆಗ್ಡೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net