ತಾಂತ್ರಿಕ ಲೋಪ ಎಸಗಿದ್ದ ಬಿಎಲ್‌ಒಗೆ ಡಿಸಿ ತರಾಟೆ

ನಾಗಮಂಗಲ ಪಟ್ಟಣದ ಟಿಬಿ ಬಡಾವಣೆಯಲ್ಲಿ ಎಸ್‌ಐಆರ್ ನೊಂದಣಿ ಪ್ರಕ್ರಿಯೆ ನಡೆಯುತ್ತಿದ್ದ ಮತದಾರರ ಮನೆಗೆ ಜಿಲ್ಲಾಧಿಕಾರಿ ಡಾ.ಕುಮಾರ್ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ನಾಗಮಂಗಲ ಪಟ್ಟಣದ ಟಿಬಿ ಬಡಾವಣೆಯಲ್ಲಿ ಎಸ್‌ಐಆರ್ ನೊಂದಣಿ ಪ್ರಕ್ರಿಯೆ ನಡೆಯುತ್ತಿದ್ದ ಮತದಾರರ ಮನೆಗೆ ಜಿಲ್ಲಾಧಿಕಾರಿ ಡಾ.ಕುಮಾರ್ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
Published on
ನಾಗಮಂಗಲ: ಪುರಸಭೆ ವ್ಯಾಪ್ತಿಯಲ್ಲಿ ಎಸ್‌ಐಆರ್ ನೋಂದಣಿ ಪ್ರಕ್ರಿಯೆ ನಡೆಯುತ್ತಿದ್ದ ಮತದಾರರ ಮನೆಗೆ ಜಿಲ್ಲಾಧಿಕಾರಿ ಡಾ.ಕುಮಾರ್ ಶನಿವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಮತದಾರರಿಂದ ಮಾಹಿತಿ ಪಡೆದರು. ಈ ಸಂದರ್ಭ ಎಸ್‌ಐಆರ್ ನೋಂದಣಿಯಲ್ಲಿ ಕೆಲವು ತಾಂತ್ರಿಕವಾಗಿ ತಪ್ಪು ಮಾಡಿದ್ದ ಬಿಎಲ್‌ಒ ಅನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಪಟ್ಟಣದ ಟಿಬಿ ಬಡಾವಣೆಯ ಎಸ್‌ಎಸಿ ಕಾಲೇಜು ರಸ್ತೆಯಲ್ಲಿ ಪುರಸಭೆ ಅಧಿಕಾರಿಗಳು ಎಸ್‌ಐಆರ್ ನೋಂದಣಿ ಕಾರ್ಯ ನಡೆಸುತ್ತಿದ್ದ ಮಾಹಿತಿ ಪಡೆದ ಜಿಲ್ಲಾಧಿಕಾರಿ ದಿಢೀರ್ ಭೇಟಿ ನೀಡಿ ಮತದಾರರಿಂದ ಎಸ್‌ಐಆರ್ ಸಂಬಂಧಿತ ಮಾಹಿತಿ ಪಡೆದರು. ಈ ಸಂದರ್ಭ ಮತದಾರರು ಭರ್ತಿ ಮಾಡಿದ್ದ ಎಸ್‌ಐಆರ್ ಫಾರ್ಮನ್ನು ಪಡೆದು ಕೆಲ ಮಾಹಿತಿ ಪಡೆದು ಮ್ಯಾಪಿಂಗ್ ಆಗಿರುವುದನ್ನು ಪರಿಶೀಲನೆ ನಡೆಸಿದರು. ಮ್ಯಾಪಿಂಗ್ ಸಂದರ್ಭದಲ್ಲಿ ಕೆಲವು ತಾಂತ್ರಿಕ ಲೋಪದೋಷಗಳು ಕಂಡುಬಂದ ಹಿನ್ನೆಲೆ ಸಂಬಂಧಿಸಿದ ಬಿಎಲ್‌ಒ ಅನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಮ್ಯಾಪಿಂಗ್‌ನಲ್ಲಿ ತಪ್ಪು ಮಾಹಿತಿ ನಮೂದಿಸಿದ್ದರಿಂದ ಬಿಎಲ್‌ಒ ವಿರುದ್ಧ ಗರಂ ಆದ ಡಿಸಿ, ಬಿಎಲ್‌ಒ ಬಳಿ ಕೆಲವು ಮಾಹಿತಿ ಕೇಳಿದಾಗ ಸರಿಯಾದ ಮಾಹಿತಿ ನೀಡಲು ಬಿಎಲ್‌ಒ ತಡಬಡಾಯಿಸಿದರು. ಇದಕ್ಕೆ ಮತ್ತಷ್ಟು ಸಿಟ್ಟಾದ ಡಿಸಿ ಪುರಸಭೆ ಮುಖ್ಯಾಧಿಕಾರಿಗೆ ಬಿಎಲ್‌ಒ ಅನ್ನು ತೆಗೆದು ಬೇರೆ ಬಿಎಲ್‌ಒ ನಿಯೋಜಿಸುವಂತೆ ಸೂಚಿಸಿದರು.
ಈ ಮತಗಟ್ಟೆಯಲ್ಲಿ ಕೇವಲ ಶೇ.53 ಅಷ್ಟೇ ಎಸ್‌ಐಆರ್ ನೋಂದಣಿ ಪ್ರಕ್ರಿಯೆಯಾಗಿದ್ದು, ತಾಲೂಕಿನಲ್ಲಿಯೇ ಅತಿ ಕಡಿಮೆ ಪ್ರಗತಿ ಸಾಧಿಸಿರುವ ಮತಗಟ್ಟೆಯಾಗಿದೆ. ಇಂತಹವುಗಳನ್ನು ಪರಿಶೀಲಿಸಿ ಪ್ರಗತಿ ಸಾಧಿಸಲು ಕ್ರಮವಹಿಸಿ, ಅನುಭವಿ ಬಿಎಲ್‌ಒಗಳನ್ನು ನಿಯೋಜಿಸಿ ಆದಷ್ಟು ಬೇಗ ಎಸ್‌ಐಆರ್ ನೋಂದಣಿ ಪ್ರಕ್ರಿಯೆ ಮುಗಿಸಿ ಎಂದು ತಹಸೀಲ್ದಾರ್ ಹಾಗೂ ಪುರಸಭೆ ಮುಖ್ಯಾಧಿಕಾರಿಗೆ ಸೂಚಿಸಿದರು.
ತಹಸೀಲ್ದಾರ್ ಅಶೋಕ್, ತಾ.ಪಂ.ಇಒ ಸತೀಶ್, ಪುರಸಭೆ ಮುಖ್ಯಾಧಿಕಾರಿ ವೀಣಾ, ರಾಜಸ್ವ ನಿರೀಕ್ಷಕ ಗೋವಿಂದರಾಜು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net