ಮಳವಳ್ಳಿ ತಾಲೂಕಿನ ಪೂರಿಗಾಲಿ ಗ್ರಾಮದಲ್ಲಿ ಸೋಮವಾರ ಶಾಸಕ ಪಿಂ.ಎಂ.ನರೇಂದ್ರಸ್ವಾಮಿ ಸಹೋದರ ಪಿ.ಎಂ.ಪರಶಿವಮೂರ್ತಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಪಡೆದರು. ಹಲವು ಗಣ್ಯರು ಇದ್ದರು.
ಮಳವಳ್ಳಿ : ಹಿರಿಯ ಕಾಂಗ್ರೆಸ್ ಮುಖಂಡ ಪಿ.ಎಂ. ಪರಶಿವ ಮೂರ್ತಿ (60) ಹೃದಯಾಘಾತದಿಂದ ಮಂಗಳವಾರ ಬೆಳಗಿನ ಜಾವ ನಿಧನರಾದರು. ಇವರಿಗೆ ತಾಯಿ ಮಹದೇವಮ್ಮ, ಪತ್ನಿ ಜ್ಯೋತಿ, ಒಬ್ಬ ಪುತ್ರ ಮತ್ತು ಒಬ್ಬ ಪುತ್ರಿ ಹಾಗೂ ಸಹೋದರ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಇದ್ದಾರೆ.
ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ:
ಕಳೆದ ಎರಡು ದಿನಗಳ ಹಿಂದೆ ಶಾಸಕ ಪಿ.ಎಂ.ನರೇಂದ್ರ ಸ್ವಾಮಿ ಪುತ್ರಿ ವಿವಾಹ ಬೆಂಗಳೂರಿನ ಅರಮನೆ ಮೈದಾನದಲ್ಲಿ ವಿಜೃಂಭಣೆಯಿಂದ ಜರುಗಿತ್ತು. ಏ.29 ರಂದು ಶಾಸಕರ ಸ್ವಗ್ರಾಮ ಪೂರಿಗಾಲಿಯಲ್ಲಿ ಬೀಗರ ಔತಣಕೂಟಕ್ಕೆ ಸಕಲ ಸಿದ್ಧತೆ ನಡೆದಿದ್ದವು. ವಿವಾಹ ಕಾರ್ಯಕ್ರಮದಲ್ಲಿ ಮುಂಚೂಣಿಯಲ್ಲಿ ನಿಂತು ಗಣ್ಯರನ್ನು ಸ್ವಾಗತಿಸಿ ಸಡಗರದಿಂದ ಭಾಗಿಯಾಗಿದ್ದ ಪರಶಿವಮೂರ್ತಿ
ಸಾವು ಇಡೀ ಕುಟುಂಬಕ್ಕೆ ಆಘಾತವನ್ನುಂಟು ಮಾಡಿದೆ. ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.
ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೇರಿದಂತೆ ಹಲವು ಶಾಸಕರು , ಗಣ್ಯರು ಮೃತರ ಅಂತಿಮ ದರ್ಶನ ಪಡೆದರು. ಸಂಜೆಯ ವೇಳೆಗೆ ಸ್ವಗ್ರಾಮದ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿತು.