ಕಬ್ಬಿನ ಬಾಕಿ ಹಣ ಪಾವತಿಗೆ ಆಗ್ರಹ

ಮದ್ದೂರು ನಗರದ ಕಸ್ತೂರಿ ಕರ್ನಾಟಕ ಜನಪರ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ವಿ.ಸಿ.ಉಮಾಶಂಕರ್, ಸೊ.ಶಿ.ಪ್ರಕಾಶ್, ಪ್ರಭುಲಿಂಗು, ನಾಗರಾಜು, ರಾಮಲಿಂಗೇಗೌಡ, ಮಲ್ಲೇಶ್, ಶಿವಣ್ಣ, ಶಿವಲಿಂಗಯ್ಯ ಇದ್ದರು.
ಮದ್ದೂರು ನಗರದ ಕಸ್ತೂರಿ ಕರ್ನಾಟಕ ಜನಪರ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ವಿ.ಸಿ.ಉಮಾಶಂಕರ್, ಸೊ.ಶಿ.ಪ್ರಕಾಶ್, ಪ್ರಭುಲಿಂಗು, ನಾಗರಾಜು, ರಾಮಲಿಂಗೇಗೌಡ, ಮಲ್ಲೇಶ್, ಶಿವಣ್ಣ, ಶಿವಲಿಂಗಯ್ಯ ಇದ್ದರು.
Published on
ಮದ್ದೂರು: ಸಕ್ಕರೆ ಕಾರ್ಖಾನೆಗಳು ಉಳಿಸಿಕೊಂಡಿರುವ ಬಾಕಿ ಹಣವನ್ನು ತಕ್ಷಣ ಬಿಡುಗಡೆಗೊಳಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಎಚ್.ಜಿ.ಪ್ರಭುಲಿಂಗ ತಿಳಿಸಿದರು.
ನಗರದ ಕಸ್ತೂರಿ ಕರ್ನಾಟಕ ಜನಪರ ಕಚೇರಿ ಆವರಣದಲ್ಲಿ ಗುರುವಾರ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕಸ್ತೂರಿ ಕರ್ನಾಟಕ ಜನಪರ ವೇದಿಕೆಯಿಂದ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿ, 2022-23ನೇ ಸಾಲಿನಲ್ಲಿ 150 ರೂ. ಬಾಕಿ ಹಣ, 24-25 ಸಾಲಿನಲ್ಲಿ ಸರ್ಕಾರ ಘೋಷಿಸಿರುವ 100 ರೂ. ಪ್ರೋತ್ಸಾಹ ಧನ ಬಿಡುಗಡೆಗೊಳಿಸಿಲ್ಲ. 26-27ನೇ ಸಾಲಿನಲ್ಲಿ ಕಬ್ಬು ಅರೆಯುವಿಕೆಗೆ ಕಾರ್ಖಾನೆಗಳು ಈಗಾಗಲೇ ಸಿದ್ಧತೆ ಮಾಡಿಕೊಂಡಿದ್ದು ಬಾಕಿ ಹಣ ಪಾವತಿಸದೆ ಯಾವುದೇ ಕಾರಣಕ್ಕೂ ಕಾರ್ಖಾನೆ ಪ್ರಾರಂಭ ಮಾಡುವುದಕ್ಕೆ ಅವಕಾಶ ಕೊಡುವುದಿಲ್ಲ ಎಂದು ಎಚ್ಚರಿಸಿದರು.
ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ ಮಾತನಾಡಿ, ರಾಜ್ಯ ಸರ್ಕಾರ ಸಾಮಾಜಿಕ ಭದ್ರತಾ ಯೋಜನೆಗಳ ಮಾಸಾಶನವನ್ನು ಮೂರು ತಿಂಗಳಿಗಳಿಂದ ಬಿಡುಗಡೆಗೊಳಿಸಿಲ್ಲ. ಇದರಿಂದ ಫಲಾನುಭವಿಗಳು ಸಂಕಷ್ಟದಲ್ಲಿದ್ದಾರೆ. ಸರ್ಕಾರ ಗಂಭೀರವಾಗಿ ಪರಿಗಣಿಸಿ ಪಿಂಚಣಿ ಹಣ ಬಿಡುಗಡೆಗೊಳಿಸುವಂತೆ ಆಗ್ರಹಿಸಿದರು.
ರಾಷ್ಟ್ರೀಕೃತ ಮತ್ತು ಖಾಸಗಿ ಬ್ಯಾಂಕ್‌ಗಳು ರೈತ ಪಡೆದ ಸಾಲಕ್ಕೆ ಸುಸ್ತಿ ಬಡ್ಡಿ ವಿಧಿಸಿ ನ್ಯಾಯಾಲಯಗಳಿಗೆ ಮೊಕದ್ದಮೆ ಹೂಡಲು ಮುಂದಾಗಿರುವುದು ರೈತರಿಗೆ ಮಾಡಿದ ದ್ರೋಹವಾಗಿದೆ. ಜಿಲ್ಲಾಡಳಿತ ಬ್ಯಾಂಕ್ ವ್ಯವಸ್ಥಾಪಕರ ಸಭೆ ಕರೆದು ಅನ್ಯಾಯ ಸರಿಪಡಿಸುವಂತೆ ಒತ್ತಾಯಿಸಲು ಮನವಿ ಮಾಡಿದರು.
ಜಿಲ್ಲಾ ಪತ್ರಿಕಾ ಕಾರ್ಯದರ್ಶಿ ಸೊ.ಸಿ.ಪ್ರಕಾಶ್ ಮಾತನಾಡಿ, ಕೇಂದ್ರ ಸರ್ಕಾರ ರಾಸಾಯನಿಕ ಗೊಬ್ಬರದ ದರ ದುಪ್ಪಟ್ಟು ಹೇರಿಕೆ ಮಾಡಿದ್ದು ರೈತರ ಬೇಸಾಯದ ಮೇಲೆ ಪರಿಣಾಮ ಬೀರುತ್ತಿದೆ. ಕೇಂದ್ರ ಸರ್ಕಾರ ಸಂಕಷ್ಟದಲ್ಲಿರುವ ರೈತರನ್ನು ಪಾರು ಮಾಡುವಂತೆ ಒತ್ತಾಯಿಸಿದರು.
ಕುದುರಗುಂಡಿ ನಾಗರಾಜು, ರಾಮಲಿಂಗೇಗೌಡ, ಮಲ್ಲೇಶ್, ಶಿವಣ್ಣ, ರೇಷ್ಮೆಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಶಿವಲಿಂಗಯ್ಯ, ಕಸ್ತೂರಿ ಕರ್ನಾಟಕ ಜನಪರ ವೇದಿಕೆ ವೇದಿಕೆ ಪದಾಧಿಕಾರಿಗಳಾದ ಕೋಣಸಾಲೆ ಕೃಷ್ಣ, ಸಿದ್ದರಾಮ, ಶಿವಣ್ಣ, ವಿ.ಪಿ.ವರದರಾಜು, ರಾಮಪ್ಪ ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net