ಮೇಲ್ಮನವಿ ಸಲ್ಲಿಸಲು ಆಗ್ರಹ

ರೈತ ಹಾಗೂ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಕೆ.ಎ.ದೊಡ್ಡಿಯ ವಿಶ್ವೇಶ್ವರಯ್ಯ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.
ರೈತ ಹಾಗೂ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಕೆ.ಎ.ದೊಡ್ಡಿಯ ವಿಶ್ವೇಶ್ವರಯ್ಯ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.
Published on
ಕೆ.ಎಂ.ದೊಡ್ಡಿ: ತಮಿಳುನಾಡಿಗೆ ನೀರು ಹರಿಸದಂತೆ ಒತ್ತಾಯಿಸಿ ರೈತರು ಹಾಗೂ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ವಿಶ್ವೇಶ್ವರಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ರೈತ ಸಂಘದ ಜಿಲ್ಲಾ ಮುಖಂಡ ಸೋ.ಸಿ.ಪ್ರಕಾಶ್ ಮಾತನಾಡಿ, ಕಾವೇರಿ ನಮ್ಮ ಹಕ್ಕು. ಪ್ರತಿ ಬಾರಿಯೂ ತಮಿಳುನಾಡು ಕ್ಯಾತೆ ತೆಗೆಯುತ್ತದೆ. ಪ್ರತಿ ವರ್ಷ ಕಾವೇರಿ ನೀರಿಗಾಗಿ ರೈತರು ಬೀದಿಗಿಳಿದರೂ ಸರ್ಕಾರ ಶಾಶ್ವತ ಪರಿಹಾರಕ್ಕೆ ಪ್ರಯತ್ನಿಸದೆ ಕಣ್ಣುಮುಚ್ಚಿ ಕುಳಿತಿದೆ. ಮಂಡಳಿಯ ಕೈಗೊಂಬೆಯಾಗಿ ವರ್ತಿಸದೆ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಬೇಕು ಎಂದು ಆಗ್ರಹಿಸಿದರು.
ರೈತ ಸಂಘದ ತಾಲೂಕು ಅಧ್ಯಕ್ಷ ದೇವಿಪುರ ಬಸವರಾಜು ಮಾತನಾಡಿ, ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಸಮಸ್ಯೆ ಇದೆ. ಈ ಸಮಯದಲ್ಲಿ ತಮಿಳುನಾಡಿಗೆ ನೀರು ಹರಿಸಲು ಹೇಳಿರುವುದು ಸರಿಯಲ್ಲ ಎಂದರು.
ತಾಲೂಕು ಉಪಾಧ್ಯಕ್ಷ ಕುರಿಕೆಂಪನದೊಡ್ಡಿ ರಾಮಲಿಂಗೇಗೌಡ, ತಮಿಳುನಾಡಿಗೆ ನೀರು ಹರಿಸಿದರೆ 5 ಜಿಲ್ಲೆಗಳಿಗೆ ಕುಡಿಯುವ ನೀರಿಗೂ ಪರದಾಡುವ ಪರಿಸ್ಥಿತಿ ಎದುರಾಗುತ್ತದೆ. ಯಾವುದೇ ಕಾರಣಕ್ಕೂ ನೀರು ಬಿಡುವುದಿಲ್ಲ ಎಂದು ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ತಾಲೂಕು ಕಾರ್ಯದರ್ಶಿ, ಪುಟ್ಟಸ್ವಾಮಿ, ಸಮತಾ ಸೈನಿಕ ದಳ ಜಿಲ್ಲಾಧ್ಯಕ್ಷ ಕರಡಕೆರೆ ಯೋಗೇಶ್, ಮಲ್ಲೇಶ, ಬಿಳೀಗೌಡ, ಅಂದಾನಿ, ರಾಮಣ್ಣ, ಶಿವಣ್ಣ, ರಾಮಣ್ಣ, ಚೌಡೇಗೌಡ, ತಮ್ಮಯ್ಯ ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net