ಹೇಮಾವತಿಯಿಂದ ನಾಲೆಗಳಿಗೆ ನೀರು ಹರಿಸಲು ಒತ್ತಾಯ

ಹೇಮಾವತಿ ನದಿಯಿಂದ ಒಂದು ಕಂತು ನೀರು ಹರಿಸುವಂತೆ ತಾಲೂಕಿನ ಕೃಷಿ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎಸ್ ದೀಪಕ್‌ಗೆ  ತಾಲೂಕು ರೈತ ಸಂಘ ಮನವಿ ಸಲ್ಲಿಸಿತು. ಕಾರಿಗನಹಳ್ಳಿ ಪುಟ್ಟೇಗೌಡ, ಎಲ್.ಬಿ.ಜಗದೀಶ್, ಹಕ್ಕಿಮಂಚನಹಳ್ಳಿ ಹೊನ್ನೇಗೌಡ, ಚೌಡೇನಹಳ್ಳಿ ಕೃಷ್ಣೇಗೌಡ ಇತರರಿದ್ದರು.
ಹೇಮಾವತಿ ನದಿಯಿಂದ ಒಂದು ಕಂತು ನೀರು ಹರಿಸುವಂತೆ ತಾಲೂಕಿನ ಕೃಷಿ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎಸ್ ದೀಪಕ್‌ಗೆ ತಾಲೂಕು ರೈತ ಸಂಘ ಮನವಿ ಸಲ್ಲಿಸಿತು. ಕಾರಿಗನಹಳ್ಳಿ ಪುಟ್ಟೇಗೌಡ, ಎಲ್.ಬಿ.ಜಗದೀಶ್, ಹಕ್ಕಿಮಂಚನಹಳ್ಳಿ ಹೊನ್ನೇಗೌಡ, ಚೌಡೇನಹಳ್ಳಿ ಕೃಷ್ಣೇಗೌಡ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಹಾಯಕ ಕೃಷಿ ನಿರ್ದೇಶಕರಿಗೆ ತಾಲೂಕು ರೈತ ಸಂಘ ಮನವಿ
ಕೆ.ಆರ್.ಪೇಟೆ: ತಾಲೂಕಿನ ಮಂದಗೆರೆ ಎಡ ಮತ್ತು ಬಲದಂಡೆ ನಾಲಾ ವ್ಯಾಪ್ತಿಯಲ್ಲಿ ಬೆಳೆದು ನಿಂತಿರುವ ಕಬ್ಬು ಮತ್ತಿತರ ಬೆಳೆಗಳ ಸಂರಕ್ಷಣೆಗೆ ಹೇಮಾವತಿ ನದಿಯಿಂದ ಒಂದು ಕಂತು ನೀರು ಹರಿಸಲು ನೀರಾವರಿ ಇಲಾಖೆ ಜತೆ ವ್ಯವಹರಿಸಿ ಕ್ರಮ ಕೈಗೊಳ್ಳುವಂತೆ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರಿಗೆ ತಾಲೂಕು ರೈತ ಸಂಘ ಮನವಿ ಸಲ್ಲಿಸಿತು.
ತಾಲೂಕು ರೈತ ಸಂಘದ ಅಧ್ಯಕ್ಷ ಕಾರಿಗನಹಳ್ಳಿ ಪುಟ್ಟೇಗೌಡ ನೇತೃತ್ವದಲ್ಲಿ ತಾಲೂಕಿನ ಕೃಷಿ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎಸ್.ದೀಪಕ್ ಅವರನ್ನು ಭೇಟಿ ಮಾಡಿದ ರೈತ ಮುಖಂಡರು, ಕೇವಲ ಬಿತ್ತನೆ ಬೀಜ, ಕಳೆನಾಶಕ, ರಸಗೊಬ್ಬರ ಹಂಚಿಕೆ ಮಾಡುವುದಷ್ಟೇ ಕೃಷಿ ಇಲಾಖೆಯ ಕೆಲಸವಲ್ಲ. ಬದಲಾಗಿ ಅಳಿದುಳಿದ ಬೆಳೆ ಸಂರಕ್ಷಣೆಗೂ ಮುಂದಾಗಬೇಕೆಂದು ಆಗ್ರಹಿಸಿದರು.
ತಾಲೂಕಿನ ಮಂದಗೆರೆ ಮತ್ತು ಹೇಮಗಿರಿ ಬಳಿ ಮೈಸೂರು ಅರಸರು ಒಂದು ಶತಮಾನದ ಹಿಂದೆಯೇ ಹೇಮಾವತಿ ನದಿಗೆ ಅಡ್ಡಲಾಗಿ ಒಡ್ಡು ಅಣೆಕಟ್ಟೆಗಳನ್ನು ನಿರ್ಮಿಸಿ ರೈತರ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡಿದ್ದಾರೆ.
ಮಳೆಗಾಲದಲ್ಲಿ ಹರಿಯುವ ನದಿ ನೀರನ್ನು ಸದ್ಬಳಕೆ ಮಾಡಿಕೊಂಡು ಈ ಅಣೆಕಟ್ಟೆ ನಾಲಾ ವ್ಯಾಪ್ತಿಯ ರೈತರು ಭತ್ತ, ಕಬ್ಬು ಮತ್ತಿತರ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಕಾವೇರಿ ಜಲ ವಿವಾದದ ನೆಪದಲ್ಲಿ ನೀರು ಹರಿಸುತ್ತಿಲ್ಲ. ಹೇಮಾವತಿ ಜಲಾನಯನದ ಪ್ರದೇಶದ ಜನಪ್ರತಿನಿಧಿಗಳೂ ಅಧಿಕಾರಿಗಳ ವರ್ತನೆ ವಿರುದ್ಧ ಧ್ವನಿಯೆತ್ತಿ ನದಿ ಅಣೆಕಟ್ಟೆ ನಾಲೆಗಳಿಗೆ ಸಕಾಲದಲ್ಲಿ ನೀರು ಬಿಡಿಸಲು ಅಗತ್ಯ ಕ್ರಮ ವಹಿಸುತ್ತಿಲ್ಲ. ಹಾಗಾಗಿ ನೀರಾವರಿ ಇಲಾಖೆ ಅಧಿಕಾರಿಗಳು ಬೆಳೆದು ನಿಂತಿರುವ ಬೆಳೆಗಳ ಸಂರಕ್ಷಣೆಗೆ ಮಂದಗೆರೆ ಮತ್ತು ಹೇಮಗಿರಿ ನದಿ ಅಣೆಕಟ್ಟೆಗಳ ಮೂಲಕ ಒಂದು ಕಂತು ನೀರು ಹರಿಸಬೇಕು ಎಂದು ರೈತ ಮುಖಂಡರು ಮನವಿ ಸಲ್ಲಿಸಿದರು.
ರೈತರ ಮನವಿ ಆಲಿಸಿದ ಸಹಾಯಕ ಕೃಷಿ ಅಧಿಕಾರಿ ಬಿ.ಎಸ್.ದೀಪಕ್ ಮಾತನಾಡಿ, ಬೆಳೆ ಸಂರಕ್ಷಣೆಗೆ ಅಗತ್ಯವಾದ ಒಂದು ಕಂತು ನೀರು ಬಿಡುಗಡೆಯ ಸಂಬಂಧ ತಹಸೀಲ್ದಾರ್ ಮತ್ತು ನೀರಾವರಿ ಇಲಾಖೆಯೊಂದಿಗೆ ವ್ಯವಹರಿಸುವುದಾಗಿ ತಿಳಿಸಿದರು.
ರೈತ ಮುಖಂಡರಾದ ಎಲ್.ಬಿ.ಜಗದೀಶ್, ಹಕ್ಕಿಮಂಚನಹಳ್ಳಿ ಹೊನ್ನೇಗೌಡ, ಚೌಡೇನಹಳ್ಳಿ ಕೃಷ್ಣೇಗೌಡ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net