ಜನರ ಸಹಕಾರವಿದ್ದರೆ ಅಭಿವೃದ್ಧಿ ಸಾಧ್ಯ

ಪಾಂಡವಪುರ ತಾಲೂಕಿನ ಚಿಕ್ಕಬೋಗನಹಳ್ಳಿ ಸಮೀಪ ಸಣ್ಣ ನೀರಾವರಿ ಇಲಾಖೆಯ ಅನುದಾನದಲ್ಲಿ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗೆ ಶಾಸಕ ದರ್ಶನ್ ಪಟ್ಟಣ್ಣಯ್ಯ ಭೂಮಿಪೂಜೆ ನೆರವೇರಿಸಿದರು. ರೈತಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ತಾಲೂಕು ಅಧ್ಯಕ್ಷ ವೈ.ಪಿ.ಮಂಜು, ಮುಖಂಡರಾದ ಗೋವಿಂದೇಗೌಡ ಇತರರು ಇದ್ದರು.
ಪಾಂಡವಪುರ ತಾಲೂಕಿನ ಚಿಕ್ಕಬೋಗನಹಳ್ಳಿ ಸಮೀಪ ಸಣ್ಣ ನೀರಾವರಿ ಇಲಾಖೆಯ ಅನುದಾನದಲ್ಲಿ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗೆ ಶಾಸಕ ದರ್ಶನ್ ಪಟ್ಟಣ್ಣಯ್ಯ ಭೂಮಿಪೂಜೆ ನೆರವೇರಿಸಿದರು. ರೈತಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ತಾಲೂಕು ಅಧ್ಯಕ್ಷ ವೈ.ಪಿ.ಮಂಜು, ಮುಖಂಡರಾದ ಗೋವಿಂದೇಗೌಡ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • Development
ಪಾಂಡವಪುರ: ತಾಲೂಕಿನ ಚಿನಕುರಳಿ ಮತ್ತು ಗುಮ್ಮನಹಳ್ಳಿ ಗ್ರಾಪಂ ವ್ಯಾಪ್ತಿಯ ವಿವಿಧ ಗ್ರಾಮಗಳ ಅಭಿವೃದ್ಧಿಗಾಗಿ ಅಂದಾಜು 2.40 ಕೋಟಿ ರೂ. ಅನುದಾನದಲ್ಲಿ ರಸ್ತೆ, ಚೆಕ್ ಡ್ಯಾಂ ಹಾಗೂ ಸಂತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಶನಿವಾರ ಭೂಮಿಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ರಸ್ತೆಗಳು ಹಾಗೂ ಚರಂಡಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಲೋಕೋಪಯೋಗಿ ಇಲಾಖೆ, ಎಸ್‌ಸಿಪಿ ಮತ್ತು ಟಿಎಸ್‌ಪಿ ಅನುದಾನದಲ್ಲಿ ಗುಮ್ಮನಹಳ್ಳಿ ಹೊಸೂರು, ಕಾಳೇಗೌಡನಕೊಪ್ಪಲು, ಮೊಳೇನಹಳ್ಳಿ, ಕನಗನಹಳ್ಳಿ ಗ್ರಾಮಗಳ ರಸ್ತೆ ಮತ್ತು ಚರಂಡಿ ಅಭಿವೃದ್ಧಿಗೆ ಭೂಮಿಪೂಜೆ ಸಲ್ಲಿಸಲಾಗಿದೆ. ಅಂತೇಯೇ ಚಿನಕುರಳಿ ಗ್ರಾಮದಲ್ಲಿ ಸಂತೆ ಅಭಿವೃದ್ಧಿ ಮತ್ತು ಚಿಕ್ಕಬೋಗನಹಳ್ಳಿ ಗ್ರಾಮದ ಸಮೀಪ ಸಣ್ಣ ನೀರಾವರಿ ಇಲಾಖೆಯ ಒಂದು ಕೋಟಿ ರೂ. ಅನುದಾನದಲ್ಲಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಭೂಮಿ ಪೂಜೆಸಲ್ಲಿಸಿದ್ದೇವೆ ಎಂದರು.
ಲೋಕೋಪಯೋಗಿ ಇಲಾಖೆಯಿಂದ ತಾಲೂಕಿನ ಕನಗನಹಳ್ಳಿ ಗ್ರಾಮದಲ್ಲಿ 20 ಲಕ್ಷ ರೂ., ಕಾಳೇಗೌಡನಕೊಪ್ಪಲು ಗ್ರಾಮದಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಮಾಡಲಾಗುತ್ತಿದೆ. ಎಸ್‌ಸಿಪಿ ಯೋಜನೆಯಡಿ ಗುಮ್ಮನಹಳ್ಳಿ ಹೊಸೂರು ಕಾಲನಿಯಲ್ಲಿ 25 ಲಕ್ಷ ರೂ. ಹಾಗೂ ಮೊಳ್ಳೇನಹಳ್ಳಿ ಗ್ರಾಮದಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ಚಿನಕುರಳಿ ಗ್ರಾಮದಲ್ಲಿ ಕೆಆರ್‌ಐಡಿಎಲ್ ಇಲಾಖೆಯಿಂದ 50 ಲಕ್ಷ ರೂ. ವೆಚ್ಚದಲ್ಲಿ ಸಂತೆ ಅಭಿವೃದ್ಧಿಗೆ ಹಾಗೂ ಸಣ್ಣ ನೀರಾವರಿ ಇಲಾಖೆಯಿಂದ ಚಿಕ್ಕಬೋಗನಹಳ್ಳಿ-ಹಸನ್ ಪುರ ಹಳ್ಳಕ್ಕೆ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಸಲ್ಲಿಸಲಾಗಿದೆ. ಜನರು ಅಭಿವೃದ್ಧಿ ಕಾಮಗಾರಿಗೆ ಸಹಕಾರ ನೀಡಿದರೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಹೇಳಿದರು.
ಪರಿಹಾರ ನೀಡಿ : ವರುಣನ ಅವಕೃಪೆಯಿಂದ ಕೆಆರ್‌ಎಸ್ ಜಲಾಶಯದಲ್ಲಿ ನೀರಿನ ಸಂಗ್ರಹ ಕುಸಿದಿರುವ ಪರಿಣಾಮ ರೈತರು ಬೆಳೆ ಬೆಳೆಯದಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದ್ದಾರೆ. ರೈತರು ಈಗಾಗಲೇ ಬಿತ್ತನೆ ಕಾರ್ಯ ಪೂರ್ಣಗೊಳಿಸಿದ್ದು, ನೀರಿನ ಅಭಾವದಿಂದ ಬಿತ್ತನೆ ಮಾಡಿರುವ ಬೆಳೆ ಒಣಗುತ್ತಿದೆ. ಅದರಲ್ಲೂ ಕಟಾವಿನ ಹಂತ ತಲುಪಿರುವ ಕಬ್ಬು ಕೂಡ ಒಣಗುತ್ತಿದೆ. ಸರ್ಕಾರ ನಾಲೆಗಳ ಮೂಲಕ ನೀರು ಹರಿಸಿ ರೈತರ ಹಿತ ಕಾಪಾಡಬೇಕು. ಇಲ್ಲವಾದರೆ ಬೆಳೆ ಪರಿಹಾರ ಘೋಷಣೆ ಮಾಡಬೇಕು, ರೈತರು ಭೂಮಿಯನ್ನೆ ನೆಚ್ಚಿಕೊಂಡು ಬದುಕು ನಡೆಸುತ್ತಿದ್ದಾರೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಬೆಳೆದಿರುವ ಕಬ್ಬು ಬೆಳೆ ಒಣಗುತ್ತಿದ್ದೆ ಹಾಗಾಗಿ ನಾಲೆಗೆ ಒಂದು ಕಟ್ಟು ನೀರು ಹರಿಸಬೇಕೆಂದು ನಮ್ಮ ಒತ್ತಾಯವಾಗಿದ್ದು, ರೈತ ಸಂಘಟನೆ ಇದಕ್ಕಾಗಿ ಪ್ರತಿಭಟನೆ ನಡೆಸುತ್ತಿದೆ. ನೀರು ಹರಿಸದಿದ್ದರೆ ದೊಡ್ಡ ಮಟ್ಟದ ಹೋರಾಟಕ್ಕೆ ರೈತಸಂಘಟನೆ ಸಿದ್ಧವಿದೆ ಎಂದು ತಿಳಿಸಿದರು.
ಈ ವೇಳೆ ರೈತಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ತಾಲೂಕು ಅಧ್ಯಕ್ಷ ವೈ.ಪಿ.ಮಂಜು, ಮುಖಂಡರಾದ ಗೋವಿಂದೇಗೌಡ, ಕಿಸಾನ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಸಿ.ಆರ್.ರಮೇಶ್, ಕಣಿವೆರಾಮು, ಸಿದ್ದಲಿಂಗೇಗೌಡ, ಪುಟ್ಟೇಗೌಡ, ಆರ್.ಎಸ್.ಶ್ಯಾಮ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net