ಆಂದೋಲನಕ್ಕೆ ನೆರವಾಗಲು ಲ್ಯಾಪ್‌ಟಾಪ್: ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿಕೆ

ಮಂಡ್ಯ ನಗರದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ರಾಜಸ್ವ ನಿರೀಕ್ಷಕರಿಗೆ ಲ್ಯಾಪ್‌ಟಾಪ್ ವಿತರಣೆ ಮಾಡಿದರು.
ಮಂಡ್ಯ ನಗರದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ರಾಜಸ್ವ ನಿರೀಕ್ಷಕರಿಗೆ ಲ್ಯಾಪ್‌ಟಾಪ್ ವಿತರಣೆ ಮಾಡಿದರು.
Published on

ಪ್ರಮುಖ ಮುಖ್ಯಾಂಶಗಳು

  • 51 ರಾಜಸ್ವ ನಿರೀಕ್ಷಕರಿಗೆ ಲ್ಯಾಪ್‌ಟಾಪ್ ವಿತರಣೆ
  • ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ
ಮಂಡ್ಯ: ಕಂದಾಯ ಇಲಾಖೆಯ ಪೌತಿ ಖಾತೆ ಆಂದೋಲನವನ್ನು (ಮೃತಪಟ್ಟ ರೈತರ ಹೆಸರಿನಲ್ಲಿರುವ ಜಮೀನಿನ ಖಾತೆಯನ್ನು ವಾರಸುದಾರರಿಗೆ ವರ್ಗಾಯಿಸುವ ಪ್ರಕ್ರಿಯೆ) ಚುರುಕುಗೊಳಿಸಲು ಮತ್ತು ಕೆಲಸವನ್ನು ಸುಲಭಗೊಳಿಸಲು 51 ರಾಜಸ್ವ ನಿರೀಕ್ಷಕರಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಲ್ಯಾಪ್‌ಟಾಪ್ ವಿತರಣೆ ಮಾಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿ, ರಾಜಸ್ವ ನಿರೀಕ್ಷಕರಿಗೆ ಸರ್ಕಾರ ಲ್ಯಾಪ್‌ಟಾಪ್ ನೀಡಿದೆ. ಇದನ್ನು ಬಳಸಿಕೊಂಡು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಿ. ಹಾಗೂ ಕಚೇರಿ ಕೆಲಸಕ್ಕೆ ಮಾತ್ರ ಬಳಸಿಕೊಳ್ಳಬೇಕು. ಪೌತಿ ಖಾತೆ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡಬೇಕು. ಜಿಲ್ಲೆಯು ಮಾದರಿಯಾಗಿ ಸಾಗುವತ್ತ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಮಾತನಾಡಿ, ಕಂದಾಯ ಇಲಾಖೆ ಅಧಿಕಾರಿಗಳು ಜನಸಾಮಾನ್ಯರಿಗೆ ತೊಂದರೆಯಗದಂತೆ ಹಾಗೂ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ಶೀಘ್ರವೇ ಪರಿಹರಿಸುವಂತೆ ಸೂಚಿಸಿದರು.
ಮಂಡ್ಯ ಉಪವಿಭಾಗಾಧಿಕಾರಿ ಎಂ.ಶಿವಮೂರ್ತಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net