ಜಿಲ್ಲಾಡಳಿತ ರೈತರಿಗೆ ಸರಿಯಾದ ಮಾಹಿತಿ ನೀಡದೆ ನಾಲೆಗೆ ನೀರು ಹರಿಸಿದ್ದಾರೆ. ಜಿಲ್ಲೆಯಲ್ಲಿ ಕಬ್ಬು ಸೇರಿದಂತೆ ಸಾಕಷ್ಟು ಬೆಳೆಗಳು, ತೋಟಗಾರಿಕೆ ಬೆಳೆಗಳು ಒಣಗುತ್ತಿವೆ. ಹಾಗಾಗಿ ಜಿಲ್ಲಾಡಳಿತ ರೈತರಿಗೆ ಸ್ಪಷ್ಟವಾದ ಮಾಹಿತಿ ನೀಡಿ, ಒಣಗುತ್ತಿರುವ ಬೆಳೆಗಳ ರಕ್ಷಣೆಗೆ ನೀರು ಹರಿಸಿ, ಇಲ್ಲವಾದರೆ ಬೆಳೆಗಳ ಪರಿಹಾರ ಘೋಷಿಸಿ, ಇದೀಗ ಜಿಲ್ಲೆಯಲ್ಲಿ ಯಾವುದೇ ಉಸ್ತುವಾರಿ ಮಂತ್ರಿಗಳು ಇಲ್ಲದಿರುವುದರಿಂದ ಜಿಲ್ಲಾಧಿಕಾರಿಗಳೇ ಹೆಚ್ಚಿನ ಹೊಣೆಹೊರಬೇಕು, ಇಲ್ಲವಾದರೆ ಜಿಲ್ಲೆಯ ರೈತರು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.