ರಾಜ್ಯಸರ್ಕಾರ ರೈತರ ಹಿತ ಕಾಪಾಡಲಿ: ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಸಭೆಯಲ್ಲಿ ಒತ್ತಾಯ

ಮಂಡ್ಯದಲ್ಲಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಬಿ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿತ್ತು.
ಮಂಡ್ಯದಲ್ಲಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಬಿ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿತ್ತು.
Published on

ಪ್ರಮುಖ ಮುಖ್ಯಾಂಶಗಳು

  • ತಮಿಳುನಾಡಿಗೆ ನೀರು ಹರಿಸಬೇಕೆನ್ನುವ ಶಿಫಾರಸು ಖಂಡನೆ
  • ಆ.29ರಂದು ಬೆಂಗಳೂರಿನ ವಕೀಲರ ಸಂಘದ ಪದಾಧಿಕಾರಿಗಳು, ನೀರಾವರಿ ತಜ್ಞರು ಹಾಗೂ ವಿಚಾರವಾದಿಗಳ ಸಭೆ

ಮಂಡ್ಯ: ತಮಿಳುನಾಡಿಗೆ ನೀರು ಹರಿಸಬೇಕೆನ್ನುವ ಶಿಫಾರಸು ಖಂಡಿಸಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ನಗರದ ಪ್ರವಾಸಿಮಂದಿರದಲ್ಲಿ ಸಭೆ ಆಯೋಜಿಸಲಾಗಿತ್ತು.

ಸಮಿತಿ ಅಧ್ಯಕ್ಷ ಜಿ.ಬಿ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರು ತಮ್ಮ ಅಭಿಪ್ರಾಯ ಹಂಚಿಕೊಂಡರು. ಅದರಂತೆ ಕಾವೇರಿ ಪ್ರಾಧಿಕಾರದ ಆದೇಶವನ್ನು ಸಮಿತಿ ಸರ್ವಾನುಮತದಿಂದ ವಿರೋಧಿಸಿತು. ರಾಜ್ಯದ ಸಂಸದರು ಸಂಸತ್‌ನಲ್ಲಿ ಕಾವೇರಿ ನದಿ ನೀರಿನ ವಿಚಾರವಾಗಿ ಚರ್ಚಿಸಿ ಸಂಕಷ್ಟ ಸೂತ್ರ ರಚಿಸುವಂತೆ ಮಾಡುವ ಮೂಲಕ ಎತಡು ರಾಜ್ಯದ ಸಮಸ್ಯೆ ನಿವಾಸರಿಸಬೇಕೆಂದು ಒತ್ತಾಯಿಸಲಾಯಿತು.
ಅಂತೆಯೇ ರಾಜ್ಯಸರ್ಕಾರದ ನಮ್ಮ ರೈತರ ಹಿತ ಕಾಪಾಡಬೇಕು. ಅಧಿವೇಶನ ನಡೆಯುತ್ತಿರುವುದರಿಂದ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಅವರು ಚರ್ಚಿಸಿ ರಾಜ್ಯದ ಜನತೆಗೆ ನ್ಯಾಯ ಒದಗಿಸಬೇಕು. ಆ.29ರಂದು ಬೆಂಗಳೂರಿನ ವಕೀಲರ ಸಂಘದ ಪದಾಧಿಕಾರಿಗಳು, ನೀರಾವರಿ ತಜ್ಞರು ಹಾಗೂ ವಿಚಾರವಾದಿಗಳ ಸಭೆ ಸೇರಿ ಕಾವೇರಿ ನದಿ ನೀರಿನ ಸಂಕಷ್ಟ ಸೂತ್ರ ಮತ್ತು ಮೇಕೆದಾಟು ವಿಚಾರವಾಗಿ ಚರ್ಚೆ ಮಾಡುವುದು. ಆ.24ರಂದು ಸುಪ್ರೀಂ ಕೋರ್ಟ್‌ನ ಆದೇಶ ನಂತರ ಮುಂದಿನ ಕಾರ್ಯಕ್ರಮ ರೂಪಿಸುವುದಾಗಿ ತೀರ್ಮಾನಿಸಲಾಯಿತು.
ಸಭೆಯಲ್ಲಿ ಸಮಿತಿಯ ಹಿರಿಯ ಉಪಾಧ್ಯಕ್ಷ ಕೆ.ಬೋರಯ್ಯ, ಪ್ರಧಾನ ಕಾರ್ಯದರ್ಶಿ ಕಾರ್ಯದರ್ಶಿ ಸುನಂದಾ ಜಯರಾಂ, ಕನ್ನಡ ಸೇನೆ ಜಿಲ್ಲಾಧ್ಯಕ್ಷ ಎಚ್.ಸಿ.ಮಂಜುನಾಥ್, ಹಲ್ಲೇಗೆರೆ ಶಿವರಾಂ, ಮುದ್ದೇಗೌಡ, ರೈತ ಸಂಘದ ಜಿಲ್ಲಾಧ್ಯಕ್ಷ ಇಂಡುವಾಳು ಚಂದ್ರಶೇಖರ್, ಸಂತೋಷ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net