ಕೌಶಲ ತರಬೇತಿ ಕಾರ್ಯಕ್ರಮಗಳನ್ನು ರೂಪಿಸುವ ಸಂದರ್ಭದಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ರೇಷ್ಮೆ ಹಾಗೂ ಎನ್‌ಆರ್‌ಎಲ್‌ಎಂ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ, ಜಿಲ್ಲೆಯ ಅಗತ್ಯತೆಗಳಿಗೆ ಅನುಗುಣವಾಗಿ ವಾರ್ಷಿಕ ತರಬೇತಿ ಕ್ಯಾಲೆಂಡರ್ ಸಿದ್ಧಪಡಿಸಬೇಕು. ಜಿಲ್ಲೆಯಲ್ಲಿಯೇ ಲಭ್ಯವಿರುವ ಸಂಪನ್ಮೂಲಗಳನ್ನು ಆಧರಿಸಿ ಮಖಾನಾ ಉತ್ಪನ್ನಗಳು, ಕೊಕೊಪೀಟ್, ಬೇಕರಿ ಉತ್ಪನ್ನಗಳು, ಸಾವಯವ ಉತ್ಪನ್ನಗಳು ಹಾಗೂ ವಿವಿಧ ಕೃಷಿ ಇನ್‌ಪುಟ್‌ಗಳ ಉತ್ಪಾದನೆಗೆ ಸಂಬಂಧಿಸಿದ ತರಬೇತಿಗಳನ್ನೂ ಆರಂಭಿಸುವಂತೆ ಸಲಹೆ ನೀಡಿದರು.