ರಕ್ತದಾನ ಮಾಡಿ ಸಂಕಷ್ಟದಲ್ಲಿರುವ ಜೀವಗಳನ್ನು ಉಳಿಸಿ

ಮದ್ದೂರು ನಗರದಲ್ಲಿ ರಕ್ತದಾನ ಶಿಬಿರದ ಪೋಸ್ಟರನ್ನು ರೋಟರಿ ಅಧ್ಯಕ್ಷ ಎಸ್.ಪಿ.ಶ್ರೀನಿವಾಸ್ ಬಿಡುಗಡೆ ಮಾಡಿದರು. ಕೃಷ್ಣ, ವೆಂಕಟೇಶ್, ನವೀನ್, ಮಹೇಶ್, ಚಾಮನಹಳ್ಳಿ ಮಂಜು, ತಿಲಕ್, ಮಂಜನಾಥ್, ನವೀನ್, ಸಿ.ಎಂ.ಪ್ರಸನ್ನ ಇದ್ದರು.
ಮದ್ದೂರು ನಗರದಲ್ಲಿ ರಕ್ತದಾನ ಶಿಬಿರದ ಪೋಸ್ಟರನ್ನು ರೋಟರಿ ಅಧ್ಯಕ್ಷ ಎಸ್.ಪಿ.ಶ್ರೀನಿವಾಸ್ ಬಿಡುಗಡೆ ಮಾಡಿದರು. ಕೃಷ್ಣ, ವೆಂಕಟೇಶ್, ನವೀನ್, ಮಹೇಶ್, ಚಾಮನಹಳ್ಳಿ ಮಂಜು, ತಿಲಕ್, ಮಂಜನಾಥ್, ನವೀನ್, ಸಿ.ಎಂ.ಪ್ರಸನ್ನ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ರೋಟರಿ ಅಧ್ಯಕ್ಷ ಎಸ್.ಪಿ.ಶ್ರೀನಿವಾಸ್ ಕರೆ
  • ಪೋಸ್ಟರ್ ಬಿಡುಗಡೆ
ಮದ್ದೂರು: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂ.5 ರಂದು ನಗರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ವಿವಿಧ ಸಂಘ, ಸಂಸ್ಥೆಗಳು ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಂಡಿರುವುದು ಮೆಚ್ಚುಗೆಯ ವಿಷಯ ಎಂದು ರೋಟರಿ ಅಧ್ಯಕ್ಷ ಎಸ್.ಪಿ.ಶ್ರೀನಿವಾಸ್ ಮೆಚ್ಚುಗೆ ವ್ಯಕ್ತಪಡಿಸಿದರು.
ನಗರದಲ್ಲಿ ಬುಧವಾರ ರಕ್ತದಾನ ಶಿಬಿರದ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದರು.
ಪ್ರಪಂಚದಲ್ಲಿ ರಕ್ತಕ್ಕೆ ಪರ್ಯಾಯವಾದ ವಸ್ತು ಬೇರೆಯಾವುದಿಲ್ಲ. ಆದ್ದರಿಂದ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡುವ ಮೂಲಕ ಸಂಕಷ್ಟದಲ್ಲಿರುವ ಜೀವಗಳನ್ನು ಉಳಿಸಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮದ ಆಯೋಜಕ ಕೃಷ್ಣ ಮಾತನಾಡಿ, ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವಚನಕಾರ ಶ್ರೀ ಬಸವಣ್ಣ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ರಾಷ್ಟ್ರಕವಿ ಕುವೆಂಪು ಹಾಗೂ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಗೌರವಾರ್ಥ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ಜೂ.5 ರಂದು ಸರ್ಕಾರಿ ಮಹಿಳಾ ಕಾಲೇಜು ಆವರಣದಲ್ಲಿ ಬೆಳಗ್ಗೆ 9ಗಂಟೆಯಿಂದ ಸಂಜೆ 4ರವರೆಗೆ ನಡೆಯಲಿದ್ದು, ಶಿಬಿರದಲ್ಲಿ 18 ರಿಂದ 60 ವರ್ಷದೊಳಗಿನ ಆರೋಗ್ಯವಂತರು ರಕ್ತದಾನ ಮಾಡಬಹುದು ಎಂದರು.
ಶಿಬಿರದಲ್ಲಿ ಮದ್ದೂರಿನ ಹಲವಾರು ಸಂಘ, ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು ಭಾಗವಹಿಸಲಿದ್ದು, ಮದ್ದೂರು ಪಟ್ಟಣದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿ ಅಳವಿನಂಚಿನಲ್ಲಿರುವ ಜೀವ ಉಳಿಸಬೇಕು ಎಂದರು.
ವೆಂಕಟೇಶ್, ನವೀನ್, ಮಹೇಶ್, ಚಾಮನಹಳ್ಳಿ ಮಂಜು, ತಿಲಕ್, ಮಂಜನಾಥ್, ನವೀನ್, ಸಿ.ಎಂ.ಪ್ರಸನ್ನ, ಕೃಷ್ಣ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net