ಸಂಕಷ್ಟದಲ್ಲಿರುವ ಜೀವಗಳನ್ನು ಉಳಿಸಲು ರಕ್ತದಾನ ಮಾಡಿ

ಮದ್ದೂರು ನಗರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ವಿವಿಧ ಸಂಘಟನೆಗಳ ವತಿಯಿಂದ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದ್ದ ರಕ್ತದಾನ ಶಿಬಿರಕ್ಕೆ ವೈದ್ಯನಾಥಪುರ ಕದಂಬ ಜಂಗಮ ಮಠದ ಪೀಠಾಧ್ಯಕ್ಷರಾದ ಶ್ರೀ ರೇಣುಕಾ ಶಿವಚಾರ್ಯ ಸ್ವಾಮೀಜಿ ಚಾಲನೆ ನೀಡಿದರು. ಕೃಷ್ಣ, ಸಿ.ಎಂ.ಪ್ರಸನ್ನಕುಮಾರ್, ಮಂಜು, ವಿ.ಸಿ.ಉಮಾಶಂಕರ್, ಎಸ್.ಪಿ.ಶ್ರೀನಿವಾಸ್, ಸೊ.ಶಿ.ಪ್ರಕಾಶ್ ಸೇರಿದಂತೆ ಇತರರು ಇದ್ದರು.
ಮದ್ದೂರು ನಗರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ವಿವಿಧ ಸಂಘಟನೆಗಳ ವತಿಯಿಂದ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದ್ದ ರಕ್ತದಾನ ಶಿಬಿರಕ್ಕೆ ವೈದ್ಯನಾಥಪುರ ಕದಂಬ ಜಂಗಮ ಮಠದ ಪೀಠಾಧ್ಯಕ್ಷರಾದ ಶ್ರೀ ರೇಣುಕಾ ಶಿವಚಾರ್ಯ ಸ್ವಾಮೀಜಿ ಚಾಲನೆ ನೀಡಿದರು. ಕೃಷ್ಣ, ಸಿ.ಎಂ.ಪ್ರಸನ್ನಕುಮಾರ್, ಮಂಜು, ವಿ.ಸಿ.ಉಮಾಶಂಕರ್, ಎಸ್.ಪಿ.ಶ್ರೀನಿವಾಸ್, ಸೊ.ಶಿ.ಪ್ರಕಾಶ್ ಸೇರಿದಂತೆ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶ್ರೀ ರೇಣುಕಾ ಶಿವಚಾರ್ಯ ಸ್ವಾಮೀಜಿ ಕಿವಿಮಾತು
  • ರಕ್ತದಾನ ಶಿಬಿರ
ಮದ್ದೂರು: ಸಂಘ, ಸಂಸ್ಥೆಗಳು ಹೆಚ್ಚಿನ ಪ್ರಮಾಣದಲ್ಲಿ ರಕ್ತದಾನ ಶಿಬಿರ ಆಯೋಜಿಸಿ ರಕ್ತ ಸಂಗ್ರಹ ಮಾಡಿ ಸಂಕಷ್ಟದಲ್ಲಿರುವ ಜೀವಗಳನ್ನು ಉಳಿಸಲು ಮುಂದಾಗಬೇಕೆಂದು ವೈದ್ಯನಾಥಪುರ ಕದಂಬ ಜಂಗಮ ಮಠದ ಪೀಠಾಧ್ಯಕ್ಷ ಶ್ರೀ ರೇಣುಕಾ ಶಿವಚಾರ್ಯ ಸ್ವಾಮೀಜಿ ತಿಳಿಸಿದರು.
ನಗರ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಶುಕ್ರವಾರ ವಿವಿಧ ಸಂಘ, ಸಂಸ್ಥೆಗಳ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವಚನಕಾರ ಶ್ರೀ ಬಸವಣ್ಣ, ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್, ರಾಷ್ಟ್ರಕವಿ ಕುವೆಂಪು ಹಾಗೂ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಅವರ ಗೌರವಾರ್ಥ ಆಯೋಜಿಸಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರಪಂಚದಲ್ಲಿ ರಕ್ತಕ್ಕೆ ಪರ್ಯಾಯವಾದ ಯಾವುದೇ ವಸ್ತುವಿಲ್ಲದ ಕಾರಣ ಆರೋಗ್ಯವಂತರು ವೈದ್ಯರ ಸಲಹೆ ಪಡೆದು ರಕ್ತದಾನ ಮಾಡುವ ಮೂಲಕ ಸಂಕಷ್ಟದಲ್ಲಿರುವ ಜೀವಗಳನ್ನು ಉಳಿಸಲು ಮುಂದಾಗಬೇಕೆಂದು ಸಲಹೆ ನೀಡಿದರು.
ವಿಶ್ವಪರಿಸರ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರ ಹಮ್ಮಿಕೊಂಡು ಸಸಿಗಳನ್ನು ವಿತರಣೆ ಮಾಡಿ ಪರಿಸರ ಸಂರಕ್ಷಣೆಗೆ ಮುಂದಾಗಿರುವುದು ಪ್ರಶಂಸನೀಯ. ಪರಿಸರ ಉಳಿದರೆ ಮಾತ್ರ ಭೂಮಿಯ ಮೇಲೆ ಸಕಲ ಜೀವರಾಶಿ ನೆಮ್ಮದಿಯಾಗಿ ಜೀವಿಸಲು ಸಾಧ್ಯ ಎಂಬುವುದನ್ನು ಪ್ರತಿಯೊಬ್ಬರು ತಿಳಿದುಕೊಳ್ಳಬೇಕು ಎಂದರು.
ರೋಟರಿ ಅಧ್ಯಕ್ಷ ಎಸ್.ಪಿ.ಶ್ರೀನಿವಾಸ್ ಮಾತನಾಡಿ, ರಕ್ತದಾನ ಮಹಾದಾನವಾಗಿದ್ದು, ಒಬ್ಬರು ನೀಡುವ ರಕ್ತವು ತುರ್ತು ಪರಿಸ್ಥಿತಿಯಲ್ಲಿರುವ ಮೂವರ ಜೀವವನ್ನು ಉಳಿಸಬಲ್ಲದು. ಅಪಘಾತ, ಶಸಚಿಕಿತ್ಸೆ ಅಥವಾ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ರಕ್ತದ ಅವಶ್ಯಕತೆ ಇರುತ್ತದೆ ಎಂದರು.
ರಕ್ತದಾನ ಮಾಡುವುದರಿಂದ ದೇಹದಲ್ಲಿ ಹೊಸ ರಕ್ತಕಣಗಳು ಉತ್ಪತ್ತಿಯಾಗುತ್ತವೆ ಮತ್ತು ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ. 18 ರಿಂದ 65 ವರ್ಷದೊಳಗಿನ ಆರೋಗ್ಯವಂತರು. ಕನಿಷ್ಠ 45 ಕೆ.ಜಿ ಇರುವಂತ ವ್ಯಕ್ತಿಗಳು ರಕ್ತದಾನ ಮಾಡಬಹುದು ಎಂದರು.
ಶಿಬಿರದಲ್ಲಿ 66 ಯೂನಿಟ್ ರಕ್ತ ಸಂಗ್ರಹವಾಯಿತು. ಗೋಲ್ಡನ್ ಮ್ಯೂಸಿಕ್ ಚಂದ್ರಶೇಖರ್ ನಡೆಸಿಕೊಟ್ಟ ರಸ ಮಂಜರಿ ಕಾರ್ಯಕ್ರಮ ಕೇಳುಗರ ಗಮನ ಸೆಳೆಯಿತು.
ನಾಲ್ವಡಿ ಬಳಗದ ಕೃಷ್ಣ, ಅನಿಲ್, ಗಣೇಶ್, ನವೀನ್, ತಿಲಕ್, ಟಿ.ವೆಂಕಟೇಶ್, ಸಿ.ಎಂ.ಪ್ರಸನ್ನಕುಮಾರ್, ಚಾಮನಹಳ್ಳಿ ಮಂಜು, ಕೀರ್ತಿ ರಾಜು, ಪ್ರಾಂಶುಪಾಲ ರವಿ, ಪ್ರೊ.ಮಹೇಶ್ ಕುಮರ್, ವಿವಿಧ ಸಂಘಟನೆಗಳ ಮುಖಂಡರಾದ ಹೊನ್ನೇಗೌಡ, ತಿಪ್ಪೂರು ರಾಜೇಶ್, ಸೊ.ಶಿ.ಪ್ರಕಾಶ್, ವಿ.ಸಿ.ಉಮಾಶಂಕರ್, ಶಶಿಗೌಡ, ಮಹೇಶ್, ಎಂ.ಜೆ.ಸುಮಂತ್, ಹೊಂಡಾ ಷೋ ರೂಮ್ ಮಹೇಶ್, ಸೇರಿದಂತೆ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net