ಅಲೆದಾಟ ತಪ್ಪಿಸಲು ಮನೆ ಬಾಗಿಲಿಗೇ ಸೇವೆ

ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದಲ್ಲಿ ಆಯೋಜಿಸಿದ್ದ ಸರ್ಕಾರಿ ಸೇವೆಗಳು ಮನೆ ಬಾಗಿಲಿಗೆ ಕಾರ್ಯಕ್ರಮವನ್ನು ಶಾಸಕ ದರ್ಶನ್ ಪುಟ್ಟಣ್ಣಯ್ಯ ಉದ್ಘಾಟಿಸಿದರು. ತಾಪಂ ಇಒ ಎಂ.ಎಸ್.ವೀಣಾ, ಟಿಎಚ್‌ಒ ಡಾ.ಸಿ.ಎ.ಅರವಿಂದ್, ಬಿಇಒ ಧರ್ಮಶೆಟ್ಟಿ, ಪೊಲೀಸ್ ಇನ್ಸ್‌ಪೆಕ್ಟರ್ ಲಿಂಗರಾಜು ಇತರರು ಇದ್ದರು.
ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದಲ್ಲಿ ಆಯೋಜಿಸಿದ್ದ ಸರ್ಕಾರಿ ಸೇವೆಗಳು ಮನೆ ಬಾಗಿಲಿಗೆ ಕಾರ್ಯಕ್ರಮವನ್ನು ಶಾಸಕ ದರ್ಶನ್ ಪುಟ್ಟಣ್ಣಯ್ಯ ಉದ್ಘಾಟಿಸಿದರು. ತಾಪಂ ಇಒ ಎಂ.ಎಸ್.ವೀಣಾ, ಟಿಎಚ್‌ಒ ಡಾ.ಸಿ.ಎ.ಅರವಿಂದ್, ಬಿಇಒ ಧರ್ಮಶೆಟ್ಟಿ, ಪೊಲೀಸ್ ಇನ್ಸ್‌ಪೆಕ್ಟರ್ ಲಿಂಗರಾಜು ಇತರರು ಇದ್ದರು.
Published on
ಪಾಂಡವಪುರ: ಜನರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸರ್ಕಾರಿ ಸೇವೆಗಳು ಮನೆ ಬಾಗಿಲಿಗೆ ಕಾರ್ಯಕ್ರಮವನ್ನು ಆಯೋಜಿಸಿದ್ದು, ಸಾರ್ವಜನಿಕರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಮನವಿ ಮಾಡಿದರು.
ತಾಲೂಕಿನ ಕಟ್ಟೇರಿ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಂದಾಯ, ಪೊಲೀಸ್ ಇಲಾಖೆ, ತಾಪಂ ವ್ಯಾಪ್ತಿಗೆ ಬರುವ ನೀರಾವರಿ, ಕೃಷಿ, ತೋಟಗಾರಿಕೆ, ರೇಷ್ಮೆ, ಆರೋಗ್ಯ, ಶಿಕ್ಷಣ, ಸೆಸ್ಕ್, ಆಹಾರ, ಶಿಶುಅಭಿವೃದ್ದಿ ಇಲಾಖೆಗಳು ಸೇರಿದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳ ಮತ್ತು ಸಿಬ್ಬಂದಿ ತಂಡವು ಪಂಚಾಯಿತಿಯಲ್ಲಿಯೇ ಒಂದು ವಾರಗಳ ಕಾಲ ಮೊಕ್ಕಂ ಹೂಡಲಿದ್ದು, ಆಯಾಯ ಪಂಚಾಯಿತಿ ವ್ಯಾಪ್ತಿ ಜನರು ತಮ್ಮ ಸಮಸ್ಯೆಗಳ ಅಹವಾಲುಗಳನ್ನು ಹೇಳಿಕೊಂಡು ಪರಿಹಾರ ದೊರಕಿಸಿಕೊಳ್ಳಬೇಕು ಎಂದರು.
ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ಹೊರತು ಪಡಿಸಿ ಉಳಿದ ಎಲ್ಲ ಸಮಸ್ಯೆಗಳನ್ನು ಅಧಿಕಾರಿಗಳು ಸ್ಥಳದಲ್ಲಿ ಪರಿಹಾರ ದೊರಕಿಸಿಕೊಡಲಿದ್ದಾರೆ. ಅಲ್ಲದೇ ಸರ್ಕಾರದ ಯೋಜನೆಗಳಾದ ಸಂಧ್ಯಾ ಸುರಕ್ಷಾ, ವೃದ್ದಾಪ್ಯ, ವಿಧವಾ, ಮನಸ್ವಿನಿ, ಅಂಗವಿಕಲ ಪಿಂಚಣಿಗಳ ಪ್ರಮಾಣ ಪತ್ರವನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲಾಗುವುದು ಎಂದು ತಿಳಿಸಿದರು.
ಪೂರ್ವಭಾವಿ ಸರ್ವೇ: ಸರ್ಕಾರಿ ಸೇವೆ ಮನೆ ಬಾಗಿಲಿಗೆ ಕಾರ್ಯಕ್ರಮಕ್ಕೂ ಮುಂಚೆ ಎರಡು ವಾರಗಳ ಕಾಲ ಸರ್ಕಾರಿ ಕಚೇರಿ ಸಿಬ್ಬಂದಿ, ಪಿಡಿಒ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಜನರ ಸಮಸ್ಯೆಗಳನ್ನು ಪಟ್ಟಿ ಮಾಡಿದ್ದಾರೆ. ಈ ಆಧಾರದ ಮೇಲೆ ಮತ್ತು ಜನರು ಸಲ್ಲಿಸುವ ಅಹವಾಲುಗಳನ್ನು ಆಧರಿಸಿ ಕಾರ್ಯಕ್ರಮ ನಡೆಯುತ್ತಿದೆ ಎಂದರು.
3774 ಅಹವಾಲುಗಳು ನೋಂದಣಿ: ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ 3774 ಅಹವಾಲುಗಳನ್ನು ನೋಂದಣಿ ಮಾಡಿಕೊಳ್ಳಲಾಗಿದೆ. ಈ ಪೈಕಿ ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆ 1132 ಅರ್ಜಿಗಳು ಬಂದಿದಿವೆ. ಕುಡಿಯುವ ನೀರು, ವಿದ್ಯುತ್ ಸಮಸ್ಯೆ, ರಸ್ತೆ, ಕೆರೆ ಕಟ್ಟೆ ಒತ್ತುವರಿ ಸಮಸ್ಯೆಗಳನ್ನು ಬಗೆಹರಿಸಲಾಗವುದು ಎಂದು ಹೇಳಿದರು.
ತಾಪಂ ಇಒ ಎಂ.ಎಸ್.ವೀಣಾ, ಟಿಎಚ್‌ಒ ಡಾ.ಸಿ.ಎ.ಅರವಿಂದ್, ಬಿಇಒ ಧರ್ಮಶೆಟ್ಟಿ, ಪೊಲೀಸ್ ಇನ್ಸ್‌ಪೆಕ್ಟರ್ ಲಿಂಗರಾಜು, ಚಿನಕುರಳಿ ನಾಡ ಕಚೇರಿ ಉಪ ತಹಸೀಲ್ದಾರ್ ಲಕ್ಷ್ಮೀಕಾಂತ್, ರಾಜಸ್ವ ನಿರೀಕ್ಷಕ ಶ್ರೀಧರ್, ಪಿಡಿಒ ಕುಮಾರ್ ಸೇರಿದಂತೆ ಎಲ್ಲಾ ಸರ್ಕಾರಿ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net