ಅಮೆರಿಕಾದಲ್ಲೂ ಅಂಬೇಡ್ಕರ್ ಜಯಂತಿ ಆಚರಣೆ: ಶಾಸಕ ಪಿ.ರವಿಕುಮಾರ್ ಗಣಿಗ ಹೇಳಿಕೆ

ಮಂಡ್ಯ ನಗರದ ವಕೀಲರ ಸಂಘದ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135 ನೇ ಜಯಂತ್ಯುತ್ಸವ ಆಚರಿಸಲಾಯಿತು.
ಮಂಡ್ಯ ನಗರದ ವಕೀಲರ ಸಂಘದ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135 ನೇ ಜಯಂತ್ಯುತ್ಸವ ಆಚರಿಸಲಾಯಿತು.
Published on

ಪ್ರಮುಖ ಮುಖ್ಯಾಂಶಗಳು

  • ವಕೀಲರ ಸಂಘದ ಆವರಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತ್ಯುತ್ಸವ ಆಚರಣೆ
ಮಂಡ್ಯ: ಭಾರತದ ಸಂವಿಧಾನ ರಚಿಸಿದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಯನ್ನು ವಿಶ್ವವೇ ಆಚರಿಸುತ್ತಿದೆ ಎಂದು ಶಾಸಕ ಪಿ.ರವಿಕುಮಾರ್ ಗಣಿಗ ಹೇಳಿದರು.
ನಗರದ ವಕೀಲರ ಸಂಘದ ಆವರಣದಲ್ಲಿ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135 ನೇ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಅಮೆರಿಕಾದ 35 ರಾಜ್ಯಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಆಚರಣೆ ಮಾಡಬೇಕೆಂದು ಅಲ್ಲಿನ ರಾಜ್ಯಪಾಲರು ಆದೇಶ ಮಾಡಿದ್ದಾರೆ. ಇದು ಅಂಬೇಡ್ಕರ್ ಅವರಿಗೆ ಸಂದ ಗೌರವ ಎಂದು ತಿಳಿಸಿದರು.
ವಕೀಲರ ಸಂಘದ ಜಿಲ್ಲಾಧ್ಯಕ್ಷ ಟಿ.ಎಸ್.ಸತ್ಯಾನಂದ ಅವರು ಸಮಾಜ ಕಲ್ಯಾಣ ಇಲಾಖೆ ಸಚಿವರನ್ನು ಭೇಟಿ ಮಾಡಿ ಸಂವಿಧಾನದ ರಕ್ಷಣೆ ಮಾಡುವುದು ನ್ಯಾಯಾಲಯಗಳು. ಆದ್ದರಿಂದ ರಾಜ್ಯದ 30 ಜಿಲ್ಲೆಗಳ ನ್ಯಾಯಾಲಯಗಳ ಆವರಣದಲ್ಲಿ ಸರ್ಕಾರದ ವತಿಯಿಂದ ಸಂವಿಧಾನ ಭವನ ನಿರ್ಮಿಸುವಂತೆ ಮನವಿ ಮಾಡಿದ್ದಾರೆ. ಅದಕ್ಕೆ ಸಚಿವರು ಪೂರಕವಾಗಿ ಸ್ಪಂದಿಸಿ ಕ್ರಮ ವಹಿಸಲು ಮುಂದಾಗಿದ್ದಾರೆ. ಸಂವಿಧಾನ ಭವನದ ನಿರ್ಮಾಣ ಕಾರ್ಯ ಮೊದಲು ಮಂಡ್ಯದಿಂದಲೇ ಆರಂಭವಾಗಲಿ ಎಂದು ತಿಳಿಸಿದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜೆ.ಎನ್.ಸುಬ್ರಹ್ಮಣ್ಯ ಮಾತನಾಡಿ, ಸಂವಿಧಾನ ಸಮಿತಿ ಎರಡೂವರೆ ವರ್ಷಗಳ ಕಾಲ ಪ್ರಯತ್ನ ಮಾಡಿ ಭಾರತದ ಸಂವಿಧಾನ ತಯಾರಿಸಿ ಜಾರಿಗೊಳಿಸಿದ್ದಾರೆ. ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿ ಸಂವಿಧಾನದ ಆಶಯಗಳನ್ನು ಈಡೇರಿಸಬೇಕು ಎಂದು ತಿಳಿಸಿದರು.
ವಕೀಲರ ಸಂಘದ ಅಧ್ಯಕ್ಷ ಟಿ.ಎಸ್.ಸತ್ಯಾನಂದ ಮಾತನಾಡಿ, ಅಂಬೇಡ್ಕರ್ ಅವರು ಎಲ್ಲ ವರ್ಗಗಳಿಗೂ ಸಮಾನ ಹಕ್ಕುಗಳು ಮತ್ತು ಅವಕಾಶಗಳನ್ನು ನೀಡುವ ಸಂವಿಧಾನವನ್ನು ನೀಡುವ ಮೂಲಕ ನಮ್ಮ ಪ್ರಜಾಪ್ರಭುತ್ವದ ಬಲವಾದ ಅಡಿಪಾಯಗಳನ್ನು ಹಾಕಿದರು ಎಂದು ಹೇಳಿದರು.
ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಯಾದವ್, ಪ್ರಧಾನ ಸಿವಿಲ್ ನ್ಯಾಯಾಧೀಶ ಸಂದೀಪ್ ಸಾಲಿಯಾನ, ವಕೀಲರ ಸಂಘದ ಕಾರ್ಯದರ್ಶಿ ಬಿ.ಸತೀಶ್, ಹಿರಿಯ ವಕೀಲರಾದ ಬಿ.ಟಿ.ನಾಗರಾಜು, ಸಿ.ಎಲ್.ಶಿವಕುಮಾರ್ ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net