ಮಂಡ್ಯ:ಮಂಡ್ಯದ ಶಂಕರನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದ ನೂತನ ಕಟ್ಟಡವನ್ನು 6.5 ಕೋಟಿ ರೂಗಳಲ್ಲಿ ವೆಚ್ಚದಲ್ಲಿ ಸುಸರ್ಜಿತವಾಗಿ ನಿರ್ಮಾಣ ಮಾಡಲಾಗಿದೆ ಎಂದು ಶಾಸಕ ಪಿ.ರವಿಕುಮಾರ್ ಗಣಿಗ ತಿಳಿಸಿದರು.
ನೂತನ ಕಟ್ಟಡದ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಮೂರು ವಿದ್ಯಾರ್ಥಿ ನಿಲಯವನ್ನು ಕ್ಷೇತ್ರಕ್ಕೆ ತರಲಾಗಿದೆ. ಅದರಂತೆ ಕಟ್ಟಡ ನಿರ್ಮಾಣದ ಕಾಮಗಾರಿ ತ್ವರಿತಗತಿಯಲ್ಲಿ ಸಾಗುತ್ತಿದ್ದೆ. ಮುಂದಿನ 6 ತಿಂಗಳಲ್ಲಿ ನೂತನ ಕಟ್ಟಡ ನಿರ್ಮಾಣ ಉದ್ಘಾಟನೆ ಮಾಡಲಾಗುವುದು. ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಸಾಧನೆ ಮಾಡುವ ಛಲವನ್ನು ರೂಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ನೂರು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕಟ್ಟಡವನ್ನು ನಿರ್ಮಿಸಲಾಗಿದೆ. ವಿದ್ಯಾರ್ಥಿಗಳು ಕಟ್ಟಡದ ಸದುಪಯೋಗವನ್ನು ಪಡೆದುಕೊಳ್ಳಬೇಕು. ನೂತನ ಕಟ್ಟಡವು ಮೂಲ ಸೌಕರ್ಯ ಹೊಂದಿದ್ದು, ವಿದ್ಯಾರ್ಥಿನಿಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಇದರ ಸದುಪಯೋಗ ಪಡೆದುಕೊಂಡು ಸಮಾಜದ ಆದರ್ಶ ಪ್ರಜೆಗಳಾಗಬೇಕು. ಅಂತೆಯೇ ಜ್ಞಾನ ದೇಗುಲವೆಂದು ಭಾವಿಸಿ ಉನ್ನತ ಶಿಕ್ಷಣ ಪಡೆದು ಗುರಿ ಮತ್ತು ಸಾಧನೆಯತ್ತ ಗಮನ ಹರಿಸಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ, ರಾಜ್ಯ ಸಣ್ಣ ಕೈಗಾರಿಗೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮೀ ರಘುನಂದನ್, ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್, ವಕೀಲರ ಸಂಘದ ಜಿಲ್ಲಾಧ್ಯಕ್ಷ ಟಿ.ಎಸ್.ಸತ್ಯಾನಂದ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶ್ರೀನಿವಾಸ್ ಇತರರಿದ್ದರು.