ಮದ್ದೂರು ತಾ. ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಡಾ.ಕೆಂಪಮ್ಮ ಆಯ್ಕೆ
ಮದ್ದೂರು ನಗರದ ಪ್ರವಾಸಿ ಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನ ತಾಲೂಕು ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಶಾಸಕ ಕೆ.ಎಂ.ಉದಯ್ ಮಾತನಾಡಿದರು. ಸುನೀಲ್‌ಕುಮಾರ್, ಅಪೂರ್ವಚಂದ್ರ, ಹರೀಶ್‌ಬಾಬು, ಚಲುವರಾಜು, ಪಿ.ಸಂದರ್ಶ, ಎಚ್.ಕೆ.ಆನಂದ್ ಸೇರಿದಂತೆ ಇತರರು ಇದ್ದರು.
Published on:
Copied
Follow Us
ಪೂರ್ವಭಾವಿ ಸಭೆಯಲ್ಲಿ ಶಾಸಕ ಕೆ.ಎಂ.ಉದಯ್ ಪ್ರಕಟ
ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿ ಕೆಂಪಮ್ಮ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಕನ್ನಡ ಸಾಹಿತ್ಯ ಪರಿಷತ್‌ನ ತಾಲೂಕು ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸೆ.17ರಂದು ನಗರದ ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಸಮ್ಮೇಳನವು ಅದ್ದೂರಿಯಾಗಿ ನಡೆಯಲಿದ್ದು ರಾಜ್ಯದ ಹಿರಿಯ ಸಾಹಿತಿಗಳು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಅಷ್ಟೇ ಅಲ್ಲದೆ ತಾಲೂಕಿನ ಸಾಹಿತಿಗಳು, ಸಾಹಿತ್ಯಾಭಿಮಾನಿಗಳು ಸೇರಿದಂತೆ 4ರಿಂದ 5 ಸಾವಿರ ಜನರು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಕಸಾಪ ತಾಲೂಕು ಅಧ್ಯಕ್ಷ ಸುನಿಲ್‌ಕುಮಾರ್, ಮಾಜಿ ಅಧ್ಯಕ್ಷ ಸಿ.ಅಪೂರ್ವಚಂದ್ರ, ಮನ್‌ಮುಲ್ ಅಧ್ಯಕ್ಷ ಹರೀಶ್‌ಬಾಬು, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಚಲುವರಾಜು, ನಿರ್ದೇಶಕ ಪಿ.ಸಂದರ್ಶ, ಕಸಾಪ ಪದಾಧಿಕಾರಿಗಳಾದ ಎಚ್.ಕೆ.ಆನಂದ್, ರಮೇಶ್ ಸೇರಿದಂತೆ ಇತರರು ಇದ್ದರು.