ದತ್ತು ತೆಗೆದುಕೊಳ್ಳುವ ಮೂಲಕ ಸರ್ಕಾರಿ ಶಾಲೆ ಉಳಿವಿಗೆ ಪ್ರಯತ್ನ

ಮದ್ದೂರು ತಾಲೂಕಿನ ನಿಡಘಟ್ಟದ ಸರ್ಕಾರಿ ಪ್ರೌಢಶಾಲೆಯಲ್ಲಿ ಕದಂಬ ಅಲಯನ್ಸ್  ಕ್ಲಬ್ ಸಂಸ್ಥೆ ವತಿಯಿಂದ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣಾ ಕಾರ್ಯಕ್ರಮಕ್ಕೆ ಕೆ.ಟಿ.ಹನುಮಂತು ಚಾಲನೆ ನೀಡಿದರು. ಟಿ.ನಾಗರಾಜು, ದೇವಿಡ್, ಸುಧಾ, ಚಂದ್ರಶೇಖರ್, ಶಿವಣ್ಣ, ವಿ.ಎಸ್.ನಾಗರಾಜು, ಕೃಷ್ಣಪ್ಪ ಇತರರು ಇದ್ದರು.
ಮದ್ದೂರು ತಾಲೂಕಿನ ನಿಡಘಟ್ಟದ ಸರ್ಕಾರಿ ಪ್ರೌಢಶಾಲೆಯಲ್ಲಿ ಕದಂಬ ಅಲಯನ್ಸ್ ಕ್ಲಬ್ ಸಂಸ್ಥೆ ವತಿಯಿಂದ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣಾ ಕಾರ್ಯಕ್ರಮಕ್ಕೆ ಕೆ.ಟಿ.ಹನುಮಂತು ಚಾಲನೆ ನೀಡಿದರು. ಟಿ.ನಾಗರಾಜು, ದೇವಿಡ್, ಸುಧಾ, ಚಂದ್ರಶೇಖರ್, ಶಿವಣ್ಣ, ವಿ.ಎಸ್.ನಾಗರಾಜು, ಕೃಷ್ಣಪ್ಪ ಇತರರು ಇದ್ದರು.
Published on
ಮದ್ದೂರು: ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ವ್ಯಾಸಂಗ ಮಾಡಿ ಉನ್ನತ ಸ್ಥಾನಗಳಿಸಿ ಸಮಾಜಕ್ಕೆ ತಮ್ಮದೆಯಾದ ಕೊಡುಗೆ ನೀಡುವ ಮೂಲಕ ಎಲ್ಲರ ಗಮನ ಸೆಳೆಯಬೇಕೆಂದು ಅಲಯನ್ಸ್ ಸಂಸ್ಥೆಯ ಸೌತ್ ಮಲ್ಟಿಪಲ್ ನ ಅಧ್ಯಕ್ಷ ಕೆ.ಟಿ.ಹನುಮಂತು ತಿಳಿಸಿದರು.
ತಾಲೂಕಿನ ನಿಡಘಟ್ಟದ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಮದ್ದೂರು ಕದಂಬ ಅಲಯನ್ಸ್ ಕ್ಲಬ್ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ನೋಟ್ ಬುಕ್, ಪಠ್ಯ ಪರಿಕರಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಮುಂದೆ ಗುರಿ ಹಿಂದೆ ಗುರುವಿದ್ದರೆ ನಿಖರವಾದ ಉಜ್ವಲ ಭವಿಷ್ಯವನ್ನು ರೂಪಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬಹುದು ಎಂದು ಕಿವಿಮಾತು ಹೇಳಿದರು.
ಕಳೆದ ಒಂದು ತಿಂಗಳಿನಲ್ಲಿ ಇದುವರೆಗೆ ಸುಮಾರು 30 ಸರ್ಕಾರಿ ಶಾಲೆಗಳಿಗೆ ನೋಟ್ ಬುಕ್ ಹಾಗೂ ಪಠ್ಯ ಪರಿಕರಗಳನ್ನು ನೀಡಲಾಗಿದೆ. ಮುಂದಿನ ದಿನಗಳಲ್ಲಿ ನಿಡಘಟ್ಟ ಶಾಲೆಗೆ ಡೆಸ್ಕ್‌ಗಳನ್ನು ಅಲಯನ್ಸ್ ಸಂಸ್ಥೆಯ ವತಿಯಿಂದ ನೀಡಲಾಗುವುದು. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕೆಲವು ಕಡೆ ಸರ್ಕಾರಿ ಶಾಲೆಗಳು ಮುಚ್ಚುವ ಸ್ಥಿತಿಗೆ ಬರುತ್ತಿರುವುದು ವಿಪರ್ಯಾಸ. ಹೀಗಾದರೆ ಬಡ ವರ್ಗದ ಮಕ್ಕಳು ಶಿಕ್ಷಣ ಪಡೆಯುವುದು ಕಷ್ಟವಾಗುತ್ತದೆ. ಈ ನಿಟ್ಟಿನಲ್ಲಿ ಅಲಯನ್ಸ್ ಸಂಸ್ಥೆಯ ವತಿಯಿಂದ ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳುವ ಮೂಲಕ ಉಳಿಸುವ ಪ್ರಯತ್ನ ಮಾಡಲಾಗುವುದು ಎಂದರು.
ಮದ್ದೂರು ಕದಂಬ ಅಲಯನ್ಸ್ ಕ್ಲಬ್ ಸಂಸ್ಥಾಪಕ, ಹಿರಿಯ ವಕೀಲರಾದ ಅಲೈ ಟಿ.ನಾಗರಾಜು ಮಾತನಾಡಿ, ವಿದ್ಯಾರ್ಥಿಗಳನ್ನು ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅಪಾರ. ಆದ್ದರಿಂದ ಶಿಕ್ಷಕರನ್ನು ವಿದ್ಯಾರ್ಥಿಗಳು ಗೌರವಿಸಬೇಕು, ದೇಶಪ್ರೇಮ ಮೈಗೂಡಿಸಿಕೊಳ್ಳಬೇಕು ಹಾಗೂ ದೇಶ ಹಾಗೂ ಸಮಾಜಕ್ಕೆ ತಮ್ಮ ಕೈಲಾದ ಸೇವೆ ಸಲ್ಲಿಸಬೇಕು ಎಂದರು.
ಪ್ರತಿಭಾಂಜಲಿ ಡೇವಿಡ್, ಶಾಲೆಯ ಮುಖ್ಯ ಶಿಕ್ಷಕಿ ಸುಧಾ, ಅಲಯನ್ಸ್ ಸಂಸ್ಥೆಯ ಚಂದ್ರಶೇಖರ್, ವಕೀಲರ ಸಂಘದ ಅಧ್ಯಕ್ಷ ಶಿವಣ್ಣ, ವಕೀಲ ವಿ.ಎಸ್.ನಾಗರಾಜು, ಅಲೈ ಕೃಷ್ಣಪ್ಪ, ರಘು, ಧನಂಜಯ, ಶ್ರೀನಿವಾಸ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net