ಚುನಾವಣಾ ಆಯೋಗದ ಮಾರ್ಗಸೂಚಿ ಪಾಲಿಸಿ

ಸೋಮನಹಳ್ಳಿ ಸರ್ಕಾರಿ ಉಪಕರಣಗಳ ತರಬೇತಿ ಕೇಂದ್ರ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ (ಎಸ್‌ಐಆರ್) ತಾಲೂಕು ಮಟ್ಟದ ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ್ ಮಾತನಾಡಿದರು. ರಾಧಿಕಾ, ಮತದಾರರ ನೋಂದಣಾಧಿಕಾರಿ, ಚುನಾವಣಾ ವಿಭಾಗದ ಸಿಬ್ಬಂದಿ ಇದ್ದರು.
ಸೋಮನಹಳ್ಳಿ ಸರ್ಕಾರಿ ಉಪಕರಣಗಳ ತರಬೇತಿ ಕೇಂದ್ರ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ (ಎಸ್‌ಐಆರ್) ತಾಲೂಕು ಮಟ್ಟದ ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ್ ಮಾತನಾಡಿದರು. ರಾಧಿಕಾ, ಮತದಾರರ ನೋಂದಣಾಧಿಕಾರಿ, ಚುನಾವಣಾ ವಿಭಾಗದ ಸಿಬ್ಬಂದಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಅಧಿಕಾರಿಗಳಿಗೆ ಡಿಸಿ ಡಾ. ಕುಮಾರ್ ಸೂಚನೆ
  • ತರಬೇತಿ ಕಾರ್ಯಾಗಾರ
ಮದ್ದೂರು: ತಾಲೂಕಿನ ಸೋಮನಹಳ್ಳಿ ಸರ್ಕಾರಿ ಉಪಕರಣಗಳ ತರಬೇತಿ ಕೇಂದ್ರ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಮತದಾರರ ಪಟ್ಟಿಯ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ರಮದ ಅಂಗವಾಗಿ ತಾಲೂಕು ಮಟ್ಟದ ತರಬೇತಿ ಕಾರ್ಯಾಗಾರಕ್ಕೆ ಜಿಲ್ಲಾಧಿಕಾರಿಗಳು ಡಾ.ಕುಮಾರ್ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತರಬೇತಿ ಕಾರ್ಯಾಗಾರದ ವೇಳೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ. ಕುಮಾರ್ ಸೂಚಿಸಿದರು.
ಮತದಾರರ ಹೆಸರು ಸೇರ್ಪಡೆ, ಹೆಸರು ಕೈಬಿಡುವಿಕೆ, ತಿದ್ದುಪಡಿ ಹಾಗೂ ವಿಳಾಸ ಬದಲಾವಣೆ ಸೇರಿದಂತೆ ಎಲ್ಲ ಪ್ರಕ್ರಿಯೆಗಳನ್ನು ಚುನಾವಣಾ ಆಯೋಗದ ಮಾರ್ಗಸೂಚಿಗಳ ಅನುಸಾರ ಪಾರದರ್ಶಕವಾಗಿ ಮತ್ತು ನಿಖರವಾಗಿ ಕೈಗೊಳ್ಳುವಂತೆ ತಿಳಿಸಿದರು.
ಜಿಲ್ಲಾಧಿಕಾರಿಗಳು ತರಬೇತಿ ಕಾರ್ಯಾಗಾರದ ವ್ಯವಸ್ಥೆಗಳನ್ನು ಪರಿಶೀಲಿಸಿ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಎಲ್ಲ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಕರೆ ನೀಡಿದರು.
ಮನೆ-ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿಯನ್ನು ಸಮರ್ಪಕವಾಗಿ ಪರಿಶೀಲಿಸಬೇಕು. ಅರ್ಹ ಮತದಾರರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಬೇಕು. ಸಾರ್ವಜನಿಕರಿಂದ ಸ್ವೀಕರಿಸುವ ಅರ್ಜಿಗಳನ್ನು ಆದ್ಯತೆಯ ಮೇರೆಗೆ ಪರಿಶೀಲಿಸಿ, ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕಾರ್ಯಾಗಾರದಲ್ಲಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಓ), ಮೇಲ್ವಿಚಾರಕರು, ನೂಡಲ್ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿಗೆ ಅರ್ಜಿ ನಮೂನೆಗಳ ನಿರ್ವಹಣೆ, ದಾಖಲೆಗಳ ಪರಿಶೀಲನೆ, ಮತದಾರರ ಮಾಹಿತಿಯ ದೃಢೀಕರಣ, ಆನ್‌ಲೈನ್ ಸೇವೆಗಳ ಬಳಕೆ ಹಾಗೂ ಚುನಾವಣಾ ಆಯೋಗದ ಇತ್ತೀಚಿನ ನಿರ್ದೇಶನಗಳ ಕುರಿತು ಸಮಗ್ರ ಮಾಹಿತಿ ನೀಡಲಾಯಿತು.
ಮತದಾರರ ನೋಂದಣಾಧಿಕಾರಿ, ನಗರಸಭೆ ಪೌರಾಯುಕ್ತೆ ರಾಧಿಕಾ, ಮದ್ದೂರು ಚುನಾವಣಾ ವಿಭಾಗದ ಸಿಬ್ಬಂದಿ ಹಾಗೂ ಸಂಬಂಧಿತ ಇಲಾಖೆಗಳ ಸಿಬ್ಬಂದಿ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net