ಸಿದ್ದರಾಮೇಶ್ವರ ಸ್ವಾಮಿ ಸೇವಾ ಸಮಿತಿ ಸದಸ್ಯರ ಆಯ್ಕೆ

Election of members
Election of members
Published on
ಸುಮಾರು 8 ಕೋಟಿ ರೂ.ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುವ ಶ್ರೀ ಸಿದ್ದರಾಮೇಶ್ವರ ದೇವಸ್ಥಾನ ಹಾಗೂ ಸಮುದಾಯ ಭವನದ ಉಸ್ತುವಾರಿಯನ್ನು ಶ್ರೀ ಮಲ್ಲಮ್ಮ ಶ್ರೀ ಸಿದ್ದರಾಮೇಶ್ವರ ಸ್ವಾಮಿ ಸೇವಾ ಸಮಿತಿಗೆ ಸದಸ್ಯರಿಗೆ ವಹಿಸಲಾಗಿದ್ದು ಮುಂದಿನ ದಿನಗಳಲ್ಲಿ ದೇಗುಲದ ಕಾರ್ಯಕಲಾಪಗಳನ್ನು ಸಮಿತಿ ಸದಸ್ಯರು ಸಮರ್ಥವಾಗಿ ನಿಭಾಯಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಪಟ್ಟಲದಮ್ಮಸೇವಾ ಟ್ರಸ್ಟ್ ಅಧ್ಯಕ್ಷ ಮಾದನಾಯಕನಹಳ್ಳಿ ರಾಜಣ್ಣ ತಿಳಿಸಿದರು.
ಮದ್ದೂರು ತಾಲೂಕು ಮಾದನಾಯಕನಹಳ್ಳಿ ಗ್ರಾಮದಲ್ಲಿ ಸೋಮವಾರ ಶ್ರೀ ಮಲ್ಲಮ್ಮ ಶ್ರೀ ಸಿದ್ದರಾಮೇಶ್ವರ ಸ್ವಾಮಿ ಸೇವಾ ಸಮಿತಿಗೆ ಸದಸ್ಯರ ಆಯ್ಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಶ್ರೀ ಸಿದ್ದರಾಮೇಶ್ವರ ಸ್ವಾಮಿ ದೇಗುಲಕ್ಕೆ ಸಾವಿರಾರು ವರ್ಷದ ಇತಿಹಾಸವಿದೆ. ಈ ದೇವಸ್ಥಾನದ ಜೀರ್ಣೋದ್ಧಾರಕ್ಕೆ ದಾನಿಗಳು, ಸಾರ್ವಜನಿಕರು ಹಾಗೂ ಮಾದನಾಯಕನಹಳ್ಳಿ ಗ್ರಾಮಸ್ಥರು ಸಹಕರಿಸಿದ್ದಾರೆ. ಎಲ್ಲರ ಸಹಕಾರದೊಂದಿಗೆ ಭವ್ಯ ದೇಗುಲ ಲೋಕಾರ್ಪಣೆಗೊಂಡಿದೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಶ್ರೀ ಸಿದ್ದರಾಮೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಬಂಧಿಸಿದಂತೆ ನಡೆಯುವ ಎಲ್ಲ ಉತ್ಸವ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಉಸ್ತುವಾರಿಯನ್ನು ಸಮಿತಿ ಸದಸ್ಯರು ನಿರ್ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಉತ್ಸವ ಮೂರ್ತಿ ಅನಾವರಣ:
ಶ್ರೀ ಸಿದ್ದರಾಮೇಶ್ವರ ಸ್ವಾಮಿ ದೇಗುಲದ ಗರ್ಭಗುಡಿಯಲ್ಲಿ ಮೂಲದೇವರ ಪ್ರತಿಷ್ಟಾಪನೆ ಮಾಡಲಾಗಿದ್ದು, ಉತ್ಸವ ಮೂರ್ತಿಯಾಗಿ ಹೊಸ ಮೂರ್ತಿಯನ್ನು ಅನಾವರಣಗೊಳಿಸಲಾಗಿದೆ ಎಂದು ಸಮಿತಿ ಸದಸ್ಯರು ತಿಳಿಸಿದರು.
ಸಮಿತಿ ಸದಸ್ಯರು:
ಅಪ್ಪಾಜಿ, ರವಿ, ಶಿವಣ್ಣ, ರಮೇಶ್, ಪುಟ್ಟರಾಮ, ಮಲ್ಲಣ್ಣ, ಸಿದ್ದರಾಮು, ಸ್ವಾಮಿ, ಶೇಕರ್, ಪುಟ್ಟಯ್ಯ, ರಾಮಚಂದ್ರ ಆತ್ಮಾನಂದ ಇವರನ್ನು ಸಮಿತಿ ಸದಸ್ಯರನ್ನಾಗಿ ಅಧ್ಯಕ್ಷ ರಾಜಣ್ಣ ನೇಮಕ ಮಾಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net