ರಾಜ್ಯದ ಐದು ವಿದ್ಯುತ್ ವಿತರಣಾ ಕಂಪನಿ ಸಂಪೂರ್ಣ ಕರ್ನಾಟಕ ಸರ್ಕಾರದ ಸ್ವಾಮ್ಯದಲ್ಲಿದೆ. ಅದರಂತೆ ಸಾರ್ವಜನಿಕ ಹಿತಾಸಕ್ತಿ ಮತ್ತು ಸೇವಾ ದೃಷ್ಟಿಯಿಂದ ಕರ್ತವ್ಯ ನಿರ್ವಹಿಸುತ್ತಿದ್ದು, ಖಾಸಗಿಯವರು ವಿತರಣಾ ಜಾಲಕ್ಕೆ ಆಗಮಿಸಿದರೆ ಸರ್ಕಾರದ ನಿಯಂತ್ರಣವಿಲ್ಲದೆ ಲಾಭ ಮಾಡುವ ಏಕೈಕ ದೃಷ್ಟಿಯಿಂದ ಕಾರ್ಯಪ್ರವೃತ್ತರಾಗುತ್ತಾರೆ. ಇದಲ್ಲದೆ ನಿಗಮದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಾವಿರಾರು ಅಧಿಕಾರಿ/ನೌಕರರು ಹಾಗೂ ಪಿಂಚಣಿದಾರರ ಸೇವಾ ಭದ್ರತೆ, ಸಂಬಳ, ಸೌಲಭ್ಯಕ್ಕೆ ಆಪತ್ತು ಎದುರಾಗುವ ಸಂಭವ ಅಧಿಕವಾಗಿರುತ್ತದೆ. ಮಾತ್ರವಲ್ಲದೆ ಸಾರ್ವಜನಿಕರಿಗೆ ಸಿಗುತ್ತಿರುವ ಉಚಿತ ವಿದ್ಯುತ್ ಸೌಲಭ್ಯ, ರೈತರ ಪಂಪ್‌ಸೆಟ್‌ಗಳಿಗೆ ನೀಡುತ್ತಿರುವ ಉಚಿತ ವಿದ್ಯುತ್ ಸೌಲಭ್ಯಗಳಿಗೆ, ಮುಂದಿನ ದಿನಗಳಲ್ಲಿ ತೊಡಕುವುಂಟಾಗುವ ಸಾಧ್ಯತೆಗಳು ದಟ್ಟವಾಗಿವೆ ಎಂದು ಆತಂಕ ವ್ಯಕ್ತಪಡಿಸಿದರು.