ರಸ್ತೆ, ಚರಂಡಿ ಅಭಿವೃದ್ಧಿಗೆ ಒತ್ತು

ಕೂಳಗೆರೆ ಗ್ರಾಮದಲ್ಲಿ ಕಾವೇರಿ ನೀರಾವರಿ ನಿಗಮದ ವತಿಯಿಂದ ಐದು ಕೋಟಿ ವೆಚ್ಚದಲ್ಲಿ ಗ್ರಾಮ ಪರಿಮಿತಿ ರಸ್ತೆ ಮತ್ತು ಸಿ.ಸಿ ಚಂರಡಿಗಳ ನಿರ್ಮಾಣ ಕಾಮಗಾರಿಗೆ ಶಾಸಕ ಕದಲೂರು ಉದಯ್ ಭೂಮಿಪೂಜೆ ನೆರವೇರಿಸಿದರು.
ಕೂಳಗೆರೆ ಗ್ರಾಮದಲ್ಲಿ ಕಾವೇರಿ ನೀರಾವರಿ ನಿಗಮದ ವತಿಯಿಂದ ಐದು ಕೋಟಿ ವೆಚ್ಚದಲ್ಲಿ ಗ್ರಾಮ ಪರಿಮಿತಿ ರಸ್ತೆ ಮತ್ತು ಸಿ.ಸಿ ಚಂರಡಿಗಳ ನಿರ್ಮಾಣ ಕಾಮಗಾರಿಗೆ ಶಾಸಕ ಕದಲೂರು ಉದಯ್ ಭೂಮಿಪೂಜೆ ನೆರವೇರಿಸಿದರು.
Published on
ಕೆ.ಎಂ.ದೊಡ್ಡಿ: ಕೂಳಗೆರೆ ಗ್ರಾಮದ ರಸ್ತೆ ಮತ್ತು ಚರಂಡಿ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದೆನೆ ಎಂದು ಸಾಸಕ ಕದಲೂರು ಉದಯ್ ತಿಳಿಸಿದರು.
ಸಮೀಪದ ಕೂಳಗೆರೆ ಗ್ರಾಮದಲ್ಲಿ ಕಾವೇರಿ ನೀರಾವರಿ ನಿಗಮದ ವತಿಯಿಂದ 5ಕೋಟಿ ರೂ. ವೆಚ್ಚದಲ್ಲಿ ಗ್ರಾಮ ಪರಿಮಿತಿ ರಸ್ತೆ ಮತ್ತು ಸಿ.ಸಿ ಚರಂಡಿಗಳ ನಿರ್ಮಾಣ ಕಾಮಗಾರಿ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಗ್ರಾಮದಲ್ಲಿ ರಸ್ತೆ ಹಾಗೂ ಚರಂಡಿಗಳು ಸಂಪೂರ್ಣ ಹಾಳಾಗಿವೆ ಎಂದು ಗ್ರಾಮಸ್ಥರು ಮನವಿ ಸಲ್ಲಿಸಿದ್ದರು. ಅದಕ್ಕೆ ಪೂರಕವಾಗಿ ಸರ್ಕಾರದಿಂದ ಅನುದಾನ ತಂದು ಗ್ರಾಮದಲ್ಲಿನ ಸಾರ್ವಜನಿಕರ ಉಪಯೋಗಕ್ಕಾಗಿ ಸುಮಾರು 3 ಕಿ.ಮೀ. ವ್ಯಾಪ್ತಿಯಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಸಿ.ಸಿ ಚರಂಡಿಗಳ ಕಾಮಗಾರಿಗೆ ಚಾಲನೆ ನೀಡಿದ್ದೇನೆ ಎಂದರು.
ಕಾವೇರಿ ನೀರಾವರಿ ನಿಗಮದ ವತಿಯಿಂದ 3 ಕೋಟಿ ರೂ. ವೆಚ್ಚದಲ್ಲಿ ಕೂಳಗೆರೆ ನೀರಾವರಿ ಯೋಜನೆಗಳ ಮೂಲಕ ಸುಮಾರು 2 ಎರಡು ವರ್ಷಗಳ ಅವಧಿಯಲ್ಲಿ ಕೆರೆಯನ್ನು ಅಭಿವೃದ್ಧಿಪಡಿಸಿ ನೀರನ್ನು ತುಂಬಿಸಲಾಗಿದ್ದು, ಕೂಳಗೆರೆ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸುಮಾರು 200 ಎಕರೆಗೂ ಹೆಚ್ಚಿನ ಜಮೀನುಗಳಿಗೆ ನೀರು ಒದಗಿಸಲು ಕ್ರಮ ವಹಿಸಲಾಗಿದೆ ಎಂದರು.
ಕೆರೆಯಲ್ಲಿ ನೀರು ಶೇಖರಣೆಯಾಗುವುದರಿಂದ ಅಂತರ್ಜಲ ವೃದ್ಧಿಯಾಗುವುದರ ಜತೆಗೆ ಪಂಪ್‌ಸೆಟ್‌ಗಳಿಗೆ ನೀರು ಸಮರ್ಪಕವಾಗಿ ದೊರೆಯುವುದರಿಂದ ರೈತರು ಉತ್ತಮವಾಗಿ ಬೆಳೆ ಬೆಳೆಯಬಹುದು. ಇದರಿಂದ ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೇಸಿಗೆ ಆರಂಭವಾಗಿದ್ದರಿಂದ ಈ ಭಾಗದ ಜನರಿಗೆ ನೀರು ಒದಗಿಸಲು ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಶೀಘ್ರದಲ್ಲೇ ಬನ್ನಹಳ್ಳಿ ಹಾಗೂ ಕೂಳಗೆರೆ ಏತ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ ಎರಡು ಮೂರು ತಿಂಗಳ ಒಳಗೆ ಚಾಲನೆ ನೀಡಿ ಈ ಭಾಗದ ರೈತರ ಕಲ್ಯಾಣಕ್ಕೆ ಕೈ ಜೋಡಿಸಲಾಗುವುದು ಎಂದು ತಿಳಿಸಿದರು.
ಮನ್‌ಮುಲ್ ನಿರ್ದೇಶಕ ಹರೀಶ್ ಬಾಬು, ಗ್ರಾ.ಪಂ. ಅಧ್ಯಕ್ಷ ಕೆಂಪರಾಜು, ಸದಸ್ಯ ಕೆ.ಎಲ್.ಜಯರಾಮ್, ಮಾದೇಶ್, ಕೆಡಿಪಿ ಸದಸ್ಯ ಅರುವನಹಳ್ಳಿ ಸಿದ್ದರಾಜು, ಮುಖಂಡರಾದ ಯೋಗಾನಂದ, ಯೋಗೇಶ್, ಮಲ್ಲರಾಜು, ರಾಮಕೃಷ್ಣ, ಕುಮಾರ್, ಗುಂಡ, ಸಿದ್ದು, ತಿಪ್ಪೂರು ಶಿವರಾಮು, ಶಶಿ, ತಿಪ್ಪೂರು ದಿಂಗತ್, ಎ.ಕೆ.ಸಿದ್ದರಾಜು, ಕಾರ್ಯಪಾಲಕ ಅಭಿಯಂತರಾದ ಮೋಹನ್, ನವೀನ್, ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net