ಬೆಸಗರಹಳ್ಳಿ ಅಭಿವೃದ್ಧಿಗೆ ಒತ್ತು

ಮದ್ದೂರು ತಾಲೂಕಿನ ಪಣ್ಣೆದೊಡ್ಡಿ ಗೇಟ್‌ನಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಶಾಸಕ ಕೆ.ಎಂ.ಉದಯ್ ಅವರನ್ನು ಅಭಿನಂದಿಸಿದರು. ಗೋಪಿ, ಪಣ್ಣೆದೊಡ್ಡಿ ಸುಧಾಕರ್, ಸನೀಲ್, ಮುರಳಿ, ನಾಗರಾಜು, ಶೋಭಾ, ತಿಮ್ಮೇಗೌಡ, ಪುಟ್ಟಸ್ವಾಮಿ ಇದ್ದರು.
ಮದ್ದೂರು ತಾಲೂಕಿನ ಪಣ್ಣೆದೊಡ್ಡಿ ಗೇಟ್‌ನಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಶಾಸಕ ಕೆ.ಎಂ.ಉದಯ್ ಅವರನ್ನು ಅಭಿನಂದಿಸಿದರು. ಗೋಪಿ, ಪಣ್ಣೆದೊಡ್ಡಿ ಸುಧಾಕರ್, ಸನೀಲ್, ಮುರಳಿ, ನಾಗರಾಜು, ಶೋಭಾ, ತಿಮ್ಮೇಗೌಡ, ಪುಟ್ಟಸ್ವಾಮಿ ಇದ್ದರು.
Published on
ಮದ್ದೂರು: ಬೆಸಗರಹಳ್ಳಿ ಜಿಲ್ಲಾ ವ್ಯಾಪ್ತಿಯಲ್ಲಿ ಸಮರೋಪಾದಿಯಲ್ಲಿ ಅಭಿವೃದ್ಧಿ ಕಾರ್ಯಕ್ರಮ ಕೈಗೊಂಡು ರೈತರು ಹಾಗೂ ಗ್ರಾಮಸ್ಥರಿಗೆ ಅನುಕೂಲ ಕಲ್ಪಿಸಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ತಾಲೂಕಿನ ಪಣ್ಣೆದೊಡ್ಡಿ ಗೇಟ್‌ನಲ್ಲಿ ಮಂಗಳವಾರ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
ನಾನು ಶಾಸಕನಾಗಿ ಆಯ್ಕೆಯಾದ ಬಳಿಕ ಬೆಸಗರಹಳ್ಳಿ ಜಿಲ್ಲಾ ವ್ಯಾಪ್ತಿಯಲ್ಲಿ ಗ್ರಾಮ ಸಭೆ ನಡೆಸಿದಾಗ ರಸ್ತೆ, ಕಾಲುವೆ, ಚರಂಡಿ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳನ್ನು ಜನರು ನನ್ನ ಗಮನಕ್ಕೆ ತಂದರು. ಸಮಸ್ಯೆಗಳನ್ನು ಪಟ್ಟಿಕೊಂಡು ಸರ್ಕಾರದಿಂದ ಕೋಟ್ಯಂತರ ರೂ. ಅನುದಾನ ತಂದು ಆದ್ಯತೆ ಮೇರೆಗೆ ರಸ್ತೆ, ಕಾಲುವೆ, ಚರಂಡಿ ಸೇರಿದಂತೆ ಮೂಲ ಸೌಕರ್ಯಕ್ಕೆ ಒತ್ತು ನೀಡಿ, ಭಾಗದ ಜನರಿಗೆ ಅನುಕೂಲ ಕಲ್ಪಿಸಿದ್ದೇನೆ ಎಂದರು.
ಪಣ್ಣೆದೊಡ್ಡಿ ಒಂದೇ ಗ್ರಾಮದಲ್ಲಿ ಸುಮಾರು 6 ಕೋಟಿ ರೂ.ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಗ್ರಾಮದಲ್ಲಿ ಕಾಲುವೆಗಳು ಹಲವು ವರ್ಷಗಳಿಂದ ಆಧುನಿಕರಣವಾಗದ ಹಿನ್ನೆಲೆಯಲ್ಲಿ ಸಮರ್ಪಕವಾಗಿ ಜಮೀನುಗಳಿಗೆ ವ್ಯವಸಾಯ ಮಾಡಲು ನೀರು ಹರಿಯುತ್ತಿರಲಿಲ್ಲ. ಈಗ ಕಾಮಗಾರಿ ಕೈಗೊಂಡಿರುವುದರಿಂದ ನೀರು ಸುಗಮವಾಗಿ ಹರಿದು ರೈತರಿಗೆ ಅನುಕೂಲವಾಗಲಿದೆ ಎಂದರು.
ಮುಂದೆಯೂ ಸರ್ಕಾರದಿಂದ ವಿಶೇಷ ಅನುದಾನ ತಂದು ಬೆಸಗರಹಳ್ಳಿ ಜಿಪಂ ವ್ಯಾಪ್ತಿಯ ಪ್ರತಿಯೊಂದು ಹಳ್ಳಿಗೂ ಮೂಲ ಸೌಕರ್ಯ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಇದೇ ವೇಳೆ ಪಣ್ಣೆದೊಡ್ಡಿ ಅಡ್ಡ ರಸ್ತೆಯಲ್ಲಿರುವ ವೀರಾಂಜನೇಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಅನ್ನಸಂತರ್ಪಣೆ ಮಾಡಲಾಗಿತು.
ಪ್ರಮುಖರಾದ ಗೋಪಿ, ಪಣ್ಣೆದೊಡ್ಡಿ ಸುಧಾಕರ್, ಸುನೀಲ್, ಮುರಳಿ, ನಾಗರಾಜು, ಶೋಭಾ, ತಿಮ್ಮೇಗೌಡ, ಪುಟ್ಟಸ್ವಾಮಿ, ಗೋವಿಂದ, ಮಾರಸಿಂಗನಹಳ್ಳಿ ರಾಮಚಂದ್ರ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net