ಗ್ರಾಮಗಳ ರಸ್ತೆ ಅಭಿವೃದ್ಧಿಗೆ ಒತ್ತು

 ನಾಗಮಂಗಲ ತಾಲೂಕಿನ ಯಗಟಹಳ್ಳಿ ಗ್ರಾಮದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಭಾನುವಾರ ಭೂಮಿಪೂಜೆ ನೆರವೇರಿಸಿದರು. ಸತೀಶ್‌ಕುಮಾರ್, ಆದರ್ಶ್, ಕೃಷ್ಣಮೂರ್ತಿ, ಲೋಕೇಶ್, ರಾಮಿ ಇತರರಿದ್ದರು.
ನಾಗಮಂಗಲ ತಾಲೂಕಿನ ಯಗಟಹಳ್ಳಿ ಗ್ರಾಮದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಭಾನುವಾರ ಭೂಮಿಪೂಜೆ ನೆರವೇರಿಸಿದರು. ಸತೀಶ್‌ಕುಮಾರ್, ಆದರ್ಶ್, ಕೃಷ್ಣಮೂರ್ತಿ, ಲೋಕೇಶ್, ರಾಮಿ ಇತರರಿದ್ದರು.
Published on

ಸಚಿವ ಎನ್.ಚಲುವರಾಯಸ್ವಾಮಿ ಹೇಳಿಕೆ

ನಾಗಮಂಗಲ: ಗ್ರಾಮೀಣ ಪ್ರದೇಶಗಳ ರಸ್ತೆಗಳು ಅಭಿವೃದ್ಧಿಯಾದರೆ ಹಳ್ಳಿಗಳ ಮೂಲ ಸಮಸ್ಯೆಗಳು ಬಹುತೇಕ ಪರಿಹಾರವಾದಂತಾಗಲಿದೆ. ಆದ್ದರಿಂದ ಗ್ರಾಮೀಣ ಪ್ರದೇಶದ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ತಾಲೂಕಿನ ಯಗಟಹಳ್ಳಿ ಗ್ರಾಮದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಭಾನುವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ಜನತೆ ತಮ್ಮ ಗ್ರಾಮಗಳ ಮೂಲ ಸಮಸ್ಯೆಗಳಿಗಷ್ಟೇ ನಮ್ಮ ಬಳಿ ಮನವಿ ಮಾಡುತ್ತಾರೆ. ಹಳ್ಳಿಯ ಜನತೆಗೆ ನಾವು ಪಟ್ಟಣಗಳಲ್ಲಿ ಅಥವಾ ರಾಜ್ಯದಲ್ಲಿ ಎಷ್ಟೇ ದೊಡ್ಡ ಯೋಜನೆಗಳನ್ನು ರೂಪಿಸಿದರೂ ಅದು ಲೆಕ್ಕಕ್ಕೆ ಬರುವುದಿಲ್ಲ. ನಮ್ಮ ಗ್ರಾಮದಲ್ಲಿ ಕೆಲಸ ಆಗಿಲ್ಲ ಎನ್ನುವುದಷ್ಟೇ ಅವರ ಮುಖ್ಯವಾದ ಮನವಿಯಾಗಿರುತ್ತದೆ. ತಾಲೂಕಿನಲ್ಲಿ ಹಲವು ಗ್ರಾಮಗಳಲ್ಲಿ ಈಗಾಗಲೇ ರಸ್ತೆ ಅಭಿವೃದ್ಧಿಪಡಿಸಲಾಗಿದೆ. ಉಳಿದಂತಹ ಎಲ್ಲ ಗ್ರಾಮಗಳ ರಸ್ತೆಗಳನ್ನು ಮುಂದಿನ 2 ವರ್ಷಗಳಲ್ಲಿ ಮಾಡಲಾಗುವುದು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ನೀಡುವುದರ ಜತೆಗೆ ಈ ಹಿಂದಿನ ಸರ್ಕಾರಗಳು ಮಾಡಲಾಗದಂತಹ ವಿಶೇಷ ಯೋಜನೆಗಳನ್ನು ಜಾರಿಗೊಳಿಸುವ ಜತೆ ಜತೆಗೆ ಅಭಿವೃದ್ಧಿ ಕೆಲಸಗಳಿಗೂ ಅನುದಾನ ನೀಡಲಾಗುತ್ತಿದೆ. ಜನತೆ ಕೆಲಸ ಮಾಡುವವರನ್ನು ಬೆಂಬಲಿಸಬೇಕೇ ವಿನಃ ಚುನಾವಣೆಯ ಸಂದರ್ಭದಲ್ಲಿ ಕೆಲವರು ಬಂದು ಹೇಳುವ ಸುಳ್ಳುಗಳಿಗೆ ಕಿವಿಗೊಡಬೇಡಿ ಮನವಿ ಮಾಡಿದರು.
ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಯಾವುದೇ ಲೋಪವಾಗದಂತೆ ಪರೀಕ್ಷೆಗಳನ್ನು ನಡೆಸುವುದರ ಜತೆಗೆ ಫಲಿತಾಂಶದಲ್ಲಿ ಜಿಲ್ಲೆಗೆ ನಾಗಮಂಗಲ ತಾಲೂಕು ಪ್ರಥಮ ಸ್ಥಾನ ಬರಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ತಾಪಂ ಇಒ ಸತೀಶ್‌ಕುಮಾರ್, ತಹಸೀಲ್ದಾರ್ ಆದರ್ಶ್, ಸಿಡಿಪಿಒ ಕೃಷ್ಣಮೂರ್ತಿ, ಮುಖಂಡರಾದ ಲೋಕೇಶ್, ರಾಮಿ, ರಾಜೇಗೌಡ, ಗಿರೀಶ್ ಸೇರಿದಂತೆ ಮತ್ತಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net