ಮೇಲುಕೋಟೆಯಂತ ಐತಿಹಾಸಿಕವಾದ ಪ್ರಮುಖ ಸ್ಥಳದಲ್ಲಿ ಯಾವುದೇ ಖಾಸಗಿ ಶಾಲೆಗೂ ಕಡಿಮೆ ಇಲ್ಲದಂತೆ ಉಚಿತವಾಗಿ ಶತಮಾನದ ಸರ್ಕಾರಿ ಶಾಲೆ ವಾರ್ಷಿಕೋತ್ಸವ ನಡೆಸುತ್ತಿರುವುದು ಶ್ಲಾಘನೀಯ. ವಿವಿಧ ಹಳ್ಳಿಗಳಿಂದ ಬರುವ ಮಕ್ಕಳಿಗೆ ಉಚಿತ ವಾಹನ ವ್ಯವಸ್ಥೆ, ಉಚಿತ ಪ್ರವಾಸ, ಉಚಿತ ಎಲ್‌ಕೆಜಿ-ಯುಕೆಜಿ ತರಗತಿಗೆ ದಾಖಲಾತಿ, ಬ್ಯಾಗ್, ಐಡಿ ಕಾರ್ಡ್, ಲೇಖನ ಸಾಮಗ್ರಿಗಳು ಹೀಗೆ ಎಲ್ಲವನ್ನೂ ದಶಕಗಳಿಂದ ಸಂಪೂರ್ಣ ಉಚಿತವಾಗಿ ಕೊಡಿಸಲು ಶ್ರಮಿಸುತ್ತಿರುವ ಮುಖ್ಯ ಶಿಕ್ಷಕ ಸಂತಾನರಾಮನ್ ಪರಿಶ್ರಮ ಶ್ಲಾಘನೀಯ. ಅವರಿಗೆ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಿರುವುದು ಅರ್ಥಪೂರ್ಣವಾಗಿದೆ ಎಂದರು.