ಪೌರಕಾರ್ಮಿಕರಿಗೆ ಸವಲತ್ತು ತಲುಪಿಸಿ

ಮದ್ದೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೌರಕಾರ್ಮಿಕರ ಕುಂದು ಕೊರತೆ ಸಭೆಯಲ್ಲಿ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಸಿ.ಶಂಕರ್ ಅಂಕನ ಶೆಟ್ಟಿಪುರ ಮಾತನಾಡಿದರು. ಶ್ರೀಧರ್, ನಾಗರತ್ನಾ, ರವಿಕುಮಾರ್ ಇದ್ದರು.
ಮದ್ದೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೌರಕಾರ್ಮಿಕರ ಕುಂದು ಕೊರತೆ ಸಭೆಯಲ್ಲಿ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಸಿ.ಶಂಕರ್ ಅಂಕನ ಶೆಟ್ಟಿಪುರ ಮಾತನಾಡಿದರು. ಶ್ರೀಧರ್, ನಾಗರತ್ನಾ, ರವಿಕುಮಾರ್ ಇದ್ದರು.
Published on
ಮದ್ದೂರು: ಸಾರ್ವಜನಿಕರಿಗೆ ಸ್ವಚ್ಛತಾ ಸೇವೆ ನೀಡುವ ಪೌರಕಾರ್ಮಿಕರಿಗೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಅಗತ್ಯ ಮೂಲಸೌಕರ್ಯ ಒದಗಿಸಬೇಕೆಂದು ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಸಿ.ಶಂಕರ್ ಅಂಕನ ಶೆಟ್ಟಿಪುರ ತಿಳಿಸಿದರು.
ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಮದ್ದೂರು ಹಾಗೂ ಮಳವಳ್ಳಿ ತಾಲೂಕುಗಳ ವ್ಯಾಪ್ತಿಯ ಪೌರಕಾರ್ಮಿಕರ ಕುಂದು ಕೊರತೆ ಆಲಿಸುವ ಉದ್ದೇಶದಿಂದ ಆಯೋಜಿಸಿದ್ದ ಸಭೆಯಲ್ಲಿ ಪೌರಕಾರ್ಮಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದರು. ಹಲವೆಡೆ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ನಿವೇಶನಗಳನ್ನೇ ನೀಡಿಲ್ಲ. ಕೆಲವೆಡೆ ನಿವೇಶನ ನೀಡಿದ್ದರೂ ಹಕ್ಕುಪತ್ರ ನೀಡಿಲ್ಲ ಎಂದು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಬೇಸರ ವ್ಯಕ್ತಪಡಿಸಿದರು.
ಆರೋಗ್ಯದ ವಿಷಯದಲ್ಲಿ ಸ್ಥಳೀಯ ಸಂಸ್ಥೆಗಳು ಮುತುವರ್ಜಿವಹಿಸಬೇಕು. ಕೆಲವೆಡೆ ಮೂರು ತಿಂಗಳಾದರೂ ವೇತನ ನೀಡುತ್ತಿಲ್ಲ ಎಂಬ ದೂರುಗಳಿವೆ. ನಿಗದಿತ ಸಮಯಕ್ಕೆ ವೇತನ ನೀಡಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಪೌರಕಾರ್ಮಿಕರೊಬ್ಬರು ನಮಗೆ ಓದಲು ಅನುಕೂಲವಾಗುವಂತೆ ಗ್ರಂಥಾಲಯ ನಿರ್ಮಿಸಿಕೊಡಿ ಎಂದು ಮನವಿ ಮಾಡಿದರು. ಇದರಿಂದ ಸಂತೋಷಗೊಂಡ ಆಯೋಗದ ಸದಸ್ಯ ಶಂಕರ್, ಶೀಘ್ರ ಗ್ರಂಥಾಲಯ ನಿರ್ಮಿಸಿಕೊಡುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರಸಭೆ ವ್ಯವಸ್ಥಾಪಕ ಶ್ರೀಧರ್, ಮಳವಳ್ಳಿ ಪುರಸಭೆ ಮುಖ್ಯಾಧಿಕಾರಿ ನಾಗರತ್ನಾ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರವಿಕುಮಾರ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net