ವಿನಾಶದಂಚಿನಲ್ಲಿ ಜೀವ ಪ್ರಪಂಚ: ಮಲ್ಟಿಪಲ್ ಕೌನ್ಸಿಲ್ ಅಧ್ಯಕ್ಷ ಕೆ.ಟಿ.ಹನುಮಂತು ಆತಂಕ

ಮಂಡ್ಯ ನಗರದ ಸರ್ಕಾರಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು(ಕಲ್ಲುಕಟ್ಟಡ) ಆವರಣದಲ್ಲಿ ಮಲ್ಟಿಪಲ್ ಕೌನ್ಸಿಲ್ ಅಧ್ಯಕ್ಷ ಕೆ.ಟಿ.ಹನುಮಂತು ಉದ್ಘಾಟಿಸಿದರು.
ಮಂಡ್ಯ ನಗರದ ಸರ್ಕಾರಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು(ಕಲ್ಲುಕಟ್ಟಡ) ಆವರಣದಲ್ಲಿ ಮಲ್ಟಿಪಲ್ ಕೌನ್ಸಿಲ್ ಅಧ್ಯಕ್ಷ ಕೆ.ಟಿ.ಹನುಮಂತು ಉದ್ಘಾಟಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಸರ್ಕಾರಿ ಬಾಲಕಿಯರ ಕಾಲೇಜಿನಲ್ಲಿ ಸಸ್ಯೋತ್ಸವ
  • ಕೃಷಿಕ ಅಲಯನ್ಸ್ ಸಂಸ್ಥೆ, ಮಾಂಡವ್ಯ ಅಲಯನ್ಸ್ ಸಂಸ್ಥೆ ಸಹಯೋಗದಲ್ಲಿ ಆಯೋಜನೆ
ಮಂಡ್ಯ: ಜಾಗತೀಕರಣದಿಂದ ತಾಪಮಾನ ಹೆಚ್ಚಾಗುತ್ತಿದೆ. ಪರಿಣಾಮ ಜೀವ ಪ್ರಪಂಚ ವಿನಾಶದಂಚಿನಲ್ಲಿದೆ ಎಂದು ಅಂತಾರಾಷ್ಟ್ರೀಯ ಅಲಯನ್ಸ್ ಸಂಸ್ಥೆಯ ಮಲ್ಟಿಪಲ್ ಕೌನ್ಸಿಲ್ ಅಧ್ಯಕ್ಷ ಕೆ.ಟಿ.ಹನುಮಂತು ಆತಂಕ ವ್ಯಕ್ತಪಡಿಸಿದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು(ಕಲ್ಲುಕಟ್ಟಡ) ಆವರಣದಲ್ಲಿ ಕೃಷಿಕ ಅಲಯನ್ಸ್ ಸಂಸ್ಥೆ, ಮಾಂಡವ್ಯ ಅಲಯನ್ಸ್ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ಸಸ್ಯೋತ್ಸವ ಮತ್ತು ಪರಿಸರ ಮಿತ್ರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭೂಮಿ ಹಸಿರೀಕರಣವಾಗದಿದ್ದರೆ ಜೀವಸಂಕುಲಗಳು ನಾಶವಾಗುತ್ತವೆ. ಮಾತ್ರವಲ್ಲದೆ ಮನುಷ್ಯನೂ ನಾಶವಾಗುತ್ತಾನೆ. ಹಸಿರಿದ್ದರೆ ಉಸಿರು, ಉಸಿರಿದ್ದರೆ ಜೀವ-ಜೀವನ. ಹಸಿರೀಕರಣದಿಂದ ಮಾತ್ರ ಜೀವವೈವಿಧ್ಯತೆ ಉಳಿಯಲು ಸಾಧ್ಯ ಎಂದು ಹೇಳಿದರು.
ಆಧುನಿಕ ಜಗತ್ತಿನಲ್ಲಿ ಮಾನವನ ಅತಿಯಾದ ಆಸೆ, ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಜಾಗತಿಕ ತಾಪಮಾನ ಏರಿಕೆ, ಅಕಾಲಿಕ ಮಳೆ ಮತ್ತು ವಾಯು ಮಾಲಿನ್ಯದಂತಹ ಸಮಸ್ಯೆಗಳನ್ನು ನಾವಿಂದು ಕಣ್ಣಾರೆ ಕಾಣುತ್ತಿದ್ದೇವೆ. ಮುಂದಿನ ಪೀಳಿಗೆಗೆ ಉತ್ತಮ ವಾತಾರಣ ಕೊಡದಿದ್ದರೆ ನಮ್ಮನ್ನು ಶಪಿಸುತ್ತಾರೆ ಎಂದರು.
ಪ್ರಾಂಶುಪಾಲ ತಮ್ಮೇಗೌಡ, ಅಲಯನ್ಸ್ ಸಂಸ್ಥೆ 1ನೇ ಜಿಲ್ಲಾ ಉಪ ಪ್ರಾಂತಪಾಲ ಚಂದ್ರಶೇಖರ್, ಜಿಲ್ಲಾ ಸಂಪುಟ ಕಾರ್ಯರ್ಶಿ ಧನಂಜಯ, ಮಾಂಡವ್ಯ ಅಲಯನ್ಸ್ ಸಂಸ್ಥೆ ಅಧ್ಯಕ್ಷ ಪ್ರೊ.ಶಿವಕುಮಾರ್, ಕೃಷಿಕ ಅಲಯನ್ಸ್ ಸಂಸ್ಥೆ ಅಧ್ಯಕ್ಷ ಅನಿಲ್‌ಕುಮಾರ್, ಕೆ.ಎಸ್.ಷಡಕ್ಷರಿ, ಕೃಷ್ಣಪ್ಪ, ಜೋಗಿಗೌಡ, ಮಮತಾ, ಕುಸುಮಾ, ಶೋಭಾಗೌಡ, ಜಯಲಕ್ಷ್ಮೀ, ಮೈತ್ರಿ ಮತ್ತಿತರರಿದ್ದರು.
ಇದೇ ಸಂದರ್ಭದಲ್ಲಿ ಕಾಲೇಜು ಆವರಣದಲ್ಲಿ ಹಲವು ವಿವಿಧ ಬಗೆಯ ಸಸಿಗಳನ್ನು ನೆಡಲಾಯಿತು. ಪರಿಸರ ಪ್ರೇಮಿ ಪುರುಷೋತ್ತಮ್ ಅವರಿಗೆ ಪರಿಸರ ಮಿತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net