ಮಳವಳ್ಳಿ ಪಟ್ಟಣದಲ್ಲಿ ಸಂಪೂರ್ಣ ಸಾವಯವ ಕೃಷಿಕರ ಸಂಘದ ವತಿಯಿಂದ ಪಂಚವಟಿ ಎಂಬ ವಿನೂತನ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಹಂದಿನಾಗಣ್ಣ ತೋಟದಲ್ಲಿ ಸಂಘದ 108 ಸದಸ್ಯರಿಗೆ ಬಿಲ್ವ, ಅತ್ತಿ, ಅರಳಿ, ಬೇವು ಮತ್ತು ಬನ್ನಿ ಗಿಡಗಳನ್ನು ವಿತರಿಸುವ ಮೂಲಕ ವಿಶ್ವ ಪರಿಸರ ದಿನ ಆಚರಿಸಿದರು. ಸಂಘದ ಅಧ್ಯಕ್ಷ ಮಹೇಶ್ ಕುಮಾರ್, ಕಾರ್ಯದರ್ಶಿ ಚಿಕ್ಕಣ್ಣ ಇತರ ಸದಸ್ಯರಿದ್ದರು.
ಮಳವಳ್ಳಿ: ಪಟ್ಟಣದ ಸೇರಿದಂತೆ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶುಕ್ರವಾರ ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಕಾರ್ಯಕ್ರಮಗಳು ನಡೆದವು.
ತಾಲೂಕು ಆಡಳಿತ ವತಿಯಿಂದ ಕಚೇರಿ ಆವರಣದಲ್ಲಿ ತಹಸೀಲ್ದಾರ್ ಡಾ.ಲೋಕೇಶ್, ತಾಲೂಕು ಪಂಚಾಯಿತಿಯಲ್ಲಿ ತಾಪಂ ಇಒ ಶ್ರೀನಿವಾಸ್, ಪುರಸಭೆಯಲ್ಲಿ ಮುಖ್ಯಾಧಿಕಾರಿ ನಾಗರತ್ನಾ ಗಿಡಗಳನ್ನು ನೆಟ್ಟು ನೀರೆರೆದರು. ಆಯಾ ಇಲಾಖೆಗಳ ನೌಕರು ಉಪಸ್ಥಿತರಿದ್ದರು.
ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಬ್ ಇನ್‌ಸ್ಪೆಕ್ಟರ್ ಶಿವಲಿಂಗ ದಳವಾಯಿ ಸಂಘದ ಕಚೇರಿ ಆವರಣದಲ್ಲಿ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಎಲ್ಲರೂ ಕಟಿಬದ್ಧರಾಗುವಂತೆ ಕರೆ ನೀಡಿದರು. ಸಂಘದ ಅಧ್ಯಕ್ಷ ಒಕ್ಕರಹಳ್ಳಿ ಜಯರಾಜು, ಶಿವಕುಮಾರ್, ಕಸಾಪ ತಾಲೂಕು ಅಧ್ಯಕ್ಷ ಚೇತನ್ ಕುಮಾರ್, ಸಂಘದ ಸದಸ್ಯರು ಇದ್ದರು.
ಸಂಪೂರ್ಣ ಸಾವಯವ ಕೃಷಿಕರ ಸಂಘದ ವತಿಯಿಂದ ಪಂಚವಟಿ ಎಂಬ ವಿನೂತನ ಅಭಿಯಾನ ನಡೆಯಿತು. ಪಟ್ಟಣದ ಹಂದಿನಾಗಣ್ಣ ತೋಟದಲ್ಲಿ ಸಂಘದ 108 ಸದಸ್ಯರಿಗೆ ಬಿಲ್ವ, ಅತ್ತಿ, ಅರಳಿ, ಬೇವು ಮತ್ತು ಬನ್ನಿ ಗಿಡಗಳನ್ನು ವಿತರಿಸುವ ಮೂಲಕ ವಿಶ್ವ ಪರಿಸರ ದಿನ ಆಚರಿಸಿದರು. ಸಂಘದ ಅಧ್ಯಕ್ಷ ಮಹೇಶ್ ಕುಮಾರ್, ಕಾರ್ಯದರ್ಶಿ ಚಿಕ್ಕಣ್ಣ ಇತರ ಸದಸ್ಯರಿದ್ದರು.
ಪೂರಿಗಾಲಿ ಸಮೀಪದ ರಂಗರಾವ್ ಸಂಸ್ಥೆ ನೌಕರರು ಕಾರ್ಖಾನೆ ಆವರಣದಲ್ಲಿ ಹಲವು ಗಿಡಗಳನ್ನು ನೆಟ್ಟು ಪರಿಸರ ಉಳಿವಿಗೆ ಕೈ ಜೋಡಿಸುವಂತೆ ಮನವಿ ಮಾಡಿದರು.
ರಾಗಿಬೊಮ್ಮನಹಳ್ಳಿ ಸರ್ಕಾರಿ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಲ್ಲೂ ಸ್ಥಳೀಯ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಗಿಡನೆಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗ್ರಾಮದ ಯಜಮಾನರು, ಮುಖಂಡರು, ಗ್ರಾಪಂ ಪಿಡಿಒ, ಕಾರ್ಯದರ್ಶಿ, ಶಾಲೆಗಳ ಮುಖ್ಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು.
ತಾಲೂಕಿನ ಎಲ್ಲ ಗ್ರಾಪ ಪಂಚಾಯಿತಿ, ಶಾಲೆ, ಸರ್ಕಾರಿ ಕಚೇರಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಪರಿಸರ ದಿನವನ್ನು ಗಿಡಗಳನ್ನು ನೆಟ್ಟು ಪೋಷಣೆಯ ಪ್ರತಿಜ್ಞಾವಿಧಿ ಕಾರ್ಯಕ್ರಮಗಳು ನಡೆದವು.