ಸರ್ ಎಂ.ವಿ.ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಎಚ್.ವಿ.ವೆಂಕಟೇಶಮೂರ್ತಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯ ಒಕ್ಕಲಿಗರ ಸಂಘದ ಮಾಜಿ ಉಪಾಧ್ಯಕ್ಷ ಎಚ್.ಎಲ್.ಶಿವಣ್ಣ ಕ್ರೀಡಾ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಿದರು. ಬ್ಯಾಂಕ್ ಆಫ್ ಬರೋಡದ ಆರ್ಥಿಕ ಸಾಕ್ಷರತಾ ಕೇಂದ್ರದ ಸಮಾಲೋಚಕಿ ಕೆ.ಪಿ.ಅರುಣಕುಮಾರಿ, ಮೈಸೂರು ವಿವಿ ಸಮಾಜಕಾರ್ಯ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ.ಚಂದ್ರಮೌಳಿ, ತಾಂಡವೇಶ್ವರ ದೇವಾಲಯದ ಅಭಿವೃದ್ದಿ ಸಮಿತಿ ಅಧ್ಯಕ್ಷ ರಾಮು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಸುಧಾ, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಸುನಿಲ್, ಗ್ರಾಮ ಆಡಳಿತಾಧಿಕಾರಿ ಗುಣಶೇಖರ್, ಸಮಾಜಕಾರ್ಯ ವಿಭಾಗದ ಪ್ರಾಧ್ಯಾಪಕರಾದ ಸುನಿಲ್, ಕಿರಣ್, ಯುವ ಮುಖಂಡ ಸಂತೋಷ್, ಕೆ.ಎಂ.ಕೃಷ್ಣೇಗೌಡ ಇತರರಿದ್ದರು.