ಪ್ರತಿಯೊಬ್ಬರು ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಿ

ಉಚಿತ ಕಣ್ಣಿನ ತಪಾಸಣೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಡಾ.ಚೈತ್ರಾ, ಜಿ.ಎಸ್. ಮನೋಹರ್, ನಾಗೇಶ್ ಸೇರಿದಂತೆ ಇತರರು ಇದ್ದರು.
ಉಚಿತ ಕಣ್ಣಿನ ತಪಾಸಣೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಡಾ.ಚೈತ್ರಾ, ಜಿ.ಎಸ್. ಮನೋಹರ್, ನಾಗೇಶ್ ಸೇರಿದಂತೆ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಬಿಡಬ್ಲುೃ ಲಯನ್ಸ್ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ಡಾ.ಚೈತ್ರಾ ಸಲಹೆ
ಹಲಗೂರು: ನಮ್ಮ ದೇಹದ ಬಹುಮುಖ್ಯವಾದ ಅಂಗವೆಂದರೆ ಕಣ್ಣು, ಅದರ ಬಗ್ಗೆ ಯಾರೂ ನಿರ್ಲಕ್ಷಿಸಬಾರದು ಎಂದು ಬಿಡಬ್ಲುೃ ಲಯನ್ಸ್ ಸೂಪರ್ ಸ್ಪೆಷಾಲಿಟಿ  ಕಣ್ಣಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಚೈತ್ರಾ ತಿಳಿಸಿದರು.
ಇಲ್ಲಿನ ಚನ್ನಪಟ್ಟಣ ರಸ್ತೆಯಲ್ಲಿರುವ ಹಲಗೂರು ಲಯನ್ಸ್ ಕ್ಲಬ್ ಆವರಣದಲ್ಲಿ ಗುರುವಾರ ಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆಗಳ ಒಕ್ಕೂಟ ಬಿಡಬ್ಲುೃ ಲಯನ್ಸ್ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮತ್ತು ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಗುರುವಾರ ಆಯೋಜಿಸಿದ್ದ ಕಣ್ಣಿನ ಉಚಿತ ಪರೀಕ್ಷೆ ಮತ್ತು ಆಧುನಿಕ ಶಸ್ತ್ರಚಿಕಿತ್ಸೆ ಮೂಲಕ ಐಒಎಲ್ ಅಳವಡಿಕೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಹಲಗೂರಿನ ಲಯನ್ಸ್ ಕ್ಲಬ್ ಆವರಣದಲ್ಲಿ ಆಯೋಜಿಸಿದ್ದ ಕಣ್ಣಿನ ತಪಾಸಣೆ ಶಿಬಿರದಲ್ಲಿ ವೈದ್ಯಾಧಿಕಾರಿ ಡಾ.ಚೈತ್ರಾ ನೇತ್ರ ತಪಾಸಣೆ ಮಾಡಿದರು.
ನಮ್ಮ ಆಸ್ಪತ್ರೆ ವತಿಯಿಂದ ಉಚಿತವಾಗಿ ಕಣ್ಣಿನ ಪರೀಕ್ಷೆ ನಡೆಸಿ ಅವಶ್ಯಕತೆ ಇರುವ ವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಇದುವರೆಗೂ ಲಕ್ಷಾಂತರ ಜನರಿಗೆ ಕಣ್ಣಿನ ಸಮಸ್ಯೆ ನಿವಾರಿಸಿದ್ದೇವೆ. ಯಾವುದಕ್ಕೂ ಭಯಪಡುವ ಅವಶ್ಯಕತೆ ಇರುವುದಿಲ್ಲ. ಇಂತಹ ಶಿಬಿರಗಳನ್ನು ಸದ್ಬಳಕೆ ಮಾಡಿಕೊಂಡು ನಿಮ್ಮ ಕಣ್ಣನ್ನು ತಪಾಸಣೆ ಮಾಡಿಸಿಕೊಳ್ಳುವುದು ಸೂಕ್ತ ಎಂದರು.
ಲಯನ್ಸ್ ಸಂಸ್ಥೆಯ ಅಧ್ಯಕ್ಷ ಜಿ.ಎಸ್. ಮನೋಹರ್ ಮಾತನಾಡಿ, ನಮ್ಮ ಸಂಸ್ಥೆ 45 ವರ್ಷಗಳಿಂದ ಸಾರ್ವಜನಿಕರಿಗೆ ಅನುಕೂಲವಾಗುವ ಆರೋಗ್ಯ ಶಿಬಿರ, ಹೃದಯ ರೋಗ, ಕಿವಿ, ಗಂಟಲು ಮತ್ತು ಮೂಗು, ದಂತಕ್ಕೆ ಸಂಬಂಧಪಟ್ಟ ರೋಗಗಳ ತಪಾಸಣಾ ಶಿಬಿರದ ಕಾರ್ಯಕ್ರಮವನ್ನು ಉಚಿತವಾಗಿ ಆಯೋಜಿಸಿಕೊಂಡು ಬರುತ್ತಿದೆ. ಇಂದಿನ ಈ ಶಿಬಿರದಲ್ಲಿ ಸುಮಾರು 85ಕ್ಕೂ ಹೆಚ್ಚು ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಲಾಗಿದ್ದು, ಅದರಲ್ಲಿ 30 ಜನರಿಗೆ ಶಸ್ತ್ರ ಚಿಕಿತ್ಸೆ ಅವಶ್ಯಕತೆ ಇದ್ದು, ಅವರನ್ನು ಬೆಂಗಳೂರಿಗೆ ಕರೆದೊಯ್ದು ಶಸ್ತ್ರಚಿಕಿತ್ಸೆ ನಂತರ ಶನಿವಾರ ಇದೇ ಸ್ಥಳಕ್ಕೆ ಕರೆದುಕೊಂಡು ಬಂದು ಬಿಡಲಾಗುತ್ತದೆ ಎಂದರು. 
ಸಂಸ್ಥೆ ವತಿಯಿಂದ ವೈದ್ಯಾಧಿಕಾರಿ ಡಾ.ಚೈತ್ರಾ ಮತ್ತು ನಾಗೇಶ್ ಅವರನ್ನು ಸನ್ಮಾನಿಸಲಾಯಿತು. ಅಧ್ಯಕ್ಷ ಬಿ.ಎಸ್. ಮನೋಹರ, ಖಜಾಂಜಿ ಸಿ.ಪ್ರವೀಣ, ಕಾರ್ಯದರ್ಶಿ ಎ.ಟಿ. ಶ್ರೀನಿವಾಸ್ ಸೇರಿದಂತೆ ಸದಸ್ಯರಾದ ಡಾ.ಎ.ಎಸ್. ನಾಗೇಶ್, ಎ.ಎಸ್. ದೇವರಾಜು, ಎಚ್.ಆರ್.ಪದ್ಮನಾಭ, ಕೆ.ಶಿವರಾಜು, ಡಾ.ಷಂಶುದ್ದೀನ್, ಡಿ.ಎಲ್. ಮಾದೇಗೌಡ, ನಾಗೇಶ್ ಮತ್ತು ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net