ಪದೋನ್ನತಿಗೊಂಡ ಪ್ರಾಂಶುಪಾಲರಿಗೆ ಬೀಳ್ಕೊಡುಗೆ

ಕೆ.ಆರ್.ಸಾಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಲಿಂಗರಾಜು ಉಪನಿರ್ದೆಶಕರಾಗಿ ಪದೋನ್ನತ್ತಿ ಹೊಂದಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಸನ್ಮಾನಿಸಿ ಬೀಳ್ಕೊಡಲಾಯಿತು.
ಕೆ.ಆರ್.ಸಾಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಲಿಂಗರಾಜು ಉಪನಿರ್ದೆಶಕರಾಗಿ ಪದೋನ್ನತ್ತಿ ಹೊಂದಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಸನ್ಮಾನಿಸಿ ಬೀಳ್ಕೊಡಲಾಯಿತು.
Published on
ಕೆ.ಆರ್.ಸಾಗರ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಲಿಂಗರಾಜು ಉಪನಿರ್ದೆಶಕರಾಗಿ ಪದೋನ್ನತ್ತಿ ಹೊಂದಿ ಚಿಕ್ಕೊಡಿ ಜಿಲ್ಲೆಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಕಾಲೇಜು ಸಭಾಂಗಣದಲ್ಲಿ ಆತ್ಮೀಯವಾಗಿ ಬೀಳ್ಕೊಡಲಾಯಿತು.
ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ನೆನಪಿನ ಕಾಣಿಕೆ ನೀಡಲಾಯಿತು. ಈ ಸಂದರ್ಭದಲ್ಲಿ ವರ್ಗಾವಣೆಗೊಂಡ ಲಿಂಗರಾಜು ಅವರ ಬಗ್ಗೆ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಭಾರ ಪ್ರಾಂಶುಪಾಲ ಹೇಮಯ್ಯ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಂ.ಬಿ.ಕುಮಾರ, ತಾಲೂಕು ಸರ್ಕಾರಿ ನೌಕರರ ಎನ್‌ಪಿಎಸ್ ಸಂಘದ ಅಧ್ಯಕ್ಷ ಕುಮಾರ, ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ವಿದ್ಯಾರ್ಥಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net