ಮಂಡ್ಯ ತಾಲೂಕು ಯುವ ಘಟಕದ ಅಧ್ಯಕ್ಷ ಸಂತೋಷ್ ಮಂಡ್ಯಗೌಡ ಮಾತನಾಡಿ, ರಾಜ್ಯ ಸರ್ಕಾರ ಜಿಲ್ಲಾದ್ಯಂತ ಮುಚ್ಚಿರುವ 354 ಶಾಲೆಗಳನ್ನು ಮತ್ತೆ ತೆಗೆದು ಸಿಬಿಎಸ್‌ಇ ಹಾಗೂ 1500ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿಯಿಂದ 5ನೇ ತರಗತಿವರೆಗೆ ಗುಣಮಟ್ಟದ ದ್ವಿಭಾಷಾ ನೀತಿಯಲ್ಲಿ ಶಿಕ್ಷಣ, ಮೂಲ ಸೌಕರ್ಯ ಒದಗಿಸಬೇಕು. ಇಲ್ಲದಿದ್ದರೆ ಮುಂದಿನ ಶೈಕ್ಷಣಿಕ ಅವಧಿ ಆರಂಭದಲ್ಲಿ ಜಿಲ್ಲೆಯ ಎಲ್ಲ ಸರ್ಕಾರಿ ಶಾಲೆಗಳಿಗೆ ಬೀಗ ಹಾಕಿ ಮಕ್ಕಳು ಹಾಗೂ ಪಾಲಕರ ಜತೆಗೂಡಿ ಡಿಡಿಪಿಐ ಕಚೇರಿಗೆ ಮುತ್ತಿಗೆ ಹಾಕಲಾಗುವುದು. ಅಲ್ಲದೆ ನಗರದ ಸರ್.ಎಂ.ವಿ ವಿಶ್ವೇಶ್ವರಯ್ಯ ಪ್ರತಿಮೆಯ ಎದುರು ಮಕ್ಕಳಿಗೆ ಬಹಿರಂಗ ಪಾಠ ಮಾಡಲಾಗುವುದು ಎಂದು ಎಚ್ಚರಿಸಿದರು.