ರೈತರು ಗುಣಮಟ್ಟದ ಹಾಲು ಪೂರೈಕೆ ಮಾಡಲಿ

ವಿಶ್ವ ಹಾಲು ದಿನಾಚರಣೆ ಅಂಗವಾಗಿ ಜಿಲ್ಲಾ ಹಾಲು ಒಕ್ಕೂಟ  ಮದ್ದೂರು ಉಪಕಚೇರಿಯಿಂದ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ನಗರದ ಗುರುಶಾಂತಪ್ಪ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಉಚಿತವಾಗಿ ವಿತರಣೆ ಮಾಡಲಾಯಿತು. ಹರೀಶ್‌ಬಾಬು, ಡಾ.ಮಂಜೇಶ್‌ಗೌಡ, ಹನುಮಂತು, ಡಾ.ಗೋವರ್ಧನ್, ಹೋನ್ನೇಶ್, ಮಂಜುನಾಥ್, ರತ್ಮಮ್ಮ, ಸೌಮ್ಯ, ಅಪ್ಸದ್ ಇದ್ದರು.
ವಿಶ್ವ ಹಾಲು ದಿನಾಚರಣೆ ಅಂಗವಾಗಿ ಜಿಲ್ಲಾ ಹಾಲು ಒಕ್ಕೂಟ ಮದ್ದೂರು ಉಪಕಚೇರಿಯಿಂದ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ನಗರದ ಗುರುಶಾಂತಪ್ಪ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಉಚಿತವಾಗಿ ವಿತರಣೆ ಮಾಡಲಾಯಿತು. ಹರೀಶ್‌ಬಾಬು, ಡಾ.ಮಂಜೇಶ್‌ಗೌಡ, ಹನುಮಂತು, ಡಾ.ಗೋವರ್ಧನ್, ಹೋನ್ನೇಶ್, ಮಂಜುನಾಥ್, ರತ್ಮಮ್ಮ, ಸೌಮ್ಯ, ಅಪ್ಸದ್ ಇದ್ದರು.
Published on
ಮದ್ದೂರು: ವಿಶ್ವಹಾಲು ದಿನಾಚರಣೆ ಅಂಗವಾಗಿ ಜಿಲ್ಲಾ ಹಾಲು ಒಕ್ಕೂಟ (ಮನ್ ಮುಲ್) ಮದ್ದೂರು ಉಪಕಚೇರಿಯಿಂದ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ನಗರದ ಗುರುಶಾಂತಪ್ಪ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಉಚಿತವಾಗಿ ಸೋಮವಾರ ವಿತರಣೆ ಮಾಡಲಾಯಿತು.
ಆಸ್ಪತ್ರೆಯ ವಿವಿಧ ವಾರ್ಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ನಂದಿನಿ ಹಾಲಿನ ಉತ್ಪನ್ನಗಳನ್ನು ವಿತರಿಸಿದರು.
ಇದೇ ವೇಳೆ ಮನ್ ಮುಲ್ ನಿರ್ದೇಶಕ ಹರೀಶ್ ಬಾಬು ಮಾತನಾಡಿ, ವಿಶ್ವ ಹಾಲು ದಿನಾಚರಣೆ ಅಂಗವಾಗಿ ಪ್ರತಿ ವರ್ಷವೂ ವೃದ್ಧರು, ರೋಗಿಗಳಿಗೆ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಜಿಲ್ಲಾ ಹಾಲು ಒಕ್ಕೂಟವು ವಿತರಣೆ ಮಾಡುತ್ತಿದ್ದು, ಈ ಮೂಲಕ ಸಾಮಾಜಿಕ ಜವಾಬ್ದಾರಿ ಹಾಗೂ ಮಾನವೀಯ ಧೋರಣೆ ಅನುಸರಿಸುತ್ತ ಬಂದಿದೆ ಎಂದರು.
2001ರಲ್ಲಿ ವಿಶ್ವಸಂಸ್ಥೆಯ ಅಂಗ ಸಂಸ್ಥೆಯಾದ ಆಹಾರ ಮತ್ತು ಕೃಷಿ ಸಂಸ್ಥೆ ಜೂನ್ 1ನ್ನು ವಿಶ್ವ ಕ್ಷೀರ ದಿನವಾಗಿ ಆಚರಿಸಲು ಆರಂಭಿಸಿತು. ಜಗತ್ತಿನ ಎಲ್ಲೆಡೆ ಆರೋಗ್ಯಕರ ಆಹಾರವಾದ ಹಾಲನ್ನು ಎಲ್ಲರಿಗೆ ದೊರೆಯುವಂತೆ ಮಾಡುವುದು, ಮಕ್ಕಳಿಗೆ ಅಪೌಷ್ಟಿಕತೆ ಉಂಟಾಗದಂತೆ ತಡೆಯಲು ಹಾಲು ಮತ್ತು ಡೈರಿ ಉತ್ಪನ್ನಗಳು ದೊರೆಯುವಂತೆ ಮಾಡುವ ಜಾಗೃತಿ ಮೂಡಿಸುವುದು ಈ ದಿನದ ಆಚರಣೆಯ ಉದ್ದೇಶವಾಗಿದೆ ಎಂದರು.
ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬುಗಳಲ್ಲಿ ಒಂದು ಕೃಷಿ ಆಗಿದ್ದರೆ, ಇನ್ನೊಂದು ಹೈನುಗಾರಿಕೆಯಾಗಿದೆ. ತಾಲೂಕಿನಲ್ಲಿ ಸುಮಾರು 18 ಸಾವಿರ ಮಂದಿ ತಮ್ಮ ದೈನಂದಿನ ಬದುಕಿಗೆ ಹೈನುಗಾರಿಕೆಯನ್ನು ಆಶ್ರಯಿಸಿಕೊಂಡಿದ್ದು, ಪ್ರತಿ ತಿಂಗಳು 20 ಕೋಟಿಗೂ ಹೆಚ್ಚು ಹಣ ಪಾವತಿ ಮಾಡುತ್ತಿದ್ದು, ಇದರಿಂದ ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದಾರೆ ಎಂದರು.
ಜಿಲ್ಲಾ ಹಾಲು ಒಕ್ಕೂಟಕ್ಕೆ ಮದ್ದೂರು ತಾಲೂಕಿನಿಂದ ಪ್ರತಿನಿತ್ಯ 2.10 ಲಕ್ಷ ಲೀಟರ್ ಹಾಲು ಸರಬರಾಜು ಮಾಡುವ ಮೂಲಕ 2ನೇ ಸ್ಥಾನದಲ್ಲಿದ್ದು, ಗುಣಮಟ್ಟದಲ್ಲಿ ಜಿಲ್ಲೆಯಲ್ಲೇ ಪ್ರಥಮ ಸ್ಥಾನದಲ್ಲಿದ್ದೇವೆ. ಹೀಗಾಗಿ ರೈತರು ಉತ್ತಮ ಗುಣಮಟ್ಟದ ಹಾಲು ಪೂರೈಕೆ ಮಾಡುವ ಮೂಲಕ ಒಕ್ಕೂಟವನ್ನು ಅಭಿವೃದ್ಧಿ ಪಥದತ್ತ ಸಾಗಲು ಸಹಕರಿಸಬೇಕೆಂದು ಮನವಿ ಮಾಡಿದರು.
ಉಪ ವ್ಯವಸ್ಥಾಪಕ ಡಾ.ಮಂಜೇಶ್ ಗೌಡ, ಸಹಾಯಕ ವ್ಯವಸ್ಥಾಪಕ ಹನುಮಂತು, ಡಾ.ಗೋವರ್ಧನ್, ಹೋನ್ನೇಶ್, ವಿಸ್ತರಣಾಧಿಕಾರಿಗಳಾದ ಮಂಜುನಾಥ್, ರತ್ನಮ್ಮ, ಸೌಮ್ಯ, ಅಪ್ಸದ್ ಮತ್ತಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net