ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನ್ಯಾಯಬೆಲೆ ಅಂಗಡಿ, ಅಕ್ಷರ ದಾಸೋಹ ಕಾರ್ಯಕ್ರಮದಡಿ ಕಾರ್ಯನಿರ್ವಹಿಸುವ ಎಲ್ಲ ಶಾಲೆ, ಹಾಲು ಉತ್ಪಾದಕರ ಸಹಕಾರ ಸಂಘ, ಸರ್ಕಾರಿ ಅಥವಾ ಖಾಸಗಿ ಉಗ್ರಾಣ, ರಸ್ತೆ ಬದಿ ವ್ಯಾಪಾರಿ, ಮಾಂಸ ಮಾರಾಟಗಾರರು, ಹೋಟೆಲ್, ರೆಸ್ಟೋರೆಂಟ್, ಕ್ಯಾಟರಿಂಗ್ ಮಾಡುವವರು ಹಾಗೂ ಕ್ಯಾಂಟಿನ್‌ಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ಕಾಯ್ದೆಯಡಿ ಕಡ್ಡಾಯವಾಗಿ ಪರವಾನಗಿ/ನೋಂದಣಿಯನ್ನು ಪಡೆಯಬೇಕು ಎಂದು ಸೂಚಿಸಿದರು.