ಜಾನುವಾರುಗಳಿಗೆ ತಪ್ಪದೇ ವಿಮೆ ಮಾಡಿಸಿ: ಶಾಸಕ ಪಿ.ರವಿಕುಮಾರ್ ಗಣಿಗ ಕಿವಿಮಾತು
ಮಂಡ್ಯ ತಾಲೂಕು ದೊಡ್ಡಬಾಣಸವಾಡಿ ಗ್ರಾಮದಲ್ಲಿ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ದೊಡ್ದಬಾಣಸವಾಡಿಯಲ್ಲಿ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ
ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಜಿಲ್ಲಾ ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತದ ಸಹಯೋಗ
ಮಂಡ್ಯ: ತಾಲೂಕಿನ ದೊಡ್ಡಬಾಣಸವಾಡಿ ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಜಿಲ್ಲಾ ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತಿದ ಸಹಯೋಗದಲ್ಲಿ ನಡೆದ 9ನೇ ಸುತ್ತಿನ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮವನ್ನು ಶಾಸಕ ಪಿ.ರವಿಕುಮಾರ್ ಗಣಿಗ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ರಾಸುಗಳ ಪ್ರಾಣಕ್ಕೆ ತೊಂದರೆಯಾಗಿ ಸಾವನ್ನಪ್ಪಿದರೆ ಅಂತಹ ಸಂದರ್ಭದಲ್ಲಿ ವಿಮೆ ಮಾಡಿಸಿದ್ದರೆ ನಷ್ಟದ ಪರಿಹಾರ ತುಂಬಿಕೊಳ್ಳಲು ಸಾಧ್ಯವಾಗುತ್ತದೆ. ಆದ್ದರಿಂದ ರೈತರು ತಪ್ಪದೇ ತಮ್ಮ ಜಾನುವಾರುಗಳಿಗೆ ವಿಮೆ ಮಾಡಿಸಬೇಕು ಎಂದು ಸಲಹೆ ನೀಡಿದರು.
ಮನ್‌ಮುಲ್ ಅಧ್ಯಕ್ಷ ಯು.ಸಿ.ಶಿವಕುಮಾರ್ ಮಾತನಾಡಿ, 80 ಸಾವಿರ ರೂಪಾಯಿಯಿಂದ ಒಂದು ಲಕ್ಷ ರೂಪಾಯಿ ಕೊಟ್ಟು ಹಸುಗಳನ್ನು ಖರೀದಿ ಮಾಡಲಾಗುತ್ತದೆ. ರೈತರಿಗೆ ನಷ್ಟ ಆಗಬಾರದೆಂಬುವ ದೃಷ್ಟಿಯಿಂದಲೇ ರಾಸುಗಳಿಗೆ ವಿಮೆ ಮಾಡಿಸಿಕೊಳ್ಳುವುದು ಸೂಕ್ತ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ತಾಲೂಕು ಪಶು ವೈದ್ಯಾಧಿಕಾರಿ ಡಾ.ಸುರೇಶ್ ಮಾತನಾಡಿದರು. ದೊಡ್ಡಬಾಣಸವಾಡಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಮನುಕುಮಾರ್, ನಿರ್ದೇಶಕರಾದ ಮಹೇಶ್, ಶಿವರಾಮು, ಮಾಜಿ ಅಧ್ಯಕ್ಷ ಆನಂದ್, ಪಶು ವೈದ್ಯಾಧಿಕಾರಿ ಡಾ.ಶರತ್, ಹರೀಶ್ ದೊಡ್ಡಬಾಣಸವಾಡಿ ಸೇರಿದಂತೆ ಗ್ರಾಮದ ಮಖಂಡರು ಭಾಗವಹಿಸಿದ್ದರು.