ಶಾಸಕ ರವಿಕುಮಾರ್ ಗಣಿಗ ಕ್ಷಮೆಯಾಚಿಸಲಿ: ನಗರಸಭೆ ಮಾಜಿ ಅಧ್ಯಕ್ಷ ಎಂ.ವಿ.ಪ್ರಕಾಶ್ ಆಗ್ರಹ

ಮಂಡ್ಯದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಎಂ.ವಿ.ಪ್ರಕಾಶ್ ಮಾತನಾಡಿದರು.
ಮಂಡ್ಯದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಎಂ.ವಿ.ಪ್ರಕಾಶ್ ಮಾತನಾಡಿದರು.
Published on
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಲಘುವಾಗಿ ಮಾತನಾಡಿರುವ ಶಾಸಕ ಪಿ.ರವಿಕುಮಾರ್ ಗಣಿಗ ಅವರು ಒಂದು ವಾರದೊಳಗೆ ಕ್ಷಮೆಯಾಚಿಸಿದ್ದರೆ ಆ.1ರಿಂದ ಪ್ರತಿಭಟನೆ ನಡೆಸಲಾಗುವುದು ಎಂದು ನಗರಸಭೆ ಮಾಜಿ ಅಧ್ಯಕ್ಷ ಎಂ.ವಿ.ಪ್ರಕಾಶ್ ಎಚ್ಚರಿಕೆ ನೀಡಿದರು.
ರವಿಕುಮಾರ್ ಪ್ರಥಮ ಬಾರಿಗೆ ಶಾಸಕರಾಗಿದ್ದಾರೆ. ನಗರದ ಎಲ್ಲ ಅಭಿವೃದ್ಧಿಗೆ ಅವರ ಸಹಕಾರ ಪಡೆದು ಕೆಲಸ ಮಾಡಿದ್ದೇವೆ. ಅವರು ತಮ್ಮ ನಾಯಕರನ್ನು ಮೆಚ್ಚಿಸುವ ಸಲುವಾಗಿ ಎಚ್‌ಡಿಕೆ ಅವರ ಬಗ್ಗೆ ಲಘುವಾಗಿ ಮಾತನಾಡಿರುವುದು ಸರಿಯಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಎಚ್‌ಡಿಕೆ ಎರಡು ಬಾರಿ ಮುಖ್ಯಮಂತ್ರಿಯಾಗಿ ಇದೀಗ ಕೇಂದ್ರ ಸಚಿವರಾಗಿ ಜನಸೇವೆ ಮಾಡುತ್ತಿದ್ದಾರೆ. ಸಂಸದರಾಗಿ ಜಿಲ್ಲಾಸ್ಪತ್ರೆ ಅಭಿವೃದ್ಧಿಗೆ 16 ಕೋಟಿ ರೂ, ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ ಅನುದಾನ ತಂದಿದ್ದಾರೆ. ತಮ್ಮ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೆ ತಮ್ಮದೇ ಆದ ನೀಲನಕ್ಷೆ ರೂಪಿಸಿಕೊಂಡಿದ್ದು, ಶೀಘ್ರದಲ್ಲಿ ಅವುಗಳ ಜಾರಿಗೆ ಮುಂದಾಗಲಿದ್ದಾರೆ ಎಂದು ಸಮರ್ಥಿಸಿಕೊಂಡರು.
ತಾಲೂಕು ಜೆಡಿಎಸ್ ಅಧ್ಯಕ್ಷ ಬೂದನೂರು ಸ್ವಾಮಿ ಮಾತನಾಡಿ, ಎಚ್‌ಡಿಕೆ ಅವರ ಬಗ್ಗೆ ಲಘುವಾಗಿ ಮಾತನಾಡುವಷ್ಟು ಶಾಸಕ ಪಿ.ರವಿಕುಮಾರ್ ಗಣಿಗ ರಾಜಕೀಯವಾಗಿ ಬೆಳೆದಿಲ್ಲ. ಕುಮಾರಸ್ವಾಮಿ ರಾಜ್ಯದ ಯಾವುದೇ ಮೂಲೆಯಲ್ಲಿ ನಿಂತರೂ ಗೆಲ್ಲುವ ಶಕ್ತಿಯಾಗಿದ್ದಾರೆ. ಅವರ ಬಗ್ಗೆ ಮಾತನಾಡುವಾಗ ತಾಳ್ಮೆ ಹಾಗೂ ವಿಶ್ವಾಸದಿಂದ ನಡೆದುಕೊಳ್ಳುವಂತೆ ತಿಳಿ ಹೇಳಿದರು.
ಜೆಡಿಎಸ್ ನಗರ ಅಧ್ಯಕ್ಷ ಬೋರೇಗೌಡ, ನಗರಸಭೆ ಮಾಜಿ ಸದಸ್ಯ ರಾಮಲಿಂಗಯ್ಯ, ಮುಖಂಡರಾದ ಭಾನುಪ್ರಕಾಶ್, ಕಿರಣ್‌ಕುಮಾರ್, ಪ್ರತಾಪ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net