ಸ್ವಾತಂತ್ರ್ಯ ಹೋರಾಟಗಾರ ಹನುಮಂತಯ್ಯ ನಿಧನ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹನುಮಂತಯ್ಯ
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹನುಮಂತಯ್ಯ
Published on
ಶ್ರೀರಂಗಪಟ್ಟಣ: ಪಟ್ಟಣದ ಗೋವಿಂದಪ್ಪ ನಿವಾಸಿ, ಸ್ವಾತಂತ್ರ್ಯ ಹೋರಾಟಗಾರ ಹನುಮಂತಯ್ಯ (98) ವಯೋಸಹಜ ಅನಾರೋಗ್ಯದಿಂದ ಮಂಗಳವಾರ ರಾತ್ರಿ ನಿಧನರಾದರು.
ಮೃತರಿಗೆ ಮೂವರು ಪುತ್ರರು, ಮೂವರು ಪುತ್ರಿಯರು ಇದ್ದಾರೆ. ಬ್ರಿಟಿಷರ ವಿರುದ್ಧ ಭಾರತ ಬಿಟ್ಟು ತೊಲಗಿ ಚಳವಳಿ ನಡೆಯುತ್ತಿದ್ದ ಸಮಯ 14 ವರ್ಷದ ಬಾಲಕರಾಗಿದ್ದ ವೇಳೆ ಹನುಮಂತಯ್ಯ ಅವರು ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಪಾಲ್ಗೊಂಡು ಹೋರಾಟ ಮಾಡಿದ್ದಾರೆ. ಈ ಕಾರಣಕ್ಕೆ ಬಂಧನಕ್ಕೂ ಒಳಗಾಗಿ 15 ದಿನಗಳ ಕಾಲ ಸೆರೆವಾಸ ಅನುಭವಿಸಿದ್ದರು. 2025 ಮತ್ತು 26ರ ಸಾಲಿನಲ್ಲಿ ಗಣರಾಜ್ಯೋತ್ಸವ ಸಂದರ್ಭದಲ್ಲಿ ತಾಲೂಕು ಆಡಳಿತದಿಂದ ಸ್ವಾತಂತ್ರ್ಯ ಹೋರಾಟಗಾರ ಹನುಮಂತಯ್ಯ ಅವರನ್ನು ಗೌರವಿಸಿ ಅಭಿನಂದಿಸಲಾಗಿತ್ತು. ಈಗ ಅವರ ನಿಧನ ಮೂಲಕ ಶ್ರೀರಂಗಪಟ್ಟಣದಲ್ಲಿ ಉಳಿದ್ದಿದ್ದ ಏಕೈಕ ಸ್ವಾತಂತ್ರ್ಯ ಹೋರಾಟಗಾರ ಕೊಂಡಿ ಕಳಚಿದಂತಾಗಿದೆ.
ಹನುಮಂತಯ್ಯ ಅವರ ನಿಧನದ ಹಿನ್ನೆಲೆಯಲ್ಲಿ ತಹಸೀಲ್ದಾರ್, ಪುರಸಭಾ ಮುಖ್ಯಾಧಿಕಾರಿ, ಪೊಲೀಸ್ ಅಧಿಕಾರಿಗಳು ಬುಧವಾರ ಅವರ ನಿವಾಸದಲ್ಲಿ ಗೌರವ ನಮನ ಸಲ್ಲಿಸಿದರು. ಪಟ್ಟಣ ಸಮೀಪದ ಉತ್ತರ ಕಾವೇರಿ ತೀರದ ಕಿರಂಗೂರು ಸ್ಮಶಾನದಲ್ಲಿ ಮಧ್ಯಾಹ್ನ ಅವರ ಅಂತಿಕ್ರಿಯೆಗೂ ಮುನ್ನ ಪೊಲೀಸರು ಶ್ರೀರಂಗಪಟ್ಟಣ ಟೌನ್ ಇನ್‌ಸ್ಪೆಕ್ಟರ್ ಬಿ.ಜಿ.ಕುಮಾರ್ ನೇತೃತ್ವದಲ್ಲಿ ಗೌರವ ಸಲ್ಲಿಸಿದರು.
ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ, ಪುರಸಭಾ ಮಾಜಿ ಅಧ್ಯಕ್ಷ ಎಂ.ಎಲ್.ದಿನೇಶ್ ಸೇರಿದಂತೆ ಹಲವು ಪ್ರಮುಖರು ಸಂತಾಪ ಸೂಚಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net