ಜಿ.ಮಾದೇಗೌಡ ಆಸ್ಪತ್ರೆ ಪುನಾರಂಭ

ಕೆ.ಎಂ.ದೊಡ್ಡಿಯ ಜಿ.ಮಾದೇಗೌಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ (ವೃತಿಕಾ ಹಾಸ್ಪಿಟಲ್ಸ್ ಪ್ರೈವೇಟ್ ಲಿಮಿಟೆಡ್‌ನ ಘಟಕ)ಯ ಪುನಾರಂಭದ ಅಂಗವಾಗಿ ಸೋಮವಾರ ಏರ್ಪಡಿಸಿದ್ದ ಧಾರ್ಮಿಕ ವಿಧಿವಿಧಾನಗಳನ್ನು  ಆಸ್ಪತ್ರೆ ಚೇರ್ಮನ್, ಎಂಎಲ್‌ಸಿ ಮಧು ಜಿ.ಮಾದೇಗೌಡ ನೆರವೇರಿಸಿದರು.
ಕೆ.ಎಂ.ದೊಡ್ಡಿಯ ಜಿ.ಮಾದೇಗೌಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ (ವೃತಿಕಾ ಹಾಸ್ಪಿಟಲ್ಸ್ ಪ್ರೈವೇಟ್ ಲಿಮಿಟೆಡ್‌ನ ಘಟಕ)ಯ ಪುನಾರಂಭದ ಅಂಗವಾಗಿ ಸೋಮವಾರ ಏರ್ಪಡಿಸಿದ್ದ ಧಾರ್ಮಿಕ ವಿಧಿವಿಧಾನಗಳನ್ನು ಆಸ್ಪತ್ರೆ ಚೇರ್ಮನ್, ಎಂಎಲ್‌ಸಿ ಮಧು ಜಿ.ಮಾದೇಗೌಡ ನೆರವೇರಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಎಂಎಲ್‌ಸಿ ಜಿ.ಮಧು ಮಾದೇಗೌಡ ಚಾಲನೆ
  • ಧಾರ್ಮಿಕ ವಿಧಿವಿಧಾನದೊಂದಿಗೆ ಕಾರ್ಯಾರಂಭ

ಕೆ.ಎಂ.ದೊಡ್ಡಿ:

ನನ್ನ ತಂದೆ, ಮಾಜಿ ಸಂಸದ ಜಿ.ಮಾದೇಗೌಡರ ಆಶಯದಂತೆ ಬಡವರು, ಜನಸಾಮಾನ್ಯರಿಗೆ ನುರಿತ ವೈದ್ಯರಿಂದ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುವ ಉದ್ದೇಶದೊಂದಿಗೆ ಜಿ.ಮಾದೇಗೌಡರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಪುನಾರಂಭ ಮಾಡಲಾಗಿದೆ ಎಂದು ಆಸ್ಪತ್ರೆ ಚೇರ್ಮನ್, ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ತಿಳಿಸಿದರು.

ಭಾರತೀ ಎಜುಕೇಷನ್ ಟ್ರಸ್ಟ್ ನೇತೃತ್ವದಲ್ಲಿ ಕೆ.ಎಂ.ದೊಡ್ಡಿಯ ಜಿ.ಮಾದೇಗೌಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ (ವೃತಿಕಾ ಹಾಸ್ಪಿಟಲ್ಸ್ ಪ್ರೈ.ಲಿ. ಘಟಕ)ಯ ಪುನಾರಂಭದ ಅಂಗವಾಗಿ ಸೋಮವಾರ ಏರ್ಪಡಿಸಿದ್ದ ಧಾರ್ಮಿಕ ವಿಧಿವಿಧಾನ ನೆರವೇರಿಸಿ ಮಾತನಾಡಿದರು.
ಗ್ರಾಮೀಣ ಜನರು ಉತ್ತಮ ಚಿಕಿತ್ಸೆಗಾಗಿ ದೊಡ್ಡ ನಗರಗಳಿಗೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಟ್ರಸ್ಟ್ ಸಹಯೋಗದೊಂದಿಗೆ ಉತ್ತಮ ಆರೋಗ್ಯ ಸೇವೆ ಪ್ರತಿಯೊಬ್ಬರಿಗೂ ಕೈಗೆಟುಕುವ ದರದಲ್ಲಿ ದೊರೆಯಬೇಕು ಎಂಬ ಧ್ಯೇಯದೊಂದಿಗೆ ಆಸ್ಪತ್ರೆ ಕಾರ್ಯಾರಂಭ ಮಾಡಲಾಗಿದೆ ಎಂದರು.
ಇದಕ್ಕೂ ಮುನ್ನ ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲಿ ಮೃತ್ಯುಂಜಯ ಹೋಮ, ನವಗ್ರಹ ಪೂಜೆ, ಲಕ್ಷ್ಮೀ ಪೂಜೆ ಹಾಗೂ ಗಣಪತಿ ಪೂಜೆಗಳನ್ನು ನೆರವೇರಿಸಲಾಯಿತು. ಟ್ರಸ್ಟ್ ಪದಾಧಿಕಾರಿಗಳು, ಗಣ್ಯರು ಹಾಗೂ ಸಾರ್ವಜನಿಕರು ಪೂಜೆಯಲ್ಲಿ ಭಾಗವಹಿಸಿ ಆಸ್ಪತ್ರೆ ಯಶಸ್ಸಿಗಾಗಿ ಪ್ರಾರ್ಥಿಸಿದರು.
ಕಾರ್ಯಕ್ರಮದಲ್ಲಿ ವೃತಿಕ ಆಸ್ಪತ್ರೆಯ ಡಾ.ವಿಜಯ್, ಭಾರತೀ ಶಿಕ್ಷಣ ಸಂಸ್ಥೆ ಕಾರ್ಯನಿರ್ವಾಹಕ ಟ್ರಸ್ಟಿ ಆಶಯ್ ಮಧು, ಕಾರ್ಯದರ್ಶಿಗಳಾದ ಬಿ.ಎಂ.ನಂಜೇಗೌಡ, ಗುರುದೇವರಹಳ್ಳಿ ಸಿದ್ದೇಗೌಡ, ಭಾರತೀ ಹೆಲ್ತ್ ಸೈನ್ಸ್ ನಿರ್ದೇಶಕ ಡಾ.ತಮಿಳ್‌ಮಣಿ, ಭಾರತೀ ಸ್ನಾತಕೋತ್ತರ ವಿಭಾಗದ ನಿರ್ದೇಶಕ ಪ್ರೊ.ಎಸ್.ನಾಗರಾಜು, ವಿವಿಧ ಅಂಗಸಂಸ್ಥೆಗಳ ಮುಖ್ಯಸ್ಥ ಡಾ.ಎಂ.ಎಸ್.ಮಹದೇವಸ್ವಾಮಿ, ಡಾ.ಚಂದನ್, ಡಾ.ಎಸ್.ಎಲ್.ಸುರೇಶ್, ಜಿ.ಕೃಷ್ಣ, ಸಿ.ವಿ.ಮಲ್ಲಿಕಾರ್ಜುನ, ಡಾ.ಬಾಲಸುಬ್ರಹ್ಮಣ್ಯ, ಡಾ.ಮಂಜು ಜೇಕಬ್, ಡಾ.ಮಹೇಶ್ ಕುಮಾರ್ ಲೋನಿ, ಜಿ.ಬಿ.ಪಲ್ಲವಿ, ಸಿ.ರಮ್ಯಾ, ಜಗದೀಶ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net