ತ್ಯಾಜ್ಯ ಸುರಕ್ಷಿತ ವಿಲೇವಾರಿಗೆ ಹೆಚ್ಚಿನ ಆದ್ಯತೆ ನೀಡಿ

ಮದ್ದೂರು ತಾಲೂಕಿನ ಹೂತಗೆರೆ ಗ್ರಾಮದಲ್ಲಿರುವ ಪಾರಂಪರಿಕ ತ್ಯಾಜ್ಯ ವಿಲೇವಾರಿ ಕಾಮಗಾರಿ ಹಾಗೂ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಬುಧವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಚಂದ್ರಶೇಖರ್, ಶಿವಕುಮಾರ್ ಬಿರಾದಾರ, ಅರ್ಚನಾ ಸೇರಿದಂತೆ ಇತರರು ಇದ್ದರು.
ಮದ್ದೂರು ತಾಲೂಕಿನ ಹೂತಗೆರೆ ಗ್ರಾಮದಲ್ಲಿರುವ ಪಾರಂಪರಿಕ ತ್ಯಾಜ್ಯ ವಿಲೇವಾರಿ ಕಾಮಗಾರಿ ಹಾಗೂ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಬುಧವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಚಂದ್ರಶೇಖರ್, ಶಿವಕುಮಾರ್ ಬಿರಾದಾರ, ಅರ್ಚನಾ ಸೇರಿದಂತೆ ಇತರರು ಇದ್ದರು.
Published on

ಮದ್ದೂರು:

ಸ್ವಚ್ಛ ಭಾರತ್ ಮಿಷನ್ (ನಗರ)-2.0 ಯೋಜನೆಯಡಿ ಘನ ತ್ಯಾಜ್ಯ ನಿರ್ವಹಣೆ ನಿಯಮಗಳು, ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ.ಕುಮಾರ ಬುಧವಾರ ತಾಲೂಕಿನ ಹೂತಗೆರೆ ಗ್ರಾಮದಲ್ಲಿರುವ ಪಾರಂಪರಿಕ ತ್ಯಾಜ್ಯ ವಿಲೇವಾರಿ ಕಾಮಗಾರಿ ಹಾಗೂ ಘನ ತ್ಯಾಜ್ಯ ನಿರ್ವಹಣಾ ಘಟಕದ ಸ್ಥಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಹಾಯಾನ ಪಾರಂಪರಿಕ ತ್ಯಾಜ್ಯ ವಿಲೇವಾರಿ ಕಾಮಗಾರಿಯ ಪ್ರಗತಿ, ಈಗಾಗಲೇ ಸಂಗ್ರಹವಾಗಿರುವ ಪಾರಂಪರಿಕ ತ್ಯಾಜ್ಯದ ವೈಜ್ಞಾನಿಕ ವಿಲೇವಾರಿ, ತ್ಯಾಜ್ಯ ಸಂಸ್ಕರಣಾ ಪ್ರಕ್ರಿಯೆ ಹಾಗೂ ಘಟಕದ ಒಟ್ಟಾರೆ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿದರು.
ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ, ಮರುಬಳಕೆ ಮಾಡಬಹುದಾದ ವಸ್ತುಗಳನ್ನು ಪ್ರತ್ಯೇಕಿಸಿ, ಉಳಿದ ತ್ಯಾಜ್ಯವನ್ನು ಪರಿಸರ ಸ್ನೇಹಿ ಹಾಗೂ ವೈಜ್ಞಾನಿಕ ವಿಧಾನದಲ್ಲಿ ವಿಲೇವಾರಿ ಮಾಡುವ ಪ್ರಕ್ರಿಯೆಯ ಕುರಿತು ಅಧಿಕಾರಿಗಳಿಂದ ಜಿಲ್ಲಾಧಿಕಾರಿಗಳು ಮಾಹಿತಿ ಪಡೆದರು.
ಮೂಲದಲ್ಲಿಯೇ ತ್ಯಾಜ್ಯ ವಿಂಗಡಣೆ, ಸಮರ್ಪಕ ಸಂಗ್ರಹಣೆ, ವೈಜ್ಞಾನಿಕ ಸಂಸ್ಕರಣೆ, ಮರುಬಳಕೆ ಹಾಗೂ ಸುರಕ್ಷಿತ ವಿಲೇವಾರಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೆ, ಘನ ತ್ಯಾಜ್ಯ ನಿರ್ವಹಣಾ ಘಟಕಗಳಲ್ಲಿ ಪರಿಸರ ಸಂರಕ್ಷಣೆ, ಸಾರ್ವಜನಿಕ ಆರೋಗ್ಯ ಹಾಗೂ ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶನ ನೀಡಿದರು.
2026ರ ಘನ ತ್ಯಾಜ್ಯ ನಿರ್ವಹಣಾ ನಿಯಮಗಳು ತ್ಯಾಜ್ಯವನ್ನು ಮೂಲದಲ್ಲಿಯೇ ಪ್ರತ್ಯೇಕಿಸುವುದು, ವೈಜ್ಞಾನಿಕ ಸಂಸ್ಕರಣೆ ಹಾಗೂ ಜವಾಬ್ದಾರಿಯುತ ವಿಲೇವಾರಿಗೆ ಹೆಚ್ಚಿನ ಒತ್ತು ನೀಡುತ್ತವೆ. ನಿಯಮಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನಗರ ಪ್ರದೇಶಗಳನ್ನು ತ್ಯಾಜ್ಯಮುಕ್ತ ನಗರಗಳನ್ನಾಗಿ ರೂಪಿಸುವುದು ಸ್ವಚ್ಛ ಭಾರತ್ ಮಿಷನ್(ನಗರ)-2.0ರ ಪ್ರಮುಖ ಉದ್ದೇಶವಾಗಿದೆ ಎಂದರು.
ಸ್ಥಳ ಪರಿಶೀಲನೆಯ ವೇಳೆ ಕಾಮಗಾರಿಗಳ ಗುಣಮಟ್ಟ, ಪ್ರಗತಿ, ತ್ಯಾಜ್ಯ ಸಂಸ್ಕರಣೆ ಮತ್ತು ವಿಲೇವಾರಿ ವ್ಯವಸ್ಥೆಯಲ್ಲಿರುವ ಅಂಶಗಳನ್ನು ಪರಿಶೀಲಿಸಿ, ಅಗತ್ಯವಿರುವ ಕಡೆಗಳಲ್ಲಿ ತ್ವರಿತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಯೋಜನಾ ನಿರ್ದೇಶಕರು, ಜಿಲ್ಲಾ ನಗರ ಅಭಿವೃದ್ಧಿ ಕೋಶದ ಚಂದ್ರಶೇಖರ್, ತಹಸೀಲ್ದಾರ್ ಶಿವಕುಮಾರ್ ಬಿರಾದಾರ, ಪರಿಸರ ಇಂಜಿನಿಯರ್ ಅರ್ಚನಾ ಹಾಗೂ ಪುರಸಭೆ ಅಧಿಕಾರಿಗಳು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net