ಕಾರಿನಲ್ಲಿದ್ದ ಚಿನ್ನಾಭರಣ ಕಳವು

ಕಳುವು
ಕಳುವು
Published on
ಮಳವಳ್ಳಿ: ಪಟ್ಟಣದ ಹೊರವಲಯದ ಕಲ್ಯಾಣ ಮಂಟಪವೊಂದರ ಆವರಣದಲ್ಲಿ ನಿಲ್ಲಿಸಿದ್ದ ಕಾರಿನ ಕಿಟಕಿ ಗಾಜು ಒಡೆದು ಚಿನ್ನಾಭರಣಗಳಿದ್ದ ಬ್ಯಾಗ್ ಕಳುವು ಮಾಡಲಾಗಿದೆ.
ಕನಕಪುರ ಪಟ್ಟಣದ ಸಿದ್ದೇಗೌಡ ಎಂಬುವರು ಭಾನುವಾರ ಪಟ್ಟಣದ ಹೊರವಲಯದಲ್ಲಿರುವ ಖಾಸಗಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆ ಕುಟುಂಬ ಸಮೇತ ಆಗಮಿಸಿದ್ದರು. ಆವರಣದಲ್ಲಿ ಕಾರು ನಿಲ್ಲಿಸಿ ಆರತಕ್ಷತೆ ಸಮಾರಂಭ ಮುಗಿಸಿಕೊಂಡು ಬಂದು ನೋಡುವಷ್ಟರಲ್ಲಿ ಕಾರಿನ ಗ್ಲಾಸ್ ಒಡೆದು ಹಾಕಿರುವುದು ಕಂಡುಬಂದಿದೆ. ಕೂಡಲೇ ಕಾರಿನ ಒಳಗೆ ನೋಡಿದಾಗ ಸೀಟಿನ ಮೇಲಿದ್ದ ಬ್ಯಾಗ್ ಕಳುವಾಗಿರುವುದು ಕಂಡು ಬಂದಿದೆ. ಬ್ಯಾಗ್‌ನಲ್ಲಿ ಸುಮಾರು 76 ಗ್ರಾಂ ತೂಕದ ಚಿನ್ನಾಭರಣಗಳಿದ್ದವು ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಸಿದ್ದೇಗೌಡ ತಿಳಿಸಿದ್ದಾರೆ. ಗ್ರಾಮಾಂತರ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net