ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಸಹಕಾರ

ಮಠದದೊಡ್ಡಿ ಹಾಗೂ ಮಡೇನಹಳ್ಳಿ ಗ್ರಾಮಗಳಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ ಸುಮಾರು 60 ಲಕ್ಷ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕದಲೂರು ಉದಯ್ ಭೂಮಿ ಪೂಜೆ ನೆರವೇರಿಸಿದರು. ಎ.ಎಸ್.ರಾಜೀವ್, ಜೋಗಿಗೌಡ, ಸಂದರ್ಶ ಇತರರು ಇದ್ದರು.
ಮಠದದೊಡ್ಡಿ ಹಾಗೂ ಮಡೇನಹಳ್ಳಿ ಗ್ರಾಮಗಳಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ ಸುಮಾರು 60 ಲಕ್ಷ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕದಲೂರು ಉದಯ್ ಭೂಮಿ ಪೂಜೆ ನೆರವೇರಿಸಿದರು. ಎ.ಎಸ್.ರಾಜೀವ್, ಜೋಗಿಗೌಡ, ಸಂದರ್ಶ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಕದಲೂರು ಉದಯ್ ವಿಶ್ವಾಸ
  • ರಸ್ತೆ, ಚರಂಡಿ ಕಾಮಗಾರಿಗೆ ಭೂಮಿಪೂಜೆ
ಕೆ.ಎಂ.ದೊಡ್ಡಿ: ಮುಂದಿನ ದಿನಗಳಲ್ಲಿ ನಮ್ಮ ಜಿಲ್ಲೆಯ ಶಾಸಕರೇ ಜಿಲ್ಲಾ ಉಸ್ತುವಾರಿ ಸಚಿವರಾಗಲಿದ್ದು, ಪ್ರಸ್ತುತ ಸಚಿವ ರಾಮಲಿಂಗಾರೆಡ್ಡಿ ಅವರನ್ನು ತಾತ್ಕಾಲಿಕವಾಗಿ ನೇಮಕ ಮಾಡಿದ್ದಾರೆ ಎಂದು ಶಾಸಕ ಕದಲೂರು ಉದಯ್ ತಿಳಿಸಿದರು.
ಸಮೀಪದ ಮಠದದೊಡ್ಡಿ ಹಾಗೂ ಮಡೇನಹಳ್ಳಿ ಗ್ರಾಮಗಳಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಸುಮಾರು 60 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಜಿಲ್ಲೆಯ ಅಭಿವೃದ್ಧಿ ಕಾರ್ಯಗಳು ಮುಂದುವರಿಸಲು ಮುಖ್ಯಮಂತ್ರಿ ಅವರು ಉಸ್ತುವಾರಿ ಸಚಿವರನ್ನು ತಾತ್ಕಾಲಿಕವಾಗಿ ನೇಮಕ ಮಾಡಿದ್ದಾರೆ ಎಂದರು.
ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿರುವ ಹಿನ್ನೆಲೆಯಲ್ಲಿ ಮದ್ದೂರು ತಾಲೂಕಿಗೆ ವಿಶೇಷ ಪ್ಯಾಕೇಜ್ ನೀಡಲಿದ್ದು, ಇನ್ನೂ ಸಾವಿರಾರು ಕೋಟಿ ರೂ. ಅನುದಾನ ನೀಡುವ ನಿರೀಕ್ಷೆಯಿದೆ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಸಹಕಾರ ಸಿಗಲಿದೆ ಎಂದು ಅಭಿಪ್ರಾಯಪಟ್ಟರು.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬಿಡದಿ ಟೌನ್‌ಶಿಪ್ ಪ್ರಾರಂಭ ಮಾಡಲು ಹೊರಟಿದ್ದರು. ಅದಕ್ಕೆ ಡಿ.ಕೆ. ಶಿವಕುಮಾರ್ ವೇಗ ನೀಡಿದ್ದು ಇಂತಹ ಅಭಿವೃದ್ಧಿ ಕಾರ್ಯವನ್ನು ಎಚ್.ಡಿ. ಕುಮಾರಸ್ವಾಮಿ ಕೈಯಲ್ಲಿ ಜೀರ್ಣಿಸಿಕೊಳ್ಳಲು ಆಗ್ತಿಲ್ಲ ಎಂದು ಕಿಡಿಕಾರಿದರು.
ಭಾರತೀನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ರಾಜೀವ್, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಜೋಗಿಗೌಡ, ನಿರ್ದೇಶಕ ಸಂದರ್ಶ, ಡಿಸಿಸಿ ಬ್ಯಾಂಕ್ ಮಾಜಿ ಮೇಲ್ವಿಚಾರಕ ಪುಟ್ಟಸ್ವಾಮಿ, ಮುಖಂಡರಾದ ಮಠದದೊಡ್ಡಿ ವೀರೇಂದ್ರ, ಶಿವಲಿಂಗ, ಮಧು, ಮಡೇನಹಳ್ಳಿ ಸಿದ್ದಲಿಂಗಪ್ರಸಾದ್, ಎಂ.ಎಸ್.ರುದ್ರಮಣಿ, ರುದ್ರಮುನಿ, ವಿಜಯ್ ಕುಮಾರ್, ಮಹೇಶ್, ಜಗದೀಶ್, ಶಿವಪ್ರಸಾದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net