ಅಬ್ದುಲ್ ಕಲಾಂ ವಸತಿ ಶಾಲೆಗೆ ಜಿಪಂ ಸಿಇಒ ಭೇಟಿ

ಆದಿಹಳ್ಳಿ ಗ್ರಾಮದಲ್ಲಿನ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗೆ ಮಂಡ್ಯ ಜಿಪಂ ಸಿಇಒ ನಂದಿನಿ ಭೇಟಿ ನೀಡಿ ಪರಿಶೀಲಿಸಿದರು.
ಆದಿಹಳ್ಳಿ ಗ್ರಾಮದಲ್ಲಿನ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗೆ ಮಂಡ್ಯ ಜಿಪಂ ಸಿಇಒ ನಂದಿನಿ ಭೇಟಿ ನೀಡಿ ಪರಿಶೀಲಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಹಾಸಿಗೆ ವ್ಯವಸ್ಥೆ, ಕುಡಿಯುವ ನೀರು, ಅಡುಗೆ ಕೋಣೆ ಪರಿಶೀಲನೆ
  • ರಂಗನಾಥಪುರ ಕ್ರಾಸ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆದಿಹಳ್ಳಿ ಗ್ರಾಮ
ಕೆ.ಆರ್.ಪೇಟೆ: ತಾಲೂಕಿನ ರಂಗನಾಥಪುರ ಕ್ರಾಸ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆದಿಹಳ್ಳಿ ಗ್ರಾಮದಲ್ಲಿನ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದೇ ವೇಳೆ ವಿದ್ಯಾರ್ಥಿ/ವಿದ್ಯಾರ್ಥಿನಿಯರ ಕೊಠಡಿಗಳಿಗೆ ಭೇಟಿ ನೀಡಿ ಹಾಸಿಗೆ ವ್ಯವಸ್ಥೆ, ಕುಡಿಯುವ ನೀರು, ಅಡುಗೆ ಕೋಣೆ, ದಾಸ್ತಾನು ಕೊಠಡಿ ಹಾಗೂ ಆಹಾರ ಸಾಮಗ್ರಿಗಳನ್ನು ಪರಿಶೀಲಿಸಿದರು. ಇದರೊಂದಿಗೆ ದ್ವಿತೀಯ ಪಿಯುಸಿಯ ವಿಜ್ಞಾನ ಪ್ರಯೋಗಾಲಯಕ್ಕೆ ಭೇಟಿ ನೀಡಿ ಜೀವಕೋಶವನ್ನು ಸೂಕ್ಷ್ಮದರ್ಶಕ ಯಂತ್ರದ ಮೂಲಕ ಪ್ರಾಯೋಗಿಕವಾಗಿ ಪರೀಕ್ಷಿಸುತ್ತಿರುವುದನ್ನು ವೀಕ್ಷಿಸಿದರಲ್ಲದೆ, ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆ ಎಂದರು.
ಶಾಲೆಯಲ್ಲಿನ ಗಣಕಯಂತ್ರ ಕೊಠಡಿಯಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಸಿಇಒ, ಭವಿಷ್ಯದಲ್ಲಿ ಯಾವ ರೀತಿಯ ಸೇವೆಗೆ ಸೇರಬೇಕೆಂಬ ಕನಸು ಹೊಂದಿದ್ದೀರಿ ಎಂದು ಪ್ರಶ್ನಿಸಿದರು. ಅಲ್ಲದೆ ಕನಸನ್ನು ಸಾಕಾರಗೊಳಿಸಿಕೊಳ್ಳಲು ಯಾವ ರೀತಿಯ ಪ್ರಯತ್ನ ಮಾಡಬೇಕು ಎಂಬುದರ ಕುರಿತು ಸಲಹೆ ನೀಡಿದರು.
ಸರ್ಕಾರ ನೀಡುತ್ತಿರುವ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಅಲ್ಪಸಂಖ್ಯಾತರಿಗೆ ಸಿಬಿಎಸ್‌ಇ ಪಠ್ಯಕ್ರಮ ಇರುವ ಶಾಲೆ ಇದಾಗಿದ್ದು, ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸ ಮಾಡಬೇಕು ಎಂದು ಪ್ರೋತ್ಸಾಹಿಸಿದರು.
ಉಜ್ವಲ ಭವಿಷ್ಯ ರೂಪಿಸುವಲ್ಲಿ ವಿದ್ಯಾಭ್ಯಾಸ ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾಗಿ ಜೀವನದ ಗುರಿ ತಲುಪಲು ಹಾಗೂ ಕನಸನ್ನು ಸಕಾರಗೊಳಿಸಿಕೊಳ್ಳಲು ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ಮಂಡ್ಯ ಉಪವಿಭಾಗದ ತಾಲೂಕು ವಿಸ್ತರಣಾಧಿಕಾರಿ ರುದ್ರೇಶ್, ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಪ್ರಾಂಶುಪಾಲ ಮಹೇಶ್ ಇತರರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net