ತಾಂತ್ರಿಕ ಶಿಕ್ಷಣದತ್ತ ಆಸ್ಥೆ ಉತ್ತಮ ಬೆಳವಣಿಗೆ: ಕಂಪ್ಯೂಟರ್ ವಿಜ್ಞಾನಿ ಪ್ರೊ.ಸುಂದರ್‌ರಾಜಾ ಹೇಳಿಕೆ

ಮಂಡ್ಯ ತಾಲೂಕು ಸಿದ್ದಯ್ಯನಕೊಪ್ಪಲು ಗೇಟ್ ಸಮೀಪವಿರುವ ಕಾವೇರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು.
ಮಂಡ್ಯ ತಾಲೂಕು ಸಿದ್ದಯ್ಯನಕೊಪ್ಪಲು ಗೇಟ್ ಸಮೀಪವಿರುವ ಕಾವೇರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು.
Published on

ಪ್ರಮುಖ ಮುಖ್ಯಾಂಶಗಳು

  • ಕಾವೇರಿ ಮಹಾವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ
  • ತಾಲೂಕಿನ ಸಿದ್ದಯ್ಯನಕೊಪ್ಪಲು ಗೇಟ್ ಸಮೀಪವಿರುವ ಶಿಕ್ಷಣ ಸಂಸ್ಥೆ
ಮಂಡ್ಯ: ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿನಿಯರೇ ಹೆಚ್ಚು ತಾಂತ್ರಿಕ ಪದವಿ ಪಡೆಯುತ್ತಿರುವುದು ಒಳ್ಳೆಯ ಬೆಳವಣಿಗೆ. ಅದರಲ್ಲೂ ಗ್ರಾಮಾಂತರ ಪ್ರದೇಶದ ಹೆಣ್ಣು ಮಕ್ಕಳು ವಿದ್ಯೆ ಕಲಿಯುತ್ತಿರುವುದು ಶ್ಲಾಘನೀಯ ಎಂದು ಇಂಡಿಯನ್-ಅಮೆರಿಕನ್ ಕಂಪ್ಯೂಟರ್ ವಿಜ್ಞಾನಿ ಪ್ರೊ.ಸುಂದರ್‌ರಾಜಾ ಸೀತಾರಾಮ ಅಯ್ಯಂಗಾರ್ ತಿಳಿಸಿದರು.
ತಾಲೂಕಿನ ಸಿದ್ದಯ್ಯನಕೊಪ್ಪಲು ಗೇಟ್ ಸಮೀಪವಿರುವ ಕಾವೇರಿ ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಮಹಿಳೆಯರು ಎಲ್ಲ ಕ್ಷೇತ್ರದಲ್ಲೂ ಕೆಲಸ ಮಾಡಬೇಕು. ಅದರಲ್ಲೂ ಗ್ರಾಮೀಣ ಭಾಗದ ಹೆಣ್ಣು ಮಕ್ಕಳು ತಾಂತ್ರಿಕ, ವೈದ್ಯಕೀಯ ಸೇರಿದಂತೆ ಉನ್ನತ ಪದವಿಗಳನ್ನು ಪಡೆದು ಕೆಲಸ ಮಾಡುವುದು ಅಗತ್ಯ ಎಂದು ಹೇಳಿದರು.
ಮಹಿಳೆ ಕಲಿತರೆ ಇಡೀ ಮನೆಯೇ ವಿದ್ಯಾವಂತ ಕುಟುಂಬವಾದಂತೆ. ಮಹಿಳೆಯರು ಹೆಚ್ಚು ಬುದ್ಧಿವಂತರು. ಅವರು ಎಲ್ಲ ಕ್ಷೇತ್ರಗಲ್ಲೂ ತೊಡಗಿಸಿಕೊಂಡಲ್ಲಿ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ. ಕೇವಲ ಭಾರತದಲ್ಲಿ ಮಾತ್ರವಲ್ಲದೆ, ಅಮೆರಿಕದಲ್ಲೂ ಸಹ ಗ್ರಾಮೀಣ ಭಾಗದ ಮಹಿಳೆಯರಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಅಲ್ಲೂ ಸಹ ಸಾಕಷ್ಟು ಹಳ್ಳಿಗಳಿವೆ. ಅದನ್ನು ನಾನು ನೋಡಿದ್ದೇನೆ. ವಿದ್ಯಾರ್ಥಿಗಳು ಕೇವಲ ಪದವಿ ಪಡೆದರಷ್ಟೇ ಸಾಲದು, ಅದಕ್ಕೆ ಪೂರಕವಾಗಿ ತಮ್ಮನ್ನು ತಾವು ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು. ಉದ್ಯಮಿಗಳಾಗಬೇಕು. ಆ ಮೂಲಕ ಸಾಕಷ್ಟು ಜನರಿಗೆ ಉದ್ಯೋಗ ಕೊಡುವಂತಹ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಕಾವೇರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಒಳ್ಳೆಯ ಸೌಲಭ್ಯ ಕಲ್ಪಿಸುತ್ತಿದೆ. ಸ್ಕಿಲ್ ಡೆವಲಪ್‌ಮೆಂಟ್‌ಗಾಗಿ ಪ್ಲೇಸ್‌ಮೆಂಟ್ ಟ್ರೈನಿಂಗ್ ನೀಡುತ್ತಿದೆ. ಈಗಾಗಲೇ ಅಂತಿಮ ವರ್ಷದ 110 ವಿದ್ಯಾರ್ಥಿಗಳು ಉದ್ಯೋಗಾವಕಾಶ ಪಡೆದುಕೊಂಡಿದ್ದಾರೆ. ಕಂಪನಿಗಳೊಡನೆ ಹಾಗೂ ಇಂಡೋನೇಷಿಯಾದ ವಿವಿ ಉನ್ತಾರ್‌ನೊಂದಿಗೆ ಎಂಒಯುಗೆ ಸಹಿ ಮಾಡಿದ್ದಾರೆ. ಇದು ವಿದ್ಯಾರ್ಥಿಗಳಿಗಾಗಿ ಮಾಡಿರುವ ಒಳ್ಳೆಯ ಕೆಲಸವಾಗಿದೆ ಎಂದು ಶ್ಲಾಘಿಸಿದರು.
ಕಾವೇರಿ ತಾಂತ್ರಿಕ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಬಿ.ಜಿ.ಸಂಗಮೇಶ್ವರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಡಾ.ಸಿ.ಜೆ.ಗಂಗಾಧರಗೌಡ, ಪ್ರಾಂಶುಪಾಲ ಡಾ.ಎ.ಎಸ್.ಶ್ರೀಕಂಠಪ್ಪ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net