590 ಗ್ರಾಮ ಪಂಚಾಯಿತಿ ಸಿಬ್ಬಂದಿ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯದಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವದಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಅನುಮೋದನೆ ಆದೇಶ ಪತ್ರ ವಿತರಿಸಲಾಯಿತು.
ಮಂಡ್ಯದಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವದಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಅನುಮೋದನೆ ಆದೇಶ ಪತ್ರ ವಿತರಿಸಲಾಯಿತು.
Published on

ಪ್ರಮುಖ ಮುಖ್ಯಾಂಶಗಳು

  • 2017 ಅ.31ಕ್ಕೂ ಪೂರ್ವದಲ್ಲಿ ನೇಮಕಗೊಂಡಿರುವ ಸಿಬ್ಬಂದಿ
  • ನೀರುಗಂಟಿ, ಸ್ವಚ್ಛತಾಗಾರ, ಅಟೆಂಡರ್ ಹುದ್ದೆ
  • ಆದೇಶ ಪ್ರತಿ ವಿತರಿಸಿದ ಸಚಿವರು
ಮಂಡ್ಯ: ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ 2017 ಅ.31ಕ್ಕೂ ಪೂರ್ವದಲ್ಲಿ ನೇಮಕಗೊಂಡು ನೀರುಗಂಟಿ, ಸ್ವಚ್ಛತಾಗಾರ, ಅಟೆಂಡರ್ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 590 ಸಿಬ್ಬಂದಿಗೆ ಅನುಮೋದನೆ ನೀಡಲಾಗಿದೆ.
ನಗರದ ಸರ್.ಎಂ.ವಿಶ್ವೇಶ್ವಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸಿಬ್ಬಂದಿಗೆ ಆದೇಶ ಪ್ರತಿ ವಿತರಿಸಿದರು. ಬಳಿಕ ಮಾತನಾಡಿ, ಸರ್ಕಾರದ ನಿರ್ದೇಶನದಂತೆ ಗ್ರಾಮ ಪಂಚಾಯಿತಿಯ ಅರ್ಹ ಸಿಬ್ಬಂದಿಗೆ ಅನುಮೋದನೆ ನೀಡುವಂತೆ ಜಿಪಂ ಸಿಇಒ ಅವರಿಗೆ ಸೂಚಿಸಲಾಗಿತ್ತು. ಅದರಂತೆ ಅತ್ಯಂತ ಪಾರದರ್ಶಕವಾಗಿ ಅನುಮೋದನೆ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ಮಾತನಾಡಿ, ಸರ್ಕಾರದ ಆದೇಶದಂತೆ 2023 ನ.18ರಂತೆ ನೌಕರರ ಅನುಮೋದನೆ ಪ್ರಕ್ರಿಯೆ ಕೈಗೊಳ್ಳಲು ಹಾಗೂ ಅತ್ಯಂತ ಪಾರದರ್ಶಕವಾಗಿ ನಡೆಸಲು ಒಟ್ಟು ನಾಲ್ಕು ಹಂತಗಳಲ್ಲಿ ನೌಕರರ ದಾಖಲಾತಿಗಳ ಪರಿಶೀಲನಾ ಕಾರ್ಯ ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಗೆ ಸಹಕರಿಸಿದ ಜಿಲ್ಲೆಯ ಎಲ್ಲ ಶಾಸಕರು ಮತ್ತು ಆಡಳಿತ ವರ್ಗಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ನಂತರದಲ್ಲಿ ತಾಲೂಕುವಾರು ಪ್ರಸ್ತಾವನೆಗಳನ್ನು ಪ್ರತ್ಯೇಕ ಸಮಿತಿಯಿಂದ ಪರಿಶೀಲಿಸಿ, ನಡಾವಳಿಯಲ್ಲಿ ದಾಖಲಿಸಿ ಅಂತಿಮವಾಗಿ ಜಿಲ್ಲಾಮಟ್ಟದ ಅಧಿಕಾರಿಗಳ ತಂಡದಿಂದ ಮರುಪರಿಶೀಲನೆಗೆ ಒಳಪಡಿಸಿ ಅರ್ಹ ನೌಕರರ ಅನುಮೋದನೆಯ ತಾತ್ಕಾಲಿಕ ಪಟ್ಟಿಯನ್ನು ಸಿದ್ದಪಡಿಸಲಾಗಿದೆ. ನಂತರ ಪಟ್ಟಿಯನ್ನು ಜಿಪಂ ಮತ್ತು ಎಲ್ಲ ತಾಪಂ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಆಕ್ಷೇಪಣೆ ಸಲ್ಲಿಕೆ ಅವಧಿ ಪೂರ್ಣಗೊಂಡ ನಂತರ 590 ಸಿಬ್ಬಂದಿಗೆ ಅನುಮೋದನೆ ನೀಡಲಾಗಿದ್ದು, ಆದೇಶದ ಪ್ರತಿಗಳನ್ನು ವಿತರಿಸಲಾಗಿದೆ ಎಂದು ವಿವರಿಸಿದರು.
ಶಾಸಕ ಪಿ.ರವಿಕುಮಾರ್ ಗಣಿಗ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಎಸ್ಪಿ ಡಾ.ವಿ.ಜೆ.ಶೋಭಾರಾಣಿ, ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಚ್ಚಿನ್ ಚಲುವರಾಯಸ್ವಾಮಿ, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ, ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್, ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮೀ ರಘುನಂದನ್, ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ.ಶಿವಲಿಂಗಯ್ಯ, ತಾಪಂ ಇಒ ಲೋಕೇಶ್‌ಮೂರ್ತಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net