ಮಳವಳ್ಳಿ ತಾಲೂಕಿನಲ್ಲಿ ಗಣೇಶೋತ್ಸವ ವಿಜೃಂಭಣೆ

ಮಳವಳ್ಳಿ ತಾಲೂಕಿನ ರಾವಣಿ ಗ್ರಾಮದ ಕೆಂಪೇಗೌಡ ಗೆಳೆಯರ ಬಳಗದ ವತಿಯಿಂದ ಗ್ರಾಮದ ಪ್ರಮುಖ ವೃತ್ತದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಗದ ಪದಾಧಿಕಾರಿಗಳು ಇದ್ದರು.
ಮಳವಳ್ಳಿ ತಾಲೂಕಿನ ರಾವಣಿ ಗ್ರಾಮದ ಕೆಂಪೇಗೌಡ ಗೆಳೆಯರ ಬಳಗದ ವತಿಯಿಂದ ಗ್ರಾಮದ ಪ್ರಮುಖ ವೃತ್ತದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಗದ ಪದಾಧಿಕಾರಿಗಳು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮನೆ-ಮನೆಗಳಲ್ಲಿ ವಿನಾಯಕನ ಆರಾಧನೆ
ಮಳವಳ್ಳಿ : ತಾಲೂಕಿನಾದ್ಯಂತ ಸೋಮವಾರ ಗೌರಿ-ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.
ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಮನೆ-ಮನೆಗಳಲ್ಲಿ ಗೌರಿ-ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವಿಶೇಷ ಪೂಜೆ ಸಲ್ಲಿಸಿ ಹಬ್ಬ ಆಚರಿಸಲಾಯಿತು. ಮಹಿಳೆಯರು ಹೊಸ ಸೀರೆ ಧರಿಸಿ ಗೌರಿಗೆ ಬಾಗಿನ ಅರ್ಪಿಸಿ ಸಂಭ್ರಮಿಸಿದರು.
ಪಟ್ಟಣದಲ್ಲಿ ವಿವಿಧ ವಿನಾಯಕ ಗೆಳೆಯರ ಬಳಗ ವತಿಯಿಂದ ಸಾರ್ವಜನಿಕ ಗಣೇಶೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಅದೇ ರೀತಿ ರಾಗಿಬೊಮ್ಮನಹಳ್ಳಿ ಗ್ರಾಮದಲ್ಲಿ ಏಕದಂತ ಗೆಳೆಯರ ಬಳಗ ಹಾಗೂ ರಾವಣಿ ಗ್ರಾಮದ ಕೆಂಪೇಗೌಡ ಗೆಳೆಯರ ಬಳಗ ಸೇರಿದಂತೆ ತಾಲೂಕಿನ ಹಲವು ಸಂಘ-ಸಂಸ್ಥೆಗಳು, ಯುವಕ ಮಂಡಳಿಗಳು ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಿ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಹಬ್ಬವನ್ನು ಯಶಸ್ವಿಯಾಗಿ ನೆರವೇರಿಸಿದವು.
ಗಣೇಶ ಮೂರ್ತಿಗಳಿಗೆ ಹೂವಿನ ಅಲಂಕಾರ ಮಾಡಿ, ಮೋದಕ, ಹಣ್ಣು-ಕಾಯಿ ನೈವೇದ್ಯ ಅರ್ಪಿಸಿ ಪೂಜೆ ಸಲ್ಲಿಸಲಾಯಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಬಂದೋಬಸ್ತ್ ಕೈಗೊಂಡಿತ್ತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net