ಹಸಿರು ಕ್ರಾಂತಿಯಿಂದ ಕೃಷಿಯಲ್ಲಿ ಮಹತ್ತರ ಬದಲಾವಣೆ

ಮಳವಳ್ಳಿಯ ತಾಲೂಕು ಕಚೇರಿ ಸಭಾಂಗಣದಲ್ಲಿ ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಮ್ ಅವರ ಪುಣ್ಯಸ್ಮರಣೆ ಆಚರಿಸಲಾಯಿತು. ಎಸ್.ವಿ.ಲೋಕೇಶ್,  ಎಚ್.ಜಿ.ಶ್ರೀನಿವಾಸ್, ಸಂತೋಷ್‌ಕುಮಾರ್, ಎಸ್.ಜಯಾನಂದ್, ಡಾ.ಪಿ.ವೀರಭದ್ರಪ್ಪ, ಸಿ.ಇ.ನಂಜಾಮಣಿ, ಮಂಜುನಾಥ್, ರಾಮಕೃಷ್ಣ ಇತರರಿದ್ದರು.

Published on
ಮಳವಳ್ಳಿ: ಬಾಬೂಜಿ ಅವರು ಕೃಷಿ ಸಚಿವರಾಗಿದ್ದಾಗ ದೇಶದಲ್ಲಿ ದೊಡ್ಡ ಬದಲಾವಣೆ ತಂದರು. ಅವರ ಆದರ್ಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ಎಸ್.ವಿ.ಲೋಕೇಶ್ ತಿಳಿಸಿದರು.
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ತಾಲೂಕು ಆಡಳಿತ ವತಿಯಿಂದ ಆಯೋಜಿಸಿದ್ದ ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಮ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಭಾರತದಲ್ಲಿ ತೀವ್ರ ಬರಗಾಲ ಮತ್ತು ಆಹಾರದ ಕೊರತೆ ಇದ್ದಾಗ ಕೃಷಿ ಉತ್ಪಾದನೆಯನ್ನು ಹೆಚ್ಚಿಸಿ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕಗಳ ಬಳಕೆಗೆ ಆದ್ಯತೆ ನೀಡಿದರು. ನೀರಾವರಿ ಸೌಲಭ್ಯಗಳ ವಿಸ್ತರಣೆ ಹಾಗೂ ಸುಧಾರಿತ ಕೃಷಿ ಉಪಕರಣಗಳನ್ನು ರೈತರಿಗೆ ತಲುಪಿಸುವ ಮೂಲಕ ಕೃಷಿ ಕ್ಷೇತ್ರವನ್ನು ಸಾಕಷ್ಟು ಅಭಿವೃದ್ಧಿ ಪಡಿಸಿ ರೈತರ ಉತ್ಪಾದಕತೆಯನ್ನು ಹೆಚ್ಚಿಸಿದರು ಎಂದು ಬಣ್ಣಿಸಿದರು.
ತಾಲೂಕು ಪಂಚಾಯಿತಿ ಇಒ ಎಚ್.ಜಿ.ಶ್ರೀನಿವಾಸ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ್‌ಕುಮಾರ್, ಸಿಪಿಐ ಎಸ್.ಜಯಾನಂದ್, ತಾಲೂಕು ವೈದ್ಯಾಧಿಕಾರಿ ಡಾ.ಪಿ.ವೀರಭದ್ರಪ್ಪ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ.ಇ.ನಂಜಾಮಣಿ, ಪಶು ಆಡಳಿತ ವೈದ್ಯಾಧಿಕಾರಿ ಮಂಜುನಾಥ್, ಸಹಕಾರ ಇಲಾಖೆಯ ರಾಮಕೃಷ್ಣ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net