ಜನರ ಸಮಸ್ಯೆಗೆ ದನಿಯಾದ ಕುಂದುಕೊರತೆ ಸಭೆ

ಮಳವಳ್ಳಿ ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಸಾರ್ವಜನಿಕರ ಕುಂದು ಕೊರತೆ ಸಭೆಯಲ್ಲಿ  ತಹಸೀಲ್ದಾರ್ ಡಾ.ಎಸ್.ವಿ.ಲೋಕೇಶ್ ಜನರ ಸಮಸ್ಯೆ ಆಲಿಸಿದರು. ಕಂದಾಯ ಇಲಾಖೆ ಅಧಿಕಾರಿಗಳು ಇದ್ದರು.
ಮಳವಳ್ಳಿ ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಸಾರ್ವಜನಿಕರ ಕುಂದು ಕೊರತೆ ಸಭೆಯಲ್ಲಿ ತಹಸೀಲ್ದಾರ್ ಡಾ.ಎಸ್.ವಿ.ಲೋಕೇಶ್ ಜನರ ಸಮಸ್ಯೆ ಆಲಿಸಿದರು. ಕಂದಾಯ ಇಲಾಖೆ ಅಧಿಕಾರಿಗಳು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕುಂದುಕೊರತೆ ಸಭೆ
ಮಳವಳ್ಳಿ: ತಾಲೂಕು ಆಡಳಿತದಿಂದ ತಹಸೀಲ್ದಾರ್ ಡಾ.ಎಸ್.ವಿ.ಲೋಕೇಶ್ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕರ ಕುಂದುಕೊರತೆ ಸಭೆಗೆ ಕಂದಾಯ ಇಲಾಖೆಯ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಜನರು ಅಹವಾಲುಗಳ ಅರ್ಜಿಗಳನ್ನು ಸಲ್ಲಿಸಿದರು.
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಕುಂದುಕೊರತೆ ಸಭೆಗೆ ತಾಲೂಕಿನ ವಿವಿಧ ಗ್ರಾಮಗಳಿಂದ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡಿದ್ದು, ಸಭೆಯಲ್ಲಿ ಅರಣ್ಯ ಇಲಾಖೆಯವರು ಕಂದಾಯ ಭೂಮಿಯನ್ನು ವಶಪಡಿಸಿಕೊಂಡಿದ್ದಾರೆ, ಜಮೀನು ಅತಿಕ್ರಮಣವಾಗಿದೆ, ಆರ್‌ಟಿಸಿ, ಎಂಆರ್ ಗಳಲ್ಲಿ ತಿದ್ದುಪಡಿ ಮಾಡಬೇಕೆಂಬುದು ಸೇರಿದಂತೆ ವಿವಿಧ ರೀತಿಯ ಸಮಸ್ಯೆಗಳ ನಿವಾರಣೆಗಾಗಿ ಮನವಿ ಮಾಡಿಕೊಂಡರು.
ಸಾರ್ವಜನಿಕರಿಂದ ಸಮಸ್ಯೆ ಆಲಿಸುವುದರ ಜತೆಗೆ ಅರ್ಜಿ ಸ್ವೀಕರಿಸಿದ ನಂತರ ತಹಸೀಲ್ದಾರ್ ಲೋಕೇಶ್ ಮಾತನಾಡಿ, ಇಂದಿನ ಸಭೆಯಲ್ಲಿ ಕಂದಾಯ ಇಲಾಖೆ ವಿವಿಧ ವಿಭಾಗಗಳಿಗೆ ಸಂಬಂಧಿಸಿದ ಸುಮಾರು 75 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಇವುಗಳ ಪೈಕಿ ಕೆಲ ಸಣ್ಣಪುಟ್ಟ ಲೋಪಗಳಿರುವ ಸಮಸ್ಯೆಗಳ ಅರ್ಜಿಗಳನ್ನು ಸ್ಥಳದಲ್ಲೇ ಪರಿಹರಿಸಲಾಗಿದೆ. ಉಳಿದ ಅರ್ಜಿಗಳಿಗೆ ವಾರದ ಕಾಲಮಿತಿಯೊಳಗೆ ನಿಯಮ ಅನುಸಾರವಾಗಿ ವಿಲೇವಾರಿ ಮಾಡಲಾಗುವುದು ಎಂದರು.
ಕಾಡಂಚಿನ ಗ್ರಾಮಗಳಲ್ಲಿನ ಕಂದಾಯ ಭೂಮಿ ಅಕ್ರಮ ಪರಭಾರೆಯಾಗಿರುವುದು ಮತ್ತು ಕೆಲ ಫಲಾನುಭವಿಗಳ ಜಮೀನಿನ ನಡುವೆ ಅರಣ್ಯ ಇಲಾಖೆ ಟ್ರಂಚ್ ತೆಗೆದಿದ್ದಾರೆಂಬ ಆರೋಪಗಳು ಕೇಳಿಬಂದಿವೆ. ಪ್ರಸ್ತುತ ಸರ್ವೇ ಕಾರ್ಯ ಪ್ರಗತಿಯಲ್ಲಿದ್ದು, ಕೆಲವೇ ದಿನಗಳಲ್ಲಿ ಗೊಂದಲಗಳಿಗೆ ಕಾನೂನು ಪ್ರಕಾರ ಪರಿಹಾರ ಸಿಗಲಿದೆ. ಜತೆಗೆ ಸರ್ಕಾರಿ ಭೂಮಿ ಅಕ್ರಮವಾಗಿ ಅತಿಕ್ರಮವಾಗಿದ್ದರೂ ತೆರವುಗೊಳಿಸಿ ಸ್ವಾಧೀನಕ್ಕೆ ಪಡೆಯಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಬಸವನ ಬೆಟ್ಟದಲ್ಲಿ ಬಸವೇಶ್ವರ ದೇವರ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಈಗಾಗಲೇ ಸ್ಥಳ ಪರಿಶೀಲನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ವಸ್ತುಸ್ಥಿತಿ ವರದಿ ನೀಡಲಾಗಿದೆ. ಜಿಲ್ಲಾಧಿಕಾರಿಗಳ ಮುಂದಿನ ಆದೇಶದಂತೆ ಕ್ರಮ ವಹಿಸಲಾಗುವುದು ಎಂದ ಅವರು, ನಮ್ಮ ಇಲಾಖೆಯಲ್ಲಿನ ಸಾರ್ವಜನಿಕರ ಸಮಸ್ಯೆಗಳಿ ತ್ವರಿತವಾಗಿ ಸ್ಪಂದಿಸಬೇಕೆಂಬ ಉದ್ದೇಶದಿಂದ ಕುಂದುಕೊರತೆ ಸಭೆಯನ್ನು ಕರೆಯಲಾಗಿತ್ತು. ಇಂದಿನ ಸಭೆ ಯಶಸ್ವಿಯಾಗಿ ನಡೆದಿದ್ದು, ಮುಂದಿನ ದಿನಗಳಲ್ಲಿ ತಿಂಗಳಿಗೆ ಒಮ್ಮೆ ಹೋಬಳಿವಾರು ಸಭೆಗಳನ್ನು ನಡೆಸಲಾಗುವುದು. ಇದಕ್ಕೆ ಜನ ಸಾಮಾನ್ಯರ ಸಹಕಾರ ಅತ್ಯಗತ್ಯ ಎಂದರು.
ಸಭೆಯಲ್ಲಿ ಸಭೆಯಲ್ಲಿ ರೈತ ಸಂಘದ ರಾಜ್ಯ ಕಾರ್ಯದರ್ಶಿ ಶಿವನಂಜಯ್ಯ, ತಾಲೂಕು ಅಧ್ಯಕ್ಷ ಕರಿಯಪ್ಪ ಸೇರಿದಂತೆ ಶಿರಸ್ತೇದಾರ್‌ರಾದ ಗುರುಪ್ರಸಾದ್, ನಾಗಮಣಿ ಹಾಗೂ ತಾಲೂಕಿನ ಎಲ್ಲ ರಾಜಶ್ವ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು ಕಂದಾಯ ಇಲಾಖೆ ನೌಕರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net